ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉಪ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುವುದು ಉತ್ತಮ: ಖರ್ಗೆ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 25 : ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನಗೊಂಡು ಎರಡು ತಿಂಗಳು ಕಳೆಯುತ್ತಾ ಬಂತು. ಉಭಯ ಪಕ್ಷಗಳ ನಾಯಕರ ನಡುವೆ ವಾಕ್ಸಮರ ನಡೆಯುತ್ತಿದೆ. ಉಪ ಚುನಾವಣೆಯಲ್ಲಿ ಮೈತ್ರಿ ಬೇಡ ಎಂಬ ವಾದವೂ ಕೇಳಿ ಬರುತ್ತಿದೆ.

ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, "ಉಪ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡರೆ ಉತ್ತಮ" ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಉಪ ಚುನಾವಣೆ; ಒಂದು ಕ್ಷೇತ್ರದಲ್ಲಿ ಬಿಜೆಪಿಗೆ ಸುಲಭದ ಗೆಲುವು!ಉಪ ಚುನಾವಣೆ; ಒಂದು ಕ್ಷೇತ್ರದಲ್ಲಿ ಬಿಜೆಪಿಗೆ ಸುಲಭದ ಗೆಲುವು!

Mallikarjun Kharge Bats Congress JDS Alliance In By election

"ಎರಡೂ ಪಕ್ಷಗಳು ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಿದರೆ ಉತ್ತಮ. ಆದರೆ, ಎರಡೂ ಪಕ್ಷಗಳು ಸ್ವತಂತ್ರವಾಗಿ ಕಣಕ್ಕಿಳಿಯುವುದಾಗಿ ಘೋಷಣೆ ಮಾಡಿವೆ. ಇದಕ್ಕಿಂತ ಭಿನ್ನವಾದದ್ದನ್ನು ಹೇಗೆ ಹೇಳಲಿ?" ಎಂದರು.

15 ಕ್ಷೇತ್ರದ ಉಪ ಚುನಾವಣೆ; ಕಾಂಗ್ರೆಸ್‌-ಜೆಡಿಎಸ್ ಮೈತ್ರಿ ಇಲ್ಲ?15 ಕ್ಷೇತ್ರದ ಉಪ ಚುನಾವಣೆ; ಕಾಂಗ್ರೆಸ್‌-ಜೆಡಿಎಸ್ ಮೈತ್ರಿ ಇಲ್ಲ?

15 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಅಕ್ಟೋಬರ್ 21ರಂದು ನಡೆಯಲಿದೆ. ಜೆಡಿಎಸ್ ಮತ್ತು ಕಾಂಗ್ರೆಸ್ ಸ್ವತಂತ್ರವಾಗಿ ಚುನಾವಣೆ ಎದುರಿಸುವುದಾಗಿ ಹೇಳಿವೆ. 2019ರ ಲೋಕಸಭಾ ಚುನಾವಣೆಯಲ್ಲಿ ಎರಡೂ ಪಕ್ಷಗಳು ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಿದ್ದರೂ ಕೇವಲ ಒದೊಂದು ಸೀಟು ಪಡೆಯಲು ಮಾತ್ರ ಸಾಧ್ಯವಾಗಿತ್ತು.

ಉಪ ಚುನಾವಣೆ: ಮೂಲ ಬಿಜೆಪಿಗರ ಅತೃಪ್ತಿ ಶಮನಕ್ಕೆ ತಂಡ ರಚನೆಉಪ ಚುನಾವಣೆ: ಮೂಲ ಬಿಜೆಪಿಗರ ಅತೃಪ್ತಿ ಶಮನಕ್ಕೆ ತಂಡ ರಚನೆ

ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಈಗಾಗಲೇ ಮೈತ್ರಿಯ ಸಾಧ್ಯತೆಯನ್ನು ತಳ್ಳಿ ಹಾಕಿದ್ದಾರೆ. "ನಾವು ಸ್ವತಂತ್ರವಾಗಿ ಕಣಕ್ಕಿಳಿಯುತ್ತೇವೆ. ಕೆಲವು ಕ್ಷೇತ್ರಗಳಲ್ಲಿ ಬಿಜೆಪಿ, ಕೆಲವು ಕಡೆ ಜೆಡಿಎಸ್ ನಮಗೆ ಎದುರಾಳಿ" ಎಂದು ಹೇಳಿದ್ದಾರೆ.

"ಕಾಂಗ್ರೆಸ್ ಜೊತೆ ಮೈತ್ರಿ ಬೇಡ ಎಂಬುದೇ ಎಲ್ಲಾ ನಾಯಕರ ಅಭಿಪ್ರಾಯವಾಗಿದೆ. ಜೆಡಿಎಸ್ ಜೊತೆಗಿನ ಮೈತ್ರಿ ಬಗ್ಗೆ ಅವರಿಗೆ ತಲೆನೋವು ಬೇಡ. ಮೈತ್ರಿಗೆ ನಾವೇ ಇತಿಶ್ರೀ ಹಾಡುತ್ತೇವೆ" ಎಂದು ಜೆಡಿಎಸ್ ವರಿಷ್ಠ ಎಚ್. ಡಿ. ದೇವೇಗೌಡ ಸ್ಪಷ್ಟಪಡಿಸಿದ್ದಾರೆ.

English summary
Senior Congress leader Mallikarjun Kharge said that It's nice if Congress and JD(S) would go together in by elections. Both party leaders announced contesting the elections independently.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X