"ಡಿ.ಕೆ ಶಿವಕುಮಾರ್‌, ಸಿದ್ದರಾಮಯ್ಯರಿಂದ ಮಲ್ಲಿಕಾರ್ಜುನ ಖರ್ಗೆ ಅವಮಾನ!"

ಕರ್ನಾಟಕದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದರಲ್ಲಿ ಚುನಾವಣೆ ಪೂರ್ವದಲ್ಲಿ ಘೋಷಿಸಿದ್ದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳು ಮಹತ್ವದ ಪಾತ್ರ ವಹಿಸಿದ್ದವು. ಇದೇ ಕಾರಣಕ್ಕೆ ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಹೇರುವುದಕ್ಕೆ ಸಹಾಯವಾಗಿತ್ತು. ಆದರೆ, ಇದೀಗ ಕಾಂಗ್ರೆಸ್‌ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನೀಡಿರುವ ಹೇಳಿಕೆಯನ್ನೇ ಉಲ್ಲೇಖಿಸಿ ವಿರೋಧ ಪಕ್ಷಗಳು ವ್ಯಂಗ್ಯವಾಡಿವೆ.

ರಾಜ್ಯದಲ್ಲಿ 2023ನೇ ಸಾಲಿನ ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಐದು ಗ್ಯಾರಂಟಿ ಯೋಜನೆಗಳು ಭಾರೀ ಸದ್ದು ಮಾಡಿದ್ದವು. ಚುನಾವಣೆ ಪೂರ್ವದಲ್ಲಿ ಒಂದೊಂದೇ ಗ್ಯಾರಂಟಿ ಯೋಜನೆಗಳನ್ನು ಅತ್ಯಂತ ಕ್ರಮ ಬದ್ಧವಾಗಿ ಹಾಗೂ ಪ್ರಚಾರಕ್ಕೆ ಬೇಕಾದ ವಿಧಾನದಲ್ಲಿ ಕಾಂಗ್ರೆಸ್‌ ಪ್ಲಾನ್ ಮಾಡಿಕೊಂಡಿತ್ತು. ಅಧಿಕಾರಕ್ಕೆ ಬಂದ ಮೇಲೂ ರಾಜ್ಯದಲ್ಲಿ ಐದು ಪ್ರಮುಖ ಗ್ಯಾರಂಟಿ ಯೋಜನೆಗಳನ್ನು ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಜಾರಿ ಮಾಡಿದೆ.

Mallikarjuna Kharge insulted by DK Sivakumar Siddaramaiah

ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ ಮನ್ನಣೆ ಗಳಿಸಿದ ಕಾಂಗ್ರೆಸ್. ಈ ಯೋಜನೆಗಳ ಜಾರಿಯಲ್ಲಿ ಉಂಟಾಗಿದ್ದ ಕೆಲವು ಗೊಂದಲಗಳಿಂದಲೂ ಕಾಂಗ್ರೆಸ್‌ ಜನರ ಅಸಮಾಧಾನಕ್ಕೆ ಕಾರಣವಾಗಿತ್ತು. ಇದೀಗ ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದು ಎರಡು ವರ್ಷಗಳು ಸಮೀಪಿಸುತ್ತಿರುವ ಸಮಯದಲ್ಲಿ ಗ್ಯಾರಂಟಿಗಳನ್ನು ಕಾಂಗ್ರೆಸ್‌ ನಿಲ್ಲಿಸಲಿದೆಯೇ ಎನ್ನುವ ಪ್ರಶ್ನೆ ಎದುರಾಗಿದೆ.

ಇದೇ ವಿಷಯವನ್ನು ಇಟ್ಟುಕೊಂಡು ಇದೀಗ ವಿರೋಧ ಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಕಾಂಗ್ರೆಸ್‌ ಸರ್ಕಾರವನ್ನು ಇನ್ನಿಲ್ಲದಂತೆ ತರಾಟೆಗೆ ತೆಗೆದುಕೊಂಡಿವೆ.

ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಜೆಡಿಎಸ್, ರಾಜ್ಯದಲ್ಲಿ ಅವೈಜ್ಞಾನಿಕ ಗ್ಯಾರಂಟಿಯಿಂದ ಕಾಂಗ್ರೆಸ್‌ ಸರ್ಕಾರ ದಿವಾಳಿಯಾಗಿದೆ ಎಂದು ದೂರಿದೆ. ಅಲ್ಲದೇ ಈ ಸತ್ಯವನ್ನು ಸ್ವತಃ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೇ ಬಹಿರಂಗ ಪಡಿಸಿದ್ದಾರೆ ಎಂದು ಹೇಳಿದೆ.

ಗ್ಯಾರಂಟಿ ಹೆಸರಲ್ಲಿ ರಾಜ್ಯದ ಜನರಿಗೆ ಯಾಮಾರಿಸುತ್ತಾ ಸರ್ಕಾರದ ಖಜಾನೆ ಖಾಲಿಮಾಡಿರುವ ಸಿದ್ದರಾಮಯ್ಯ ಸರ್ಕಾರಕ್ಕೆ, ಖರ್ಗೆ ಸಾಹೇಬರೇ ಮಾತಿನ ಮೂಲಕ ತೀಕ್ಷ್ಣವಾಗಿ ತಿವಿದಿದ್ದಾರೆ ಎಂದು ವ್ಯಂಗ್ಯವಾಡಿದೆ. ಇದೇ ಸಂದರ್ಭದಲ್ಲಿ ಖರ್ಗೆಯವರು ಕಿವಿಮಾತು ಹೇಳುತ್ತಿರುವಾಗ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ನಡೆದುಕೊಂಡ ರೀತಿ ಹಿರಿಯ ದಲಿತ ನಾಯಕನಿಗೆ ಮಾಡಿದ ಅವಮಾನ ಎಂದೂ ಹೇಳಿದೆ.

ಸುಳ್ಳುಗಳಿಗೆ ಆಯಸ್ಸು ಕಮ್ಮಿ... ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್‌ ಅವರೇ ನೀವು ಎಷ್ಟೇ ತಿಪ್ಪೆ ಸಾರಿದರೂ ಸತ್ಯವನ್ನು ಮುಚ್ಚಿಡಲು ಸಾಧ್ಯವಿಲ್ಲ ಎಂದೂ ಸಹ ಹೇಳಿದೆ.

ಮಲ್ಲಿಕಾರ್ಜುನ ಖರ್ಗೆ ಹೇಳಿದ್ದೇನು ?

ಇನ್ನು ರಾಜ್ಯಕ್ಕೆ ಭೇಟಿ ನೀಡಿರುವ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯ ನಾಯಕರಿಗೆ ಬಹಿರಂಗವಾಗಿಯೇ ಕ್ಲಾಸ್‌ ತೆಗೆದುಕೊಂಡಿದ್ದಾರೆ. ಮೈಸೂರು ಅಭಿವೃದ್ಧಿ ಪ್ರಾಧಿಕಾರದಿಂದ ಬದಲಿ ನಿವೇಶನ ಪಡೆದ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಕಷ್ಟಕ್ಕೆ ಸಿಲುಕಿದ್ದರು. ಈ ವಿಚಾರದಲ್ಲಿ ಹಾಗೂ ಸಿ.ಎಂ ಬದಲಾವಣೆ ವಿಷಯದಲ್ಲಿ ರಾಜ್ಯ ಕಾಂಗ್ರೆಸ್‌ ನಾಯಕರು ನಡೆದುಕೊಂಡ ರೀತಿಗೆ ಕಾಂಗ್ರೆಸ್‌ ಹೈಕಮಾಂಡ್ ಅಸಮಾಧಾನ ವ್ಯಕ್ತಪಡಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+