''ಮಲ್ಲಿಕಾರ್ಜುನ ಖರ್ಗೆಗೂ ಕರ್ನಾಟಕ CM ಅವಕಾಶ: ಸಿದ್ದರಾಮಯ್ಯ ಇಳಿಸಲು ತಯಾರಿ''..CM Siddaramaiah

ಬೆಂಗಳೂರು, ಜುಲೈ 06: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷ ಪೂರ್ಣಗೊಂಡಿವೆ. ಮುಖ್ಯಮಂತ್ರಿ ಹುದ್ದೆಗೆ ಅಗ್ರಿಮೆಂಟ್‌ ಆಗಿದ್ದು, ಈ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಕೂಡ ಒಪ್ಪಿಕೊಂಡಿದ್ದಾರೆ. ಕಳೆದ ಆರು ತಿಂಗಳಿಂದ ನಾನು ಇದನ್ನೇ ಹೇಳುತ್ತಿದ್ದೇನೆ. ಕಾಂಗ್ರೆಸ್‌ನ ಶಾಸಕರು ರಾಜಾರೋಷವಾಗಿ ಸಿಎಂ ಬದಲಾವಣೆ ಬಗ್ಗೆ ಮಾತನಾಡಿದ್ದಾರೆ ಎಂದಿರುವ ವಿಪಕ್ಷ ನಾಯಕ ಆರ್.ಅಶೋಕ್ ಸಿಎಂ ಸ್ಥಾನದ ಭವಿಷ್ಯ ನುಡಿದಿದ್ದಾರೆ.

ಭಾನುವಾರ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗುವುದು ಖಚಿತ. ಸಿಎಂ ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ. ಸಿಎಂ ಬದಲಾವಣೆ ವೇಳೆ
ಹಾಲಿ ಸಚಿವರು ಸ್ಥಾನ ಕಳೆದುಕೊಂಡರೆ ಪ್ರಳಯ ಉಂಟಾಗಲಿದೆ ಎಂದು ಹೇಳಿದರು.

Mallikarjun Kharge May Replace Siddaramaiah as CM of Karnataka Claims R Ashok

ರಾಜ್ಯದ ಮುಖ್ಯಮಂತ್ರಿ ಹುದ್ದೆಗೆ ಎರಡೂವರೆ ವರ್ಷಗಳ ಅಗ್ರಿಮೆಂಟ್‌ ನಡೆದಿದೆ. ಸಿದ್ದರಾಮಯ್ಯನವರನ್ನು ಸಿಎಂ ಸ್ಥಾನದಿಂದ ಕೆಳಕ್ಕಿಳಿಸಲು ಎಲ್ಲ ಸಿದ್ಧತೆ ನಡೆದಿದೆ. ಎರಡೂವರೆಗೆ ವರ್ಷದ ಅಗ್ರಿಮೆಂಟ್ ಬಗ್ಗೆ ಸ್ವತಃ ಉಪಮುಖ್ಯಮಂತ್ರಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರೇ ಒಪ್ಪಿಕೊಂಡಿದ್ದಾರೆ. ಸಿದ್ದರಾಮಯ್ಯನವರನ್ನು ಅತಂತ್ರ ಮಾಡಲು ಕುತಂತ್ರ ನಡೆದಿದೆ. ಅವರಿಗೆ ಗೇಟ್‌ಪಾಸ್‌ ನೀಡುವುದು ಗ್ಯಾರಂಟಿಯಾಗಿದೆ. ನಾನು ಹೇಳಿದ್ದ ಜ್ಯೋತಿಷ್ಯ ನಿಜವಾಗಿದೆ ಎಂದರು.

ಇನ್ನೂ ಸಿಎಂ ಸಿದ್ದರಾಮಯ್ಯ ಅವರ ಬದಲಾವಣೆ ಕುರಿತು ಸ್ವತಃ ಕಾಂಗ್ರೆಸ್‌ನ ಶಾಸಕರು ರಾಜಾರೋಷವಾಗಿ ಮಾತನಾಡುತ್ತಿದ್ದಾರೆ. ಬಹಿರಂಗ ಹೇಳಿಕೆ ನಿಡಿದ್ದಾರೆ. ಎಐಸಿಸಿ ಹಿಂದುಳಿದ ವರ್ಗಗಳ ಸಲಹಾ ಮಂಡಳಿ ಸಿದ್ದರಾಮಯ್ಯನವರಿಗೆ ಬೋರ್ಡಿಂಗ್‌ ಪಾಸ್‌ ಇದ್ದಂತೆ ಎಂದು ಅವರು ಲೇವಡಿ ಮಾಡಿದರು.

ಮಲ್ಲಿಕಾರ್ಜುನ ಖರ್ಗೆಗೂ ಸಿಎಂ ಅವಕಾಶ?

ಸರ್ಕಾರ ಎರಡೂವರೆ ವರ್ಷಗಳಲ್ಲಿ ಟೇಕಾಫ್ ಆಗಿಲ್ಲ. ಶಾಸಕರೆಲ್ಲರೂ ತಿರುಗಿ ಬಿದ್ದಿದ್ದಾರೆ. ಶಾಸಕರು ಸಿದ್ದರಾಮಯ್ಯನವರ ಪರವಾಗಿ ಇಲ್ಲ ಎಂಬುದು ಸುರ್ಜೇವಾಲಾ ಅವರ ಸಭೆಯಿಂದ ಗೊತ್ತಾಗಿದೆ. ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟು ಕೇಂದ್ರಕ್ಕೆ ಹೋಗುವುದು ಗ್ಯಾರಂಟಿಯಾಗಿದೆ. ಇನ್ನೆರಡು ವರ್ಷವೂ ಇದೇ ರೀತಿ ಅತಂತ್ರದಲ್ಲೇ ಸರ್ಕಾರ ನಡೆಯಲಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರಿಗೆ ಸಿಎಂ ಸ್ಥಾನ ಹಲವಾರು ಬಾರಿ ತಪ್ಪಿದೆ. ಆದರೆ ಈಗ ಅವರಿಗೂ ಅವಕಾಶ ಬರಬಹುದು ಎಂದರು.

Mallikarjun Kharge May Replace Siddaramaiah as CM of Karnataka Claims R Ashok

ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಅವರೇ ಪಾಪರ್‌ ಸರ್ಕಾರ ಎಂದು ಒಪ್ಪಿಕೊಂಡಿದ್ದಾರೆ. ಈ ಸರ್ಕಾರದಿಂದ ಜನರ ಕೈಗೆ ಚಿಪ್ಪು ಸಿಗಲಿದೆ. ಸಿಎಂ ಬದಲಾವಣೆಯ ಗಲಾಟೆಯ ನಡುವೆ ಸಚಿವರು ಸ್ಥಾನ ಕಳೆದುಕೊಂಡು ತಿರುಗಿ ಬೀಳಲಿದ್ದಾರೆ. ಸಚಿವ ರಾಜಣ್ಣ ಹೇಳಿದಂತೆಯೇ, ಅಧಿಕಾರದ ಪ್ರಳಯ ಆಗಲಿದೆ ಎಂದು ಟೀಕಿಸಿದರು.

ಹೃದಯಾಘಾತಕ್ಕೆ ಲಸಿಕೆ ಕಾರಣವಲ್ಲ: ಸಿಎಂ ಸ್ಪಷ್ಟನೆ ಕೊಡಲಿ..

ಹಾಸನದಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚಿದ್ದು, ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎನ್. ರಾಜಣ್ಣ ಅವರು ಆಸ್ಪತ್ರೆಗಳಿಗೆ ಭೇಟಿ ನೀಡಿಲ್ಲ. ಒಂದೇ ಒಂದು ಸಭೆ ಮಾಡಿ ಜನರಿಗೆ ಸ್ಪಂದಿಸಿಲ್ಲ. ಇಲ್ಲಿನ ಹೃದಯಾಘಾತಕ್ಕೆ ಕೋವಿಡ್‌ ಲಸಿಕೆ ಇದಕ್ಕೆ ಕಾರಣವಲ್ಲ ಎಂದು ತಜ್ಞರು ಹೇಳಿದ್ದಾರೆ. ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ ನೀಡಬೇಕಿದೆ. ಅಲ್ಲದೆ ಹಾಸನದಲ್ಲಿ ಕಾಫಿ ಬೆಳೆಗೆ ಹಾನಿಯಾಗಿದೆ. ಇದಕ್ಕಾಗಿ ಹಾಸನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತೇನೆ ಎಂದು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+