Mallikarjun Kharge: ಸೋನಿಯಾಗಾಂಧಿ, ರಾಹುಲ್ ಗಾಂಧಿ ಪ್ರಾಣ ಕೊಟ್ಟರು: ಖರ್ಗೆ ಎಡವಟ್ಟಿನ ಮೇಲೆ ಎಡವಟ್ಟು
ಬೆಂಗಳೂರು, ಅಕ್ಟೋಬರ್ 31: ಇಂದಿರಾಗಾಂಧಿಯವರ ಪುಣ್ಯಸ್ಮರಣೆ ಹಾಗೂ ಮಾಜಿ ಉಪಪ್ರಧಾನಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜಯಂತಿ ಕಾರ್ಯಕ್ರಮ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆಯಿತು. ಈ ವೇಳೆ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ್ ಖರ್ಗೆ ಅವರು ಎಡವಟ್ಟು ಮಾಡಿಕೊಂಡಿದ್ದಾರೆ.
ಭಾರತದ ಇಬ್ಬರು ಮಹಾನ್ ಚೇತನಗಳಿಗೆ ಗೌರವ ನಮನ ಸಲ್ಲಿಸಿದ ಬಳಿಕ ಮಾತನಾಡಿದ ಖರ್ಗೆ, ಮಾತಿನ ಭರದಲ್ಲಿ ಇಂದಿರಾಗಾಂಧಿ ಅವರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು ಎನ್ನುವ ಬದಲು ಬಾಯ್ತಪ್ಪಿನಿಂದ ಸೋನಿಯಾ ಗಾಂಧಿ ಎಂದು ಎಂದಿದ್ದಾರೆ. ತಪ್ಪಿನ ಅರಿವಾಗಿ ಕೂಡಲೇ ಸಾರಿ ಕೇಳಿ, ಇಂದಿರಾಗಾಂಧಿ ಅವರಿಗೆ ಶ್ರದ್ಧಾಂಜಲಿ ಎಂದರು.

ಅಲ್ಲದೇ ಹೈದ್ರಾಬಾದ್ ಕರ್ನಾಟಕಕ್ಕೆ ಲೇಟ್ ಆಗಿ ನಮಗೆ ಸ್ವಾತಂತ್ರ್ಯ ಸಿಕ್ತು. ವಲ್ಲಭಭಾಯಿ ಪಟೇಲ್ ಅವರು ಒಗ್ಗೂಡಿಸುವುದಕ್ಕೆ ಪ್ರಯತ್ನ ಪಟ್ಟರು. ಆ ಒಗ್ಗಟ್ಟನ್ನ ಕಾಪಾಡುವುದಕ್ಕೆ ಇಂದಿರಾಗಾಂಧಿ, ಸೋನಿಯಾಗಾಂಧಿ , ರಾಹುಲ್ ಗಾಂಧಿ ಪ್ರಾಣ ಕೊಟ್ಟರು ಎನ್ನುವ ಮೂಲಕ ಎಡವಟ್ಟಿನ ಮೇಲೆ ಎಡವಟ್ಟು ಮಾಡಿಕೊಂಡರು. ಬಳಿಕ ಸಾವರಿಸಿಕೊಂಡ ಖರ್ಗೆ, ದಿನ ಹೇಳಿ ಹೇಳಿ ಈ ರೀತಿ ಆಗುತ್ತಿದೆ. ಮೀಡಿಯಾದವರು ಇದನ್ನ ನೀವು ಹೈಲೈಟ್ ಮಾಡಬೇಡಿ ಎಂದು ಮಲ್ಲಿಕಾರ್ಜುನ್ ಖರ್ಗೆ ಅವರು ಮನವಿ ಮಾಡಿದರು.
ಈ ದೇಶದ ಸಮಗ್ರತೆಗೆ ಹೋರಾಟ ಮಾಡಿದವರು ಸರ್ದಾರ್ ಪಟೇಲರು. ಇಡೀ ದೇಶಕ್ಕೆ ಆಗಸ್ಟ್ 15, 1947 ರಂದು ಸ್ವಾತಂತ್ರ್ಯ ಬಂದಿದೆ. ಆದರೆ ನಮ್ಮ ಹೈದರಾಬಾದ್ ಕರ್ನಾಟಕ ಭಾಗಕ್ಕೆ ಸ್ವಾತಂತ್ರ್ಯ ಬಂದಿದ್ದು ಸೆಪ್ಟೆಂಬರ್ 19, 1948 ರಂದು. ಭಾರತದ ಒಕ್ಕೂಟಕ್ಕೆ ಸೇರಲು ಬಯಸದೇ ಇದ್ದಾಗ ಪೊಲೀಸ್ ಕಾರ್ಯಾಚರಣೆ ಮಾಡಿ ನಮಗೆ ಬಿಡುಗಡೆ ಕೊಡಿಸಿದರು.
ದೇಶವನ್ನು ಕಾಪಾಡಲು ನೆಹರು ಹಾಗೂ ಸರ್ದಾರ್ ಪಟೇಲ್ ಅವರಷ್ಟೇ ಅತ್ಯಂತ ತೀವ್ರವಾಗಿ ಈ ದೇಶವನ್ನು ಕಟ್ಟಿದವರು ಇಂದಿರಾಗಾಂಧಿ ಅವರು. ದೇಶದ ಒಗ್ಗಟ್ಟಿಗಾಗಿ ತಮ್ಮ ಪ್ರಾಣವನ್ನೇ ಕೊಟ್ಟವರು. ರಾಜೀವ್ ಗಾಂಧಿ ಅವರು ತಾಯಿಯಂತೆ ದೇಶದ ಒಗ್ಗಟ್ಟಿಗೆ ಪ್ರಾಣ ಕೊಟ್ಟರು.
ಸರ್ದಾರ್ ಪಟೇಲ್ ಅವರ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಭಾಗವಹಿಸಿರುವ ಪ್ರಧಾನಿ ಮೋದಿ ಅವರು ಈ ದೇಶಕ್ಕಾಗಿ ಪ್ರಾಣಕೊಟ್ಟ ಇಂದಿರಾಗಾಂಧಿ ಅವರ ಹೆಸರನ್ನು ನೆನಪಿಸಿಕೊಳ್ಳಲೇ ಇಲ್ಲ. ಕೇವಲ ಅರ್ಬನ್ ನಕ್ಸಲ್ ಹಾಗೂ ಈ ಹಿಂದೇ ಆಡಳಿತ ಮಾಡಿದ ಪಕ್ಷಗಳು ದೇಶವನ್ನು ಅಭಿವೃದ್ಧಿ ಮಾಡಿಲ್ಲ. ಪರೋಕ್ಷವಾಗಿ ಕಾಂಗ್ರೆಸ್ ಪಕ್ಷಕ್ಕೆ ಬೈಯುವ ಕೆಲಸವನ್ನು ಮೋದಿ ಗುರುವಾರ ಬೆಳಿಗ್ಗೆಯೇ ಮಾಡಿದರು. ಅವರಿಗೆ ಬೇರೆ ವಿಚಾರಗಳೇ ತಲೆಯಲ್ಲಿ ಇಲ್ಲ.
ಈ ದೇಶಕ್ಕಾಗಿ ಪ್ರಾಣ ಕೊಟ್ಟ ನಾಯಕಿಯನ್ನು ಮೋದಿ ಅವರು ನೆನಪಿಸಿಕೊಳ್ಳಲಿಲ್ಲ. ಅಂದರೆ ಇನ್ನೂ ಅವರ ಮನಸ್ಸಿನಲ್ಲಿ ಹಾಗೂ ಪಕ್ಷದ ಜನರಲ್ಲಿ ವಿಷ ತುಂಬಿದೆ. ಬಿಜೆಪಿಯ ಅಗ್ರಗಣ್ಯ ನಾಯಕರಾದ ವಾಜಪೇಯಿ ಅವರು ಇಂದಿರಾಗಾಂಧಿ ಅವರನ್ನು "ದುರ್ಗೆ" ಎಂದು ಕರೆದಿದ್ದರು. ಇಂತಹ ಪಕ್ಷದ ನಾಯಕರಾದ ಮೋದಿ ಅವರ ಬಾಯಲ್ಲಿ ಇಂದಿರಾಗಾಂಧಿ ಅವರ ಹೆಸರೇ ಬರಲಿಲ್ಲ.
ಕಾಂಗ್ರೆಸ್ ನಾಯಕರಾದ ಪಟೇಲ್ ಅವರನ್ನು ಬಿಜೆಪಿ ಕಸಿಯಲು ಪ್ರಯತ್ನ ಮಾಡುತ್ತಿದೆ. ಗಾಂಧಿ ಅವರನ್ನು ಗೋಡ್ಸೆ ಕೊಂದ ನಂತರ ಆರ್ ಎಸ್ ಎಸ್ ಅನ್ನು ಬ್ಯಾನ್ ಮಾಡಿದರು. ಇದರ ಬಗ್ಗೆ ಬಿಜೆಪಿಯವರು ಏನು ಮಾತನಾಡುವುದಿಲ್ಲ. ಸರ್ದಾರ್ ಪಟೇಲ್ ಅವರ ತತ್ವಗಳಿಗೆ ಬಿಜೆಪಿ ಹಾಗೂ ಮೋದಿ ವಿರುದ್ಧವಾಗಿ ಇದ್ದಾರೆ. ಅವರನ್ನು ಬಿಜೆಪಿಯವರನ್ನಾಗಿ ಮಾಡಿ ಕೊಳ್ಳಲು ಹೊರಟಿದ್ದಾರೆ.ಬಿಜೆಪಿಯವರು ಜಾತಿಯತೆ ಮೂಡಿಸುವುದು. ಧರ್ಮಗಳ ನಡುವೆ ವೈಶಮ್ಯ ಬಿತ್ತುವುದು. ಇದೇ ಅವರ ಕೆಲಸ. ಗುಂಪು ಘರ್ಷಣೆ ಸೇರಿದಂತೆ ಈ ದೇಶದೊಳಗೆ ಅಶಾಂತಿಯನ್ನು ಮೂಡಿಸುವುದೇ ಬಿಜೆಪಿಯ ಕೆಲಸ ಎಂದರು.
ಇನ್ನೂ ಈ ವೇಳೆ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ ಅವರು ಮಾತನಾಡಿ, ಪಟೇಲ್ ಅವರು ಕೇಂದ್ರ ಗೃಹ ಸಚಿವರಾಗಿದ್ದ ಸಮಯದಲ್ಲಿಯೇ ಮಹಾತ್ಮ ಗಾಂಧಿ ಅವರ ಹತ್ಯೆಯಾದ ಕಾರಣಕ್ಕೆ ಸಾಕಷ್ಟು ನೊಂದಿದ್ದರು. ಇದರಿಂದ ಆರ್ ಎಸ್ ಎಸ್ ಅನ್ನು ನಿಷೇದ ಮಾಡುವ ಕಾನೂನು ತಂದಿದ್ದರು.ಈ ದೇಶದ ಸಮಗ್ರತೆ ಹಾಗೂ ಐಕ್ಯತೆಗಾಗಿ ಸದಾ ದುಡಿಯುತ್ತಿದ್ದ ಮನುಷ್ಯ. ದೇಶಕ್ಕೆ ಶಕ್ತಿ ನೀಡಿದ ಮಹಾನ್ ಚೇತನ.
ಇಂದಿರಾ ಗಾಂಧಿ ಅವರು ಅಂತರರಾಷ್ಟೀಯ ಮಟ್ಟದಲ್ಲಿ ದೇಶಕ್ಕೆ ಮಾನ್ಯತೆ ತಂದು ಕೊಟ್ಟವರು. ಕೇವಲ ಕಾಂಗ್ರೆಸ್ ಪಕ್ಷವನ್ನು ಗಟ್ಟಿ ಮಾಡಲಿಲ್ಲ. ಈ ದೇಶದ ಜನರನ್ನು ಬಲಿಷ್ಠ ಮಾಡಿದರು. ವಾಜಪೇಯಿ ಅವರು ಇಂದಿರಾಗಾಂಧಿ ಅವರನ್ನು ದುರ್ಗೆ ಎಂದು ಕರೆದಿದ್ದರು. ನಾವು ರಾಜಕೀಯಕ್ಕೆ ಬರಲು ಇಂದಿರಾ ಗಾಂಧಿ ಅವರ ಹಾಗೂ ದೇವರಾಜ ಅರಸು ಅವರ ಪ್ರಗತಿಪರ ಧೋರಣೆ ಕಾರಣ. ಈ ಇಬ್ಬರ ಚಿಂತನೆಗಳು ಇಲ್ಲದಿದ್ದರೆ ನಾವುಗಳು ಕಾಂಗ್ರೆಸ್ ಪಕ್ಷವನ್ನು ಸೇರುತ್ತಿರಲಿಲ್ಲ ಎಂದು ಹೇಳಿದರು.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications