Breaking; ಪಿಎಸ್‌ಐ ನೇಮಕಾತಿ ಹಗರಣ; ತನಿಖೆ ಬಗ್ಗೆ ಖರ್ಗೆ ಅಸಮಾಧಾನ
ಬೆಂಗಳೂರು, ಏಪ್ರಿಲ್ 29 ; ಪಿಎಸ್‌ಐ ನೇಮಕಾತಿ ಹಗರಣದ ತನಿಖೆ ಆರೋಪಿ, ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಬಂಧನದ ಚುರುಕುಗೊಂಡಿದೆ. ಪ್ರತಿಪಕ್ಷ ಕಾಂಗ್ರೆಸ್ ಹಗರಣದ ತನಿಖೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸುತ್ತಲೇ ಇದೆ.
ಕಾಂಗ್ರೆಸ್‌ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಪಿಎಸ್‌ಐ ನೇಮಕಾತಿ ಹಗರಣದ ತನಿಖೆಯ ಬಗ್ಗೆ ಕರ್ನಾಟಕ ಸರ್ಕಾರವನ್ನು ಪ್ರಶ್ನಿಸಿದ್ದಾರೆ. "ಹಗರಣದಲ್ಲಿ ಭಾಗಿಯಾದವರ ವಿರುದ್ಧ ಕ್ರಮ ಕೈಗೊಳ್ಳಿ. ಅವರು ಯಾವುದೇ ಪಕ್ಷದವರು ಆದರೂ ಬಂಧಿಸಿ ಮತ್ತು ತನಿಖೆ ನಡೆಸಿ" ಎಂದು ಆಗ್ರಹಿಸಿದ್ದಾರೆ.
"ಆಡಳಿತಯಂತ್ರ ಕುಸಿದಿದೆ, ಎಲ್ಲಿದೆ ನಿಮ್ಮ ಉತ್ತಮ ಆಡಳಿತ?" ಎಂದು ಮಲ್ಲಿಕಾರ್ಜುನ ಖರ್ಗೆ ಕರ್ನಾಟಕ ಸರ್ಕಾರವನ್ನು ಪ್ರಶ್ನಿಸಿದ್ದು, ಪಿಎಸ್‌ಐ ನೇಮಕಾತಿ ಹಗರಣದಲ್ಲಿ ತನಿಖೆ ನಡೆಯುತ್ತಿರುವ ಸ್ವರೂಪವನ್ನು ಪ್ರಶ್ನಿಸಿದ್ದಾರೆ.

ಈ ಹಗರಣದಲ್ಲಿ ಪ್ರಿಯಾಂಕ್ ಖರ್ಗೆ ಆಡಿಯೋವೊಂದು ಇದೆ ಎಂಬ ಸುದ್ದಿ ಸಂಚಲನಕ್ಕೆ ಕಾರಣವಾಗಿತ್ತು. ಸಿಐಡಿ ವಿಚಾರಣೆಗೆ ಹಾಜರಾಗುವಂತೆ ಮಲ್ಲಿಕಾರ್ಜುನ ಖರ್ಗೆ ಪುತ್ರನಿಗೆ ನೋಟಿಸ್ ನೀಡಿತ್ತು. ಗುರುವಾರ ಅವರು ನೋಟಿಸ್‌ಗೆ ಪ್ರತಿಕ್ರಿಯೆ ನೀಡಿದ್ದರು.
ಇನ್ನು ಪಿಎಸ್‌ಐ ನೇಮಕಾತಿ ಹಗರಣದ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು ಹಗರಣದ ಪ್ರಮುಖ ಆರೋಪಿ, ಬಿಜೆಪಿ ನಾಯಕಿ ದಿವ್ಯಾ ಹಾಗರಗಿಯನ್ನು ಮಹಾರಾಷ್ಟ್ರದ ಪುಣೆಯಲ್ಲಿ ಬಂಧಿಸಿದೆ. ಸಿಐಡಿ ಪೊಲೀಸರು 18 ದಿನಗಳಿಂದ ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದರು.
ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಆರೋಪ ಪ್ರತ್ಯಾರೋಪ ನಡೆಯುತ್ತಿದೆ. ಎರಡೂ ಪಕ್ಷದ ಟ್ವಿಟರ್ ಖಾತೆಗಳಿಂದ ಸರಣಿ ಟ್ವೀಟ್‌ಗಳನ್ನು ಮಾಡಲಾಗುತ್ತಿದೆ. ಅದರಲ್ಲೂ ದಿವ್ಯಾ ಹಾಗರಗಿ ವಿಚಾರದಲ್ಲಿ ಆರೋಪ ಪ್ರತ್ಯಾರೋಪಗಳು ಜೋರಾಗಿವೆ.












Click it and Unblock the Notifications