ಮಲ್ಪೆ-ಉಡುಪಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಕುರಿತು ಬಿಗ್ ಅಪ್ಡೇಟ್‌

Malpe-Udupi National Highway: ರಾಜ್ಯದಲ್ಲಿ ರಾಷ್ಟ್ರೀಯ ಹೆದ್ದಾರಿ ಜಾಲ ವಿಸ್ತರಣೆ ಆಗುತ್ತಲಿದೆ. ಇನ್ನೂ ಮುಂಗಾರು ವೇಳೆ ಭಾರೀ ಮಳೆ ಸುರಿದ ಪರಿಣಾಮ ಹಲವೆಡೆ ಹೆದ್ದಾರಿಗಳು ದುರಸ್ತಿ ಹಂತಕ್ಕೆ ತಲುಪಿದ್ದು, ಇನ್ನೂ ಕಾಮಗಾರಿಗಳು ಆಮೆಗತಿಯಲ್ಲಿ ಸಾಗಿವೆ. ಈ ನಡುವೆಯೇ ಕೆಲವೆಡೆ ವೇಗ ಪಡೆದುಕೊಂಡಿವೆ. ಈ ಸಾಲಿಗೆ ಮಲ್ಪೆ-ಉಡುಪಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಕೂಡ ಸೇರಿಕೊಂಡಿದೆ. ಈ ಬಗ್ಗೆ ಬಿಗ್ ಅಪ್ಡೇಟ್‌ವೊಂದು ಇಲ್ಲಿದೆ ನೀಡಿದೆ.

ರಾಷ್ಟ್ರೀಯ ಹೆದ್ದಾರಿ ಜಾಲವೂ ವಿಸ್ತರಣೆ ಆಗುತ್ತಲಿದೆ. ಮತ್ತೊಂದೆಡೆ ಮಳೆಯಿಂದ ಹಾಳಾಗಿರುವ ಹೆದ್ದಾರಿಗಳ ಕಾಮಗಾರಿಗಳು ಕೂಡ ನಡೆಯುತ್ತಿವೆ. ಇದೀಗ ಮಲ್ಪೆ-ಉಡುಪಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೇಗ ಪಡೆದುಕೊಂಡಿದೆ. ಇದಕ್ಕೆ ಪ್ರಮುಖ ಕಾರಣ ಏನು ಎನ್ನುವ ಪ್ರಶ್ನೆಗೆ ಉತ್ತರವನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

Malpe-Udupi National Highway Repair Works Accelerated Ahead of PM Modi s Visit on November 28

ಮಳೆಗಾಲ ಬಂತೆಂದರೆ ಸಾಕು ಕರಾವಳಿ ಭಾಗದಲ್ಲಿ ಕೆಲ ಜಿಲ್ಲೆಗಳಲ್ಲಿ ಗುಡ್ಡ ಕುಸಿತ ಸಂಭವಿಸುತ್ತಲೇ ಇರುತ್ತವೆ. ಪರಿಣಾಮ ಗುಡ್ಡದ ಮಣ್ಣು ಹೆದ್ದಾರಿಗೆ ಬಿದ್ದು, ವಾಹನ ಸವಾರರು ಸಮಸ್ಯೆಗಳನ್ನು ಎದುರಿಸುತ್ತಾ ಬರುತ್ತಿದ್ದಾರೆ. ಇದಕ್ಕೆ ಶಾಶ್ವತ ಪರಿಹಾರ ಕೇಳಿದರೂ ಅಧಿಕಾರಿಗಳು ಯಾವುದೋ ನೆಪ ಹೇಳಿ ಸುಮ್ಮನಾಗಿಬಿಡುತ್ತಾರೆ. ಆದರೆ, ಯಾರಾದರೂ ಗಣ್ಯ ವ್ಯಕ್ತಿಗಳು ಬಂದಾಗ ಮಾತ್ರ ಹಾಳಾದ ರಸ್ತೆಗಳ ದುರಸ್ತಿಗೆ ವೇಗ ನೀಡುತ್ತಾರೆ ಎಂದು ಈ ಭಾಗದ ಜನರು ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ತಕ್ತಪಡಿಸುತ್ತಿದ್ದಾರೆ.

ಹಾಗೆಯೇ ಇದೀಗ ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 28ಕ್ಕೆ ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆ ನಗರದ ರಸ್ತೆಗಳ ದುರಸ್ತಿ ಕಾರ್ಯ ವೇಗ ಪಡೆದುಕೊಂಡಿದೆ. ಉಡುಪಿಗೆ ಬರಲಿರುವ ಪ್ರಧಾನಿ ಮೋದಿ ಅವರು, ಆದಿ ಉಡುಪಿಯ ಹೆಲಿಪ್ಯಾಡ್ನಲ್ಲಿ‌ ಲ್ಯಾಂಡಿಂಗ್ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಮೋದಿ ಭೇಟಿ ಹಿನ್ನೆಲೆ ಮಲ್ಪೆ-ಮೊಳಕಾಲ್ಮೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ವೇಗ ನೀಡಲಾಗಿದೆ. ಕರಾವಳಿ ಬೈಪಾಸ್ ಬಳಿ ರಸ್ತೆ ದುರಸ್ತಿ ಕಾರ್ಯಗಳು ನಡೆಯುತ್ತಲಿವೆ. ಕೃಷ್ಣಮಠದವರೆಗೂ ರಾಷ್ಟ್ರೀಯ ಹೆದ್ದಾರಿಯಲ್ಲೇ ವಾಹನ ಸಂಚಾರ ಮಾಡಬೇಕಿದೆ. ಆದ್ದರಿಂದ ಮಲ್ಪೆ-ಮೊಳಕಾಲ್ಮೂರು ರಸ್ತೆ ಕಾಮಗಾರಿಗೆ ವೇಗ ನೀಡಲಾಗಿದೆ ಎನ್ನುವ ಮಾಹಿತಿ ಇದೆ.

ಮುಂಗಾರು ವೇಳೆ ಉಡುಪಿ ಜಿಲ್ಲೆಯಲ್ಲಿ ಈ ಭಾರೀ ಅತಿ ಹೆಚ್ಚು ಮಳೆಯಾಗಿದೆ. ಮೇ ತಿಂಗಳ ಮಧ್ಯದಿಂದಲೂ ನಿರಂತರ ಸುರಿದ ಮಳೆಯಿಂದಾಗಿ, ರಾಷ್ಟ್ರೀಯ ಹೆದ್ದಾರಿ ಅಷ್ಟೇ ಅಲ್ಲದೆ, ಲೋಕೋಪಯೋಗಿ ಹಾಗೂ ಗ್ರಾಮ ಪಂಚಾಯತ್ ರಸ್ತೆಗಳು ಸಹ ಹಾಳಾಗಿವೆ. ಇದರಿಂದ ವಾಹನ ಸವಾರರಿಗೆ ಪೀಕಲಾಟ ಶುರುವಾಗಿದ್ದು, ಇದನ್ನು ದುರಸ್ತಿಪಡಿಸುವಂತೆ ಎಷ್ಟೇ ಕೇಳಿಕೊಂಡರೂ ಜಿಲ್ಲಾಡಳಿತ ಸ್ಪಂದಿಸಿರಲಿಲ್ಲ ಎನ್ನುವ ಆರೋಪಗಳು ಕೇಳಿಬಂದಿದ್ದವು.

ಅಷ್ಟೇ ಅಲ್ಲದೆ, ಅಪಘಾತಗಳ ಸಂಖ್ಯೆ ಸಹ ಹೆಚ್ಚಾಗಿತ್ತು. ಮಳೆ ಪ್ರಮಾಣ ತಗ್ಗಿದ ಬಳಿಕ ಇನ್ಮೇಲಾದರೂ ರಸ್ತೆ ಕಾಮಗಾರಿ ಮಾಡಬಹುದಲ್ಲ ಎಂದು ಸಾರ್ವಜನಿಕರು ಪ್ರಶ್ನಿಸುತ್ತಲೇ ಇದ್ದರು. ಇನ್ನೂ ಮಳೆ ಹಾನಿ ಪರಿಹಾರಕ್ಕೆ ಹಣ ಇದೆ ಎಂದು ಜಿಲ್ಲಾಡಳಿತ ಹೇಳುತ್ತಿದೆ. ಆದರೆ, ರಸ್ತೆ ಮಾತ್ರ ದುರಸ್ತಿ ಆಗುತ್ತಿಲ್ಲ? ಎಂದು ಪ್ರಶ್ನಿಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದರು. ಆದರೆ ಇದೀಗ ಮೋದಿ ಭೇಟಿ ಹಿನ್ನೆಲೆ ಯಾವ ಸಾಬೂಬು ನೀಡದೇ ರಸ್ತೆ ಕಾಮಗಾರಿಗೆ ವೇಗ ನೀಡಲಾಗಿದೆ ಎನ್ನುವ ಮಾತುಗಳು ಕೇಳಿಬರುತ್ತಿವೆ.

ಉಡುಪಿ ಶ್ರೀಕೃಷ್ಣ ಮಠದ ಪರ್ಯಾಯ ಪುತ್ತಿಗೆ ಮಠದ ವತಿಯಿಂದ ಡಿಸೆಂಬರ್ 7ರ ವರೆಗೆ ಬೃಹತ್ ಗೀತೋತ್ಸವ ನಡೆಯುತ್ತಿದೆ. ಈ ಕಾರ್ಯಕ್ರಮದ ಅಂಗವಾಗಿ ಪ್ರಧಾನಿ ಮೋದಿ ಅವರು ಮಠಕ್ಕೆ ಭೇಟಿ ನೀಡಲಿದ್ದಾರೆ ಎಂದು ಪರ್ಯಾಯ ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಶ್ರೀಪಾದರು ತಿಳಿಸಿದ್ದಾರೆ. ಮೊದಲು ಕೃಷ್ಣ ಮಠದ ಸುವರ್ಣ ಮುಖಮಂಟಪ ಮತ್ತು ಕನಕನ ಕಿಂಡಿಯ ಸ್ವರ್ಣ ಕವಚವನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ಬಳಿಕ ಗೀತಾ ಮಂದಿರಕ್ಕೆ ಭೇಟಿ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ. ಹೀಗೆ ಯಾರಾದರೂ ಗಣ್ಯ ವ್ಯಕ್ತಿಗಳು ಬಂದ್ರೆ ಮಾತ್ರ ಕಾಮಗಾರಿಗಳಿಗೆ ವೇಗ ನೀಡಲಾಗುತ್ತದೆ. ಸಾಮಾನ್ಯ ಜನರು ಇವರ ಕಣ್ಣಿಗೆ ಕಾಣಿಸುವುದಿಲ್ಲ ಎಂದು ಸಾರ್ವಜನಿಕರು ಆಕ್ರೋಶ ಹೊರಹಾಕುತ್ತಿದ್ದಾರೆ. ಇನ್ನೂ ಕೆಲವರು ಈ ನೆಪದಲ್ಲಾದರೂ ರಸ್ತೆ ಕಾಗಾರಿಗೆ ವೇಗ ನೀಡಿದ್ದಾರಲ್ಲ ಅದೇ ಖುಷಿ ಎಂದು ಹೇಳುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+