ವಂಚನೆ ಪ್ರಕರಣ; ಬಿಜೆಪಿ ಮಾಜಿ ಸಚಿವರಿಗೆ 3 ವರ್ಷ ಜೈಲು ಶಿಕ್ಷೆ
ಬ್ಯಾಂಕ್ ವಂಚನೆ ಪ್ರಕರಣದಲ್ಲಿ ಬಿಜೆಪಿಯ ಮಾಜಿ ಸಚಿವ ಮಾಲೂರು ಕೃಷ್ಣಯ್ಯ ಶೆಟ್ಟಿಗೆ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಬ್ಯಾಂಕ್‌ಗೆ ವಂಚನೆ ಪ್ರಕರಣದಲ್ಲಿ ಕೃಷ್ಣಯ್ಯ ಶೆಟ್ಟಿ ಸೇರಿದಂತೆ ನಾಲ್ವರನ್ನು ದೋಷಿಗಳೆಂದು ಕೋರ್ಟ್ ತೀರ್ಪು ನೀಡಿತ್ತು, ಬಳಿಕ ಶಿಕ್ಷೆಯ ಪ್ರಮಾಣ ಪ್ರಕಟಿಸಲಾಗಿದ್ದು ಬಿಜೆಪಿ ಮಾಜಿ ಸಚಿವರಿಗೆ ಮೂರು ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ.
ಕೃಷ್ಣಯ್ಯ ಶೆಟ್ಟಿ ಮತ್ತು ಇತರ ಮೂವರು ನಕಲಿ ದಾಖಲೆಗಳನ್ನು ಬಳಸಿಕೊಂಡು ಖಾಸಗಿ ಬ್ಯಾಂಕ್‌ಗೆ 7.17 ಕೋಟಿ ರೂಪಾಯಿ ವಂಚಿಸಿರುವುದು ಸಾಬೀತಾಗಿದ್ದು, ಮೂರು ವರ್ಷ ಶಿಕ್ಷೆ ನೀಡಿ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ತೀರ್ಪು ನೀಡಿದ್ದಾರೆ.

ಬ್ಯಾಂಕ್ ದೂರನ್ನು ದಾಖಲಿಸಿಕೊಂಡಿದ್ದ ಸಿಬಿಐ ಪ್ರಕರಣದ ತನಿಖೆಯನ್ನು ನಡೆಸಿತ್ತು. ಕೃಷ್ಣಯ್ಯ ಶೆಟ್ಟಿ ಮತ್ತು ಸಹ ಆರೋಪಿಗಳಾದ ಶ್ರೀನಿವಾಸ್ ಮತ್ತು ಮುನಿರಾಜು ಅವರನ್ನು ಪಿತೂರಿ ಮತ್ತು ವಂಚನೆ ಸೇರಿದಂತೆ ಹಲವು ಅಪರಾಧಗಳಲ್ಲಿ ತಪ್ಪಿತಸ್ಥರು ಎಂದು ನ್ಯಾಯಾಲಯ ಹೇಳಿದೆ.
22 ವರ್ಷಗಳ ಹಿಂದಿನ ಪ್ರಕರಣ
ಈ ಪ್ರಕರಣವು ಬರೋಬ್ಬರಿ 22 ವರ್ಷ ಹಳೆಯದಾಗಿದೆ. 1993ರಲ್ಲಿ ಕೃಷ್ಣಯ್ಯ ಶೆಟ್ಟಿ ತಮ್ಮ ಸಂಸ್ಥೆ ಬಾಲಾಜಿ ಕೃಪಾ ಎಂಟರ್‌ಪ್ರೈಸಸ್ ಮೂಲಕ ಸಾರ್ವಜನಿಕ ವಲಯದ ಉದ್ಯಮಗಳ ಉದ್ಯೋಗಿಗಳಿಗೆ ಹೌಸಿಂಗ್ ಬೋರ್ಡ್ ಸಾಲದ ಭರವಸೆ ನೀಡಿದ್ದು, ಅವರ ಹೆಸರಿನಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸುವ ಮೂಲಕ ಬ್ಯಾಂಕ್‌ಗಳಲ್ಲಿ ಸಾಲ ಪಡೆದಿದ್ದರು, ಅದರಲ್ಲಿ 3.53 ಕೋಟಿ ರೂಪಾಯಿಯನ್ನು ಇನ್ನೂ ಬ್ಯಾಂಕ್‌ಗೆ ಪಾವತಿ ಮಾಡಬೇಕಿದೆ.












Click it and Unblock the Notifications