ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯದಲ್ಲಿ ನಾಲ್ಕು ಆರ್‌ಎಸ್ಎಸ್ ಕಚೇರಿ ಧ್ವಂಸ: ತಮಿಳುನಾಡಿನಿಂದ ಬೆದರಿಕೆ ಕರೆ

|
Google Oneindia Kannada News

ಶಿವಮೊಗ್ಗ, ಜೂ. 07: ರಾಜ್ಯದ ನಾಲ್ಕು ಸ್ವಯಂ ಸೇವಕ ಸಂಘದ ಕಚೇರಿಗಳ ಮೇಲೆ ದಾಳಿ ಮಾಡುವುದಾಗಿ ತಮಿಳುನಾಡಿನ ವ್ಯಕ್ತಿಯೊಬ್ಬ ಬೆದರಿಕೆ ಹಾಕಿದ್ದಾರೆ. ಈ ಬೆದರಿಕೆ ಸಂದೇಶ ಸಾಮಾಜಿಕ ಜಾಲ ತಾಣದಲ್ಲಿ ಹರಿದಾಡುತ್ತಿದ್ದಂತೆ ರಾಜ್ಯದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಚೇರಿಗಳಿಗೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ರಾಜ್ಯದ ಆರ್‌ಎಸ್‌ಎಸ್ ಕಚೇರಿಗಳ ಮೇಲೆ ದಾಳಿ ಬೆದರಿಕೆ ಸಂದೇಶ ಬಂದಿರುವ ಹಿನ್ನೆಲೆಯಲ್ಲಿ ಎಲ್ಲ್ಲಾ ಆರ್ ಎಸ್ ಎಸ್ ಕಚೇರಿಗಳಿಗೆ ಸೂಕ್ತ ಪೊಲೀಸ್ ರಕ್ಷಣೆ ಒದಗಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಮಂಗಳವಾರ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಗೃಹ ಸಚಿವರು, ಉತ್ತರ ಪ್ರದೇಶದ ಎರಡು ಹಾಗೂ ಕರ್ನಾಟಕದ ನಾಲ್ಕು ಆರ್ ಎಸ್ ಎಸ್ ಕಚೇರಿಗಳನ್ನು ದ್ವಂಸ ಗೊಳಿಸುವುದಾಗಿ ವಾಟ್ಸಪ್ ಸಂದೇಶವೊಂದನ್ನು ತಮಿಳುನಾಡಿನಿಂದ ವ್ಯಕ್ತಿಯೊಬ್ಬ ರವಾನಿಸಿದ್ದಾನೆ. ಉತ್ತರ ಪ್ರದೇಶದ ವ್ಯಕ್ತಿಯೊಬ್ಬರಿಗೆ ಈ ಸಂದೇಶ ಕಳಿಸಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಮೊಕದ್ದಮೆ ದಾಖಲು ಮಾಡಲಾಗಿದೆ. ವಾಟ್ಸಪ್ ಸಂದೇಶ ಕಳಿಸಿದ ವ್ಯಕ್ತಿಯನ್ನು ಗುರುತಿಸಲಾಗಿದ್ದು, ಆರೋಪಿತ ಸೆಂಥಿಲ್ ಎಂಬವನನ್ನು ತಮಿಳು ನಾಡಿನಲ್ಲಿ ಬಂಧಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.

Man from TamilNadu threatened to Wreck 4 RSS Offices in Karnataka ; Security Tightened

ಈ ರೀತಿಯಾಗಿ ಬೆದರಿಕೆ ಕರೆ ಹಾಗೂ ಸಂದೇಶ ಕಳುಹಿಸುವ ದುಷ್ಕರ್ಮಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಇದೇ ವೇಳೆ ಎಚ್ಚರಿಕೆ ನೀಡಿದರು.

ಉಗ್ರನ ಬಂಧನ:

ರಾಜ್ಯ ಪೊಲೀಸರಿಂದ ತನಿಖೆ: ಭಯೋತ್ಪಾದನೆ ಚಟುವಟಿಕೆಗಳಲ್ಲಿ ತೊಡಗಿದ್ದನೆನ್ನಲಾದ ಜಮ್ಮು ಕಾಶ್ಮೀರದ ನಿವಾಸಿಯನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ. ಈ ಕುರಿತು ರಾಜ್ಯದ ಪೊಲೀಸರು ತನಿಖೆ ಆರಂಭಿಸಿದ್ದಾರೆ. ನಗರದಲ್ಲಿ ನೆಲಸಿದ್ದ ಶಂಕಿತ ಉಗ್ರರಿಗೆ ಆಶ್ರಯ ನೀಡಿದ್ದ ವ್ಯಕ್ತಿಗಳು ಹಾಗೂ ಸಂಸ್ಥೆಗಳ ಬಗ್ಗೆ ತನಿಖೆ ನಡೆಯುತ್ತಿದ್ದು ಕರ್ನಾಟಕ ರಾಜ್ಯ ಪೊಲೀಸರು, ಜಮ್ಮು ಕಶ್ಮೀರ ರಾಜ್ಯದ ಪೋಲೀಸರ ಜತೆ ಸಮನ್ವಯ ಸಾಧಿಸಿ ತನಿಖೆಯನ್ನು ತೀವ್ರ ಗೊಳಿಸಿದ್ದಾರೆ.

Man from TamilNadu threatened to Wreck 4 RSS Offices in Karnataka ; Security Tightened

ಬಂಧಿತ ಶಂಕಿತ ಉಗ್ರನಿಗೆ ನೆಲಸಲು ಅವಕಾಶ ಮಾಡಿಕೊಟ್ಟಿದ್ದಲ್ಲದೆ ಮೊಬೈಲ್ ಫೋನ್ ಪಡೆಯಲು, ಹಾಗೂ ಇತರ ದಾಖಲೆಗಳನ್ನು ಪಡೆಯಲು ಸ್ಥಳೀಯರೂ ಸಹಾಯ ಮಾಡಿದ್ದಾರೆ ಎಂಬುದರ ಬಗ್ಗೆಯೂ ತನಿಖೆ ನಡೆಯುತ್ತಿದೆ. ತಪ್ಪಿತಸ್ಥರ ವಿರುದ್ಧ ಮೊಕದ್ದಮೆ ದಾಖಲಿಸಿ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಗೃಹ ಸಚಿವರು ತಿಳಿಸಿದ್ದಾರೆ. ಜಮ್ಮು ಕಾಶ್ಮೀರದ ಉಗ್ರನನ್ನು ಪತ್ತೆ ಹಚ್ಚಲು ರಾಜ್ಯದ ಪೊಲೀಸರೂ ಸಹಕರಿಸಿದ್ದು ಹೆಚ್ಚಿನ ವಿಚಾರಣೆಗಾಗಿ, ರಾಜ್ಯದ ಪೊಲೀಸರು ಜಮ್ಮು ಕಾಶ್ಮೀರದ ಪೊಲೀಸರೊಂದಿಗೆ ಸಂಪರ್ಕ ಹೊಂದಿದ್ದು, ತನಿಖೆ ಮುಂದುವರೆದಿದೆ ಎಂದು ಅವರು ಸ್ಪಷ್ಟಪಡಿಸಿದರು.

English summary
Man from Tamil Nadu threatened to Wreck 4 RSS Offices in Karnataka ; Security Tightened says Home Minister Araga Jnanendra.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X