ಕನಕಪುರ : ತಮ್ಮನಿಂದಲೇ ಅಣ್ಣನ ಕೊಲೆ

ಬೆಂಗಳೂರು, ಆ.12 : ತಾಯಿಯನ್ನು ಸರಿಯಾಗಿ ನೋಡಿಕೊಳ್ಳದ ಅಣ್ಣನನ್ನು ತಮ್ಮನೇ ಕೊಲೆ ಮಾಡಿರುವ ಘಟನೆ ಕನಕಪುರದಲ್ಲಿ ಸೋಮವಾರ ರಾತ್ರಿ ನಡೆದಿದೆ. ಕೊಲೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ಮುಂದುವರೆಸಿದ್ದಾರೆ.

ಕನಕಪುರ ತಾಲೂಕಿನ ಹಾರೋಹಳ್ಳಿ ಹೋಬಳಿಯ ಬಡೇಸಾಬರದೊಡ್ಡಿ ಗ್ರಾಮದ ನಿವಾಸಿಯಾದ ಚಂದ್ರೇಖರ್ (37) ಅವರನ್ನು ತಮ್ಮ ಗಂಗಾಧರ್ (34) ಕೊಲೆ ಮಾಡಿದ್ದಾರೆ. ತಾಯಿಯನ್ನು ಸರಿಯಾಗಿ ನೋಡಿಕೊಳ್ಳಲಿಲ್ಲ ಎಂದು ಗಂಗಾಧರ್ ಅಣ್ಣನನ್ನು ಕೊಲೆ ಮಾಡಿದ್ದಾನೆ ಎಂದು ಸ್ಥಳೀಯರು ಹೇಳಿದ್ದಾರೆ.

murder

ತಾಯಿಯನ್ನು ನೋಡಿಕೊಳ್ಳುವ ವಿಚಾರಕ್ಕೆ ಸಂಬಂಧಿಸಿದಂತೆ ಅಣ್ಣ-ತಮ್ಮನ ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಸೋಮವಾರ ರಾತ್ರಿ ಇದೇ ವಿಚಾರದ ಕುರಿತು ಅಣ್ಣ-ತಮ್ಮನ ನಡುವೆ ಜಗಳ ನಡೆದಿದೆ. ಆಗ ತಮ್ಮ ಸಿಮೆಂಟ್ ಇಟ್ಟಿಗೆಯಿಂದ ಅಣ್ಣನ ತಲೆಗೆ ಹೊಡೆದಿದ್ದಾನೆ. [ಮಗಳ ಪ್ರಿಯಕರನ ರುಂಡ ಚೆಂಡಾಡಿ ಶರಣಾದ ಅಪ್ಪ]

ತಲೆಗೆ ಬಲವಾದ ಪೆಟ್ಟು ಬಿದ್ದಿದ್ದರಿಂದ ಚಂದ್ರೇಶಖರ್ ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ. ಈ ಸಂದರ್ಭದಲ್ಲಿ ತಾಯಿ ಕೂಗಿಕೊಂಡಾಗ ಸ್ಥಳೀಯರು ಓಡಿಬಂದಿದ್ದಾರೆ. ತೀವ್ರ ರಕ್ತಸ್ರಾವದಿಂದಾಗಿ ಚಂದ್ರಶೇಖರ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಸ್ಥಳದಿಂದ ಪರಾರಿಯಾಗಲು ಯತ್ನಿಸಿದ ಗಂಗಾಧರ್ ನನ್ನು ಹಿಡಿದ ಸ್ಥಳೀಯರು, ತಕ್ಷಣ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಗಂಗಾಧರ್ ನನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

ಮಂಗಳೂರು : ಬಂಟ್ವಾಳ ತಾಲೂಕು ಪುದು ಗ್ರಾಮದ ರಿಕ್ಷಾಚಾಲಕ ಮಹಮ್ಮದ್‌ ರಿಫಾಯಿ ಅವರ ಕೊಲೆ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು, ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡಬೇಕೆಂದು ಒತ್ತಾಯಿಸಿ ಆ. 13ರಂದು ಬೆಳಗ್ಗೆ 11 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಆಟೋ ಚಾಲಕರು ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+