ಪ್ರಿಯಕರನಿಂದ ಪ್ರಿಯತಮೆ, ಪತ್ನಿಯಿಂದ ಪತಿ ಹತ್ಯೆ
ಮಂಗಳೂರು, ಡಿ.17 : ಪ್ರಿಯತಮೆಯನ್ನು ಪ್ರಿಯಕರನೇ ಕೊಲೆ ಮಾಡಿ ಆತನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಪಡುಬಿದ್ರೆಯಲ್ಲಿ ನಡೆದಿದೆ. ಪತ್ನಿಯೇ ಪತಿಯನ್ನು ಕೊಲೆ ಮಾಡಿ ತಾನು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರಿನಲ್ಲಿ ನಡೆದಿದೆ.
ಪಡುಬಿದ್ರೆಯಲ್ಲಿ ಕೊಲೆಯಾದವರನ್ನು ತಾರಾ ದೇವಾಡಿಗ (38) ಎಂದು ಗುರುತಿಸಲಾಗಿದೆ. ಆತ್ಮಹತ್ಯೆ ಮಾಡಿಕೊಂಡವನನ್ನು ನವೀನ್ ದೇವಾಡಿಗ (40) ಎಂದು ತಿಳಿದು ಬಂದಿದೆ. ನವೀನ್‌ಗೆ ಇಬ್ಬರು ಗಂಡು ಮಕ್ಕಳಿದ್ದು, ಹೆಂಡತಿಗೆ ವಿಚ್ಛೇದನ ನೀಡಿದ್ದರು. ತಾರಾ ಅವರಿಗೂ ಇಬ್ಬರು ಗಂಡು ಮಕ್ಕಳಿದ್ದು, ಗಂಡನಿಂದ ದೂರವಿದ್ದರು.

ನವೀನ್ ತಾರಾಳ ಕತ್ತು ಕೊಯ್ದು ಕೊಲೆ ಮಾಡಿದ್ದು, ಬಳಿಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇಬ್ಬರು ಕಳೆದ ಕೆಲ ದಿನಗಳಿಂದ ಸಂಬಂಧ ಹೊಂದಿದ್ದರು ಮತ್ತು ಒಂದೇ ಮನೆಯಲ್ಲಿ ವಾಸವಾಗಿದ್ದರು ಎಂದು ಸ್ಥಳೀಯರು ಹೇಳಿದ್ದಾರೆ. ಮಂಗಳವಾರ ರಾತ್ರಿ ಕೊಲೆ ನಡೆದಿರಬಹುದು ಎಂದು ಶಂಕಿಸಲಾಗಿದ್ದು, ಇಂದು ಬೆಳಗ್ಗೆ ಪ್ರಕರಣ ಬೆಳಕಿಗೆ ಬಂದಿದೆ. [ಚಿತ್ರ : ಐಸಾಕ್ ರಿಚರ್ಡ್, ಮಂಗಳೂರು]
ಮೈಸೂರು : ಪತ್ನಿಯೇ ಪತಿಯನ್ನು ಕೊಲೆ ಮಾಡಿ ಆಕೆಯೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ಸರಸ್ವತಿಪುರಂನಲ್ಲಿ ಬುಧವಾರ ಮಧ್ಯಾಹ್ನ ನಡೆದಿದೆ. ಸ್ಥಳಕ್ಕೆ ಪೊಲೀಸರು ತೆರಳಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.












Click it and Unblock the Notifications