ವಿಟ್ಲದಲ್ಲಿ ವ್ಯಕ್ತಿ ನೇಣಿಗೆ ಶರಣು, ಆತ್ಮಹತ್ಯೆ ಶಂಕೆ
ಮಂಗಳೂರು, ಫೆಬ್ರವರಿ 11 : ಯುವಕನೊಬ್ಬ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪ ಶನಿವಾರ ಪತ್ತೆಯಾಗಿದೆ. ಆತ್ಮಹತ್ಯೆ ಎಂದು ಹೇಳಲಾಗುತ್ತಿದೆ.
ಮೃತರನ್ನು ಪುತ್ತೂರು ತಾಲೂಕಿನ ಕುಂಬ್ರ ನಿವಾಸಿ ಸಿದ್ದೀಕ್(42) ಎಂದು ಗುರುತಿಸಲಾಗಿದೆ. ವಿಟ್ಲ ಸಮೀಪದ ವೀರಕಂಬ ಗ್ರಾಮದ ಮಜ್ಜೋನಿ ಗಾಮದವರು ಎನ್ನಲಾಗಿದೆ. ಇವರು ವಿಟ್ಲದ ಅಡಿಕೆ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.[ಬನ್ನೂರಿನಲ್ಲಿ ತಾಯಿ- ಮಗು ನೇಣಿಗೆ ಶರಣು]

ಸಿದ್ದೀಕ್, ರಸ್ತೆ ಬದಿಯ ಗುಡ್ಡದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












Click it and Unblock the Notifications