ವಿಧಾನಸೌಧದಲ್ಲಿ ಕತ್ತು ಕೊಯ್ದುಕೊಂಡು ವ್ಯಕ್ತಿ ಆತ್ಮಹತ್ಯೆ ಯತ್ನ
ಬೆಂಗಳೂರು, ಜೂನ್ 24 : ವಿಧಾನಸೌಧದಲ್ಲಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನ ನಡೆಸಿದ್ದಾರೆ. ಶೌಚಾಲಯದಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದು ಗಾಯಗೊಂಡಿರುವ ಅವರನ್ನು ಬೌರಿಂಗ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ವಿಧಾನಸೌಧದ 3ನೇ ಮಹಡಿಯ 332 ನೇ ಕೊಠಡಿ ಸಮೀಪದ ಶೌಚಾಲಯದಲ್ಲಿ ರೇವಣ್ಣ ಕುಮಾರ್ (45) ಎಂಬುವವರು ಸೋಮವಾರ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನ ನಡೆಸಿದ್ದಾರೆ. ಗಾಯಗೊಂಡು ನರಳಾಡುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ರೇವಣ್ಣ ಕುಮಾರ್ ಚಿಕ್ಕಬಳ್ಳಾಪುರ ಜಿಲ್ಲೆಯ ಹಾನೂರು ಗ್ರಾಮದವರು ಎಂದು ತಿಳಿದುಬಂದಿದೆ. ರೇವಣ್ಣ ಕತ್ತುಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಲು ಕಾರಣವೇನು? ಎಂಬುದು ಇನ್ನೂ ತಿಳಿದುಬಂದಿಲ್ಲ.
ರೇವಣ್ಣ ಕುಮಾರ್‌ನನ್ನು ಬೌರಿಂಗ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ರೇವಣ್ಣ ಕುಮಾರ್ ಹಲವಾರು ಕಡತಗಳನ್ನು ಹಿಡಿದುಕೊಂಡು ಸೋಮವಾರ ವಿಧಾನಸೌಧಕ್ಕೆ ಆಗಮಿಸಿದ್ದರು. ವಿಧಾನಸೌಧ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ರೇವಣ್ಣ ಕುಮಾರ್ ಬ್ಲೇಡ್‌ನಿಂದ ಕತ್ತು ಮತ್ತು ಕೈಯನ್ನು ಕೊಯ್ದುಕೊಂಡಿದ್ದಾರೆ. ರೇವಣ್ಣ ಕುಮಾರ್ ಎಂ.ಎಸ್.ಬಿಲ್ಡಿಂಗ್‌ನಲ್ಲಿ ಗುತ್ತಿಗೆ ನೌಕರನಾಗಿ ಕೆಲಸ ಮಾಡುತ್ತಿದ್ದ ಎಂಬ ಮಾಹಿತಿ ಲಭ್ಯವಾಗಿದೆ.











Click it and Unblock the Notifications