ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಂಡ್ಯದ 5 ರೂ. ಡಾಕ್ಟರ್ ಶಂಕರೇಗೌಡ ಗುಣಮುಖ: ಶೀಘ್ರದಲ್ಲಿಯೇ ಮತ್ತೆ ರೋಗಿಗಳ ಸೇವೆಗೆ

|
Google Oneindia Kannada News

ಬೆಂಗಳೂರು, ಜೂ. 24: ಐದು ರೂಪಾಯಿ ಟ್ರೀಟ್‌ಮೆಂಟ್ ಖ್ಯಾತಿಯ ಡಾ. ಶಂಕರೇಗೌಡ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ. ಹೃದಯಾಘಾತಕ್ಕೆ ಒಳಗಾಗಿ ಚಿಕಿತ್ಸೆಗೆ ಒಳಗಾಗಿದ್ದ ಮಂಡ್ಯದ ಐದು ರೂಪಾಯಿ ಡಾಕ್ಟರ್ ಖ್ಯಾತಿಯ ಶಂಕರೇಗೌಡ ಅವರು ಕೆಲ ದಿನಗಳ ವಿಶ್ರಾಂತಿ ಬಳಿಕ ಮರಳಿ ತಮ್ಮ ಕಾಯಕ ಮುಂದುವರಿಸಲಿದ್ದಾರೆ.

ಐದು ರೂಪಾಯಿ ಡಾಕ್ಟರ್ ಎಂದೇ ಖ್ಯಾತಿ ಪಡೆದಿದ್ದ ಮಂಡ್ಯದ ಡಾ. ಶಂಕರೇಗೌಡ ಅವರು ಹೃದಯಾಘಾತಕ್ಕೆ ಒಳಗಾಗಿ ಅನಾರೋಗ್ಯಕ್ಕೆ ಒಳಗಾಗಿದ್ದರು. ಅವರನ್ನು ಮೈಸೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆ ಬಳಿಕ ಫೋರ್ಟಿಸ್ ಆಸ್ಪತ್ರೆಗೆ ವರ್ಗಾವಣೆ ಮಾಡಲಾಗಿತ್ತು.ಇದೀಗ ಅನಾರೋಗ್ಯದಿಂದ ಗುಣಮುಖರಾಗಿದ್ದಾರೆ. ಕೆಲದಿನಗಳ ವಿಶ್ರಾಂತಿ ಬಳಿಕ ಐದು ರೂಪಾಯಿ ಚಿಕಿತ್ಸೆ ಮುಂದುವರೆಸುವುದಾಗಿ ಡಾ. ಶಂಕರೇಗೌಡ ಸ್ಪಷ್ಟನೆ ನೀಡಿದ್ದಾರೆ.

 ವೈರಲ್ ವಿಡಿಯೋ: ಯಾವ ಡಾಕ್ಟರ್ ಗುರು ಇವರು ಹೀಗೆ ಸಗಣಿ ತಿಂತವ್ರೆ? ವೈರಲ್ ವಿಡಿಯೋ: ಯಾವ ಡಾಕ್ಟರ್ ಗುರು ಇವರು ಹೀಗೆ ಸಗಣಿ ತಿಂತವ್ರೆ?

ನನ್ನ ಆರೋಗ್ಯದ ಬಗ್ಗೆ ಕಾಳಜಿ ವಹಿಸಿದ ವೈದ್ಯರಿಗೆ ಧನ್ಯವಾದಗಳು. ಪ್ರತಿಯೊಬ್ಬರು ಹೆಚ್ಚಿನ ಕಾಳಜಿಯಿಂದ ಚಿಕಿತ್ಸೆ ನೀಡಿದ್ದಾರೆ. ಜೊತೆಗೆ ನನ್ನ ಆರೋಗ್ಯದ ಸುಧಾರಣೆಗೆ ಕಾಳಜಿ ವಹಿಸಿದ ಪ್ರತಿಯೊಬ್ಬರಿಗೂ ನಾನು ಋಣಿ. ಸದ್ಯ ನಾನು ಸಂಪೂರ್ಣವಾಗಿ ಗುಣವಾಗಿದ್ದು , ವೈದ್ಯರ ಸಲಹೆ ಮೇರೆಗೆ 6 ವಾರಗಳು ವಿಶ್ರಾಂತಿ ಪಡೆದು ಬಳಿಕ, ಹಿಂದಿನಂತೆ 5

Mandya 5 Rupees Doctor Shankaregowda will start free treatment to needy people very soon

ರೂಪಾಯಿ ಚಿಕಿತ್ಸೆ ಮುಂದುವರೆಸುವೆ ಎಂದು ಶಂಕರೇಗೌಡ ಸ್ಪಷ್ಟಪಡಿಸಿದ್ದಾರೆ.

ಕಳೆದ 42 ವರ್ಷದಿಂದ ಮಂಡ್ಯದಲ್ಲಿ ಉಚಿತವಾಗಿ ಚಿಕಿತ್ಸೆ ನೀಡುತ್ತಾ ಬಂದಿದ್ದು ನನಗೆ ಆತ್ಮತೃಪ್ತಿ ನೀಡಿದೆ. ಮುಂದೆಯೂ ಕೂಡ ಈ ವೃತ್ತಿ ಮುಂದುವರೆಸಿಕೊಂಡು ಹೋಗಲಿದ್ದೇನೆ. ಕೇವಲ ವೈದ್ಯನಲ್ಲದೇ ಕೃಷಿಕನಾಗಿಯೂ ನಾನು ದುಡಿದ್ದೇನೆ. 2010 ರಲ್ಲಿ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದೆ. ರಾಜಕೀಯಕ್ಕೆ ಕಾಲಿಟ್ಟ ಮೇಲೂ ಜನರಿಗೆ ಉಚಿತವಾಗಿ ಚಿಕಿತ್ಸೆ ನೀಡುವ ಕಸುಬು ಬಿಡಲಿಲ್ಲ ಎಂದು ತನ್ನ ಸೇವೆಯನ್ನು ಸ್ಮರಿಸಿದರು.

ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು:

ಒಂದು ತಿಂಗಳ ಹಿಂದೆ ಹೃದಯದಲ್ಲಿ ರಕ್ತದ ನಾಳಗಳು ಬ್ಲಾಕ್‌ ಆಗಿದ್ದ ಕಾರಣ ಹೃದಯಾಘತ ಸಂಭವಿಸಿತ್ತು. ಕೂಡಲೇ ಮೈಸೂರಿನಲ್ಲಿರುವ ಆಸ್ಪತ್ರೆಗೆ ದಾಖಲಾದೆ. ಆದರೆ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

Mandya 5 Rupees Doctor Shankaregowda will start free treatment to needy people very soon

ಹೃದಯ ತಜ್ಞ ಡಾ. ವಿವೇಕ್‌ ಜವಳಿ ಮಾತನಾಡಿ, "67 ವರ್ಷ ವಯಸ್ಸಿನ ಡಾ. ಶಂಕರೇಗೌಡ ಅವರು ಮಂಡ್ಯದಲ್ಲಿ ತೀವ್ರ ಹೃದಯಾಘಾತಕ್ಕೆ ಒಳಗಾಗಿದ್ದರು, ಇದರಿಂದ ಅವರ ಹೃದಯವು ಹೆಚ್ಚಿನ ಹಾನಿಗೆ ಒಳಗಾಗಿತ್ತು. ಪ್ರಾರಂಭದಲ್ಲಿ ಮೈಸೂರು ಆಸ್ಪತ್ರೆಗೆ ದಾಖಲಿಸಿತ್ತಾದರೂ ಎದೆನೋವು ಹೆಚ್ಚಳವಾದ್ದರಿಂದ ಅವರನ್ನು ಬೆಂಗಳೂರಿನ ಫೋರ್ಟಿಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಹಲವು ಪರೀಕ್ಷೆಗಳ ನಂತರ ಅವರಿಗೆ ಪರಿಧಮನಿಯ ಸಿಂಡ್ರೋಮ್ ಮತ್ತು ಮಯೋಕಾರ್ಡಿಯಲ್ ಇನ್‌ಫೆಕ್ಷನ್ ಆಗಿರುವುದು ಕಂಡು ಬಂತು. ಜೊತೆಗೆ, ಟ್ರಿಪಲ್ ವೆಸಲ್ ಪರಿಧಮನಿಯ ಕಾಯಿಲೆಯಿಂದಲೂ ಸಹ ಬಳಲುತ್ತಿದ್ದು, ಉಸಿರಾಟದ ತೊಂದರೆಯನ್ನು ಹೊಂದಿದ್ದರು.ಅದೃಷ್ಟವಶಾತ್‌ ಅವರಿಗೆ ಸೂಕ್ತ ಸಮಯದಲ್ಲಿ ಸೂಕ್ತ ಚಿಕಿತ್ಸೆ ನೀಡುವ ಮೂಲಕ ಅವರನ್ನು ಪ್ರಾಣಾಪಾಯದಿಂದ ರಕ್ಷಿಸಲಾಗಿದೆ. ಅವರು ವಿಶ್ರಾಂತಿ ಪಡೆದು ಅವರ ಆರೋಗ್ಯ ಸ್ಥಿರವಾದ ಬಳಿಕ ಅವರಿಗೆ ಪರಿಧಮನಿಯ ಆಂಜಿಯೋಪ್ಲ್ಯಾಸ್ಟಿಗೆ ಒಳಗಾಗಲು ಮತ್ತೊಮ್ಮೆ ಆಸ್ಪತ್ರೆಗೆ ದಾಖಲಿಸಿಕೊಂಡಿದ್ದೆವು. ಇದೀಗ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆದಿದ್ದು, ಶಂಕರೇಗೌಡ ಅವರು ಚೇತರಿಸಿಕೊಂಡಿದ್ದಾರೆ," ಎಂದು ತಿಳಿಸಿದ್ದಾರೆ.

English summary
Heart attack to Mandya 5 Rs doctor Shankaregowda : After the bed rest Will strat free treatment for public says Dr Shankaregowda know more
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X