• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಜಲಸಮಾಧಿ: ಮಂಡ್ಯದ ಏಳು ಜನರಿಗೆ ಪರಿಹಾರ

|

ಬೆಂಗಳೂರು, ಜೂನ್ 15: ನಿನ್ನೆ ಕರಾಳ ಭಾನುವಾರ ಆಗಿದ್ದ ಮಂಡ್ಯ ಜಿಲ್ಲೆಯಲ್ಲಿ ಅಕಾಲಿಕ ಮರಣ ಹೊಂದಿದ್ದವರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪರಿಹಾರ ಘೋಷಣೆ ಮಾಡಿದ್ದಾರೆ. ಜಿಲ್ಲೆಯಲ್ಲಿ ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಜೂನ್ 14 ರಂದು ಜಲಸಮಾಧಿಯಾದ ಏಳು ಮಂದಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಒಟ್ಟು 22 ಲಕ್ಷ ರೂ.ಗಳ ಪರಿಹಾರವನ್ನು ಒದಗಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚಿಸಿದ್ದಾರೆ.

ನಾಗಮಂಗಲ ತಾಲ್ಲೂಕಿನ ಬೀರನಹಳ್ಳಿಯ ಗೀತಾ, ಕು. ಸವಿತಾ ಹಾಗೂ ಕು. ಸೌಮ್ಯ ಅವರಿಗೆ ತಲಾ 5 ಲಕ್ಷ ರೂ. ಗಳು ಹಾಗೂ ಅದೇ ತಾಲೂಕಿನ ಚೋಳಸಂದ್ರ ಗ್ರಾಮದ ಕು. ರಶ್ಮಿ ಮತ್ತು ಕು.ಇಂಚರಾ, ಕೆ.ಆರ್. ಪೇಟೆ ತಾಲ್ಲೂಕಿನ ಹುಳಿಗಂಗನಹಳ್ಳಿಯ ಬಾಲಕ ಅಭಿಷೇಕ್ ಮತ್ತು ಆದಿಹಳ್ಳಿಯ ಕುಮಾರ್ ಅವರುಗಳಿಗೆ ತಲಾ 2 ಲಕ್ಷ ರೂ.ಗಳನ್ನು ಪರಿಹಾರ ನಿಧಿಯಿಂದ ತುರ್ತಾಗಿ ನೀಡುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮುಖ್ಯಮಂತ್ರಿ ಗೃಹಕಚೇರಿ ಕೃಷ್ಣಾದಲ್ಲಿ ಪರಿಹಾರವನ್ನು ಸಿಎಂ ಘೋಷಣೆ ಮಾಡಿದ್ದಾರೆ.

English summary
CM announces relief for 7 people who died Accidentally in Mandya district
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X