ಕೋಮು ಘರ್ಷಣೆ: ಕರ್ನಾಟಕಕ್ಕೂ ಬೇಕಿದೆ ಬುಲ್ಡೋಜರ್ ಕಾರ್ಯಾಚರಣೆ: ಆರ್.ಅಶೋಕ್ ಹೇಳಿದ್ದೇನು
ಬೆಂಗಳೂರು, ಸೆಪ್ಟಂಬರ್ 13: ಮೂಲಭೂತವಾದಿಗಳಿಗೆ ಬೆಂಬಲ ನೀಡುವ ತಾಲಿಬಾನ್ ಸರ್ಕಾರ ಕರ್ನಾಟಕದಲ್ಲಿದೆ. ಈ ಕಾಂಗ್ರೆಸ್ ಸರ್ಕಾರ, ಮುಸ್ಲಿಂ ಮತಾಂಧರನ್ನು ಓಲೈಸಲು ಹಿಂದೂಗಳನ್ನು ಬಲಿಕೊಡಲೂ ಸಿದ್ಧವಿದೆ. ಸದ್ಯ ನಾಗಮಂಗಲ ಗಲಭೆಯಲ್ಲಿ ಹಿಂದೂಗಳ ಮೇಲೆ ಎಫ್‌ಐಆರ್ ರದ್ದಗೊಳಿಸದಿದ್ದರೆ ಉಗ್ರ ಹೋರಾಟ ಮಾಡಲಾಗುವುದು ಎಂದು ಬಿಜೆಪಿ ವಿಪಕ್ಷ ನಾಯಕ ಆರ್.ಅಶೋಕ ಎಚ್ಚರಿಸಿದರು.
ನಾಗಮಂಗಲದ ಕೋಮು ಗಲಭೆ ಪ್ರಕರಣವನ್ನು ಕಾಂಗ್ರೆಸ್ ಸರ್ಕಾರ ನಿರ್ವಹಣೆ ರೀತಿಯನ್ನು ನೋಡಿದ ಆರ್.ಅಶೋಕ ಅವರು ಕಟು ಮಾತುಗಳಿಂದ ಸರ್ಕಾರದ ಆಡಳೀತ ಟೀಕಿಸಿ ಸರಣಿ ಟ್ವೀಟ್ ಮಾಡಿದ್ದಾರೆ. ಅಲ್ಲದೇ ಈ ಒಂದಷ್ಟು ಪ್ರಶ್ನೆಗಳಿಗೆ ಉತ್ತರಿಸಿ ಎಂದು ಅವರು ಆಗ್ರಹಿಸಿದ್ದಾರೆ.

ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಮುಸ್ಲಿಂ ಮತಾಂಧರು ನಡೆಸಿದ ಕೋಮುದಳ್ಳುರಿಯಲ್ಲಿ ಅಂಗಡಿ, ಮುಂಗಟ್ಟು, ಸರಕು-ಸರಂಜಾಮು ಸೇರಿದಂತೆ ಒಟ್ಟು ಸುಮಾರು 25 ಕೋಟಿ ರೂಪಾಯಿಗೂ ಹೆಚ್ಚು ಮೊತ್ತದ ಆಸ್ತಿ ನಷ್ಟವಾಗಿದೆ.
ಗಲಭೆ ವೇಳೆ ಮತಾಂಧರು ಕಲ್ಲು ತೂರಾಟ, ಪೆಟ್ರೋಲ್ ಬಾಂಬ್ ಎಸೆತ, ವಾಹನಗಳಿಗೆ ಬೆಂಕಿ ಹಚ್ಚುವುದು, ಶೋರೂಂಗಳಲ್ಲಿ ದ್ವಿಚಕ್ರ ವಾಹನ ಕಳ್ಳತನ ಮುಂತಾದ ದುಷ್ಕೃತ್ಯ ಎಸಗಿದ ಪುಂಡರನ್ನು ಪತ್ತೆ ಹಚ್ಚಿ, ಉತ್ತರ ಪ್ರದೇಶದ ಮಾದರಿಯಲ್ಲಿ ಅವರ ಮನೆಗಳ ಮೇಲೆ ಬುಲ್ಡೋಜರ್ ಕಾರ್ಯಾಚರಣೆ ಮಾಡಿದರೆ ಮಾತ್ರ ಇಂತಹವರಿಗೆ ತಕ್ಕ ಪಾಠ ಕಲಿಸಲು ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ನಾಗರಿಕರನ್ನು ರಕ್ಷಿಸಬೇಕಾದ ಸರ್ಕಾರವೇ ಪೂರ್ವ ನಿಯೋಜಿತ ಕೋಮು ಗಲಭೆಯನ್ನು ಸಣ್ಣ ಘಟನೆ, ಆಕಸ್ಮಿಕ ಘಟನೆ ಎಂದು ನಿರ್ಲಕ್ಷ್ಯ ಮಾಡಿದರೆ ಜನ ಸಾಮಾನ್ಯರ ರಕ್ಷಣೆ ಮಾಡುವವರು ಯಾರು? ಜನಸಾಮಾನ್ಯರು ನೆಮ್ಮದಿಯಿಂದ ತಮ್ಮ ಉದ್ಯೋಗ, ವ್ಯಾಪಾರ ಮಾಡುವುದಾದರೂ ಹೇಗೆ? ಎಂದು ಆರ್.ಅಶೋಕ ಪ್ರಶ್ನಿಸಿದ್ದಾರೆ.

ಕ್ರಮ ಕೈಗೊಳ್ಳದಿದ್ದರೆ ಶಾಂತಿ, ಸುವ್ಯವಸ್ಥೆ ಅಪರೂಪ
ಸರ್ಕಾರ ಈಗಲಾದರೂ ಎಚ್ಚೆತ್ತುಕೊಂಡು ಈ ಮತಾಂಧರ ವಿರುದ್ಧ ಕಠಿಣ ಕ್ರಮ ಕೈಗೊಳ್ಳದಿದ್ದರೆ ಮುಂದೊಂದು ದಿನ ನಮ್ಮ ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಎಂಬುದೇ ಆಕಸ್ಮಿಕ, ಅಪರೂಪವಾಗುವ ದಿನ ಬಹಳ ದೂರವಿಲ್ಲ ಎಂದು ಅವರು ಹೇಳಿದ್ದಾರೆ.
ಮಂಡ್ಯ ಜಿಲ್ಲೆಯ ನಾಗಮಂಗಲದ ಗಣೇಶ ವಿಸರ್ಜನೆ ವೇಳೆ ನಡೆದ ಕೋಮು ಗಲಭೆ ಬಗ್ಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಬೇಜವಾಬ್ದಾರಿ, ನಿರ್ಲಕ್ಷ್ಯದ ಹೇಳಿಕೆ ನೋಡಿದರೆ, ರಾಜ್ಯದಲ್ಲಿರುವುದು ಮೂಲಭೂತವಾದಿಗಳಿಗೆ ಬೆಂಬಲ ಕೊಡುವ ತಾಲಿಬಾನ್ ಸರ್ಕಾರ ಎಂಬುದು ಮತ್ತೊಮ್ಮೆ ಸಾಬೀತಾಗಿದೆ ಎಂದು ಅವರು ದೂರಿದರು.
ಗಣೇಶ ವಿಸರ್ಜನೆಯ ಮೆರವಣಿಗೆಗೆ ಕಾದು, ಕಲ್ಲುಗಳ ರಾಶಿ, ಪೆಟ್ರೋಲ್ ಬಾಂಬು, ತಲ್ವಾರ್‌ಗಳನ್ನು ಸಂಗ್ರಹಿಸಿಟ್ಟುಕೊಂಡು ಸಂಪೂರ್ಣ ಪೂರ್ವನಿಯೋಜಿತವಾಗಿ ಹಿಂದೂಗಳನ್ನು ಗುರಿಯಾಗಿಸಿಕೊಂಡು ದುಷ್ಕೃತ್ಯ ನಡೆಸಲಾಗಿದೆ. ಇದು ಸ್ಪಷ್ಟವಾಗಿ ಕಾಣುತ್ತಿದ್ದರೂ, ಇದು ಆಕಸ್ಮಿಕ ಘಟನೆ, ಸಣ್ಣ ಘಟನೆ ಎಂದು ಸರ್ಕಾರ ತಿಪ್ಪೆ ಸಾರಿಸುವಂತೆ ಮಾತಾಡುತ್ತಿದೆ ಎಂದು ಗುಡುಗಿದರು.
ಈ ಪ್ರಶ್ನೆಗಳಿಗೆ ಉತ್ತರಿಸಿ: ಆರ್.ಅಶೋಕ
* ಕಳೆದ ವರ್ಷ ಅದೇ ಸ್ಥಳದಲ್ಲೇ ಗಲಭೆ ಆಗಿದ್ದರೂ ಈ ವರ್ಷ ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಿಲ್ಲವೇಕೆ?
* ಪಟ್ಟಣದಲ್ಲಿದ್ದ ಡಿಎಆರ್ ವ್ಯಾನ್ ಅನ್ನು ಮೆರವಣಿಗೆ ಆರಂಭವಾದ ಬಳಿಕ ಬೇರೆಡೆ ಕಳುಹಿಸಿದ್ದು ಏಕೆ?
* ಬುಧವಾರ ರಾತ್ರಿ ಗಲಭೆ ಆರಂಭವಾಗಿ ಎರಡು ಗಂಟೆ ಕಳೆದರೂ ಕೇವಲ 40 ಕಿ.ಮೀ. ದೂರದಲ್ಲಿದ್ದ ಹೆಚ್ಚಿನ ಸಿಬ್ಬಂದಿಯನ್ನು ಏಕೆ ತುರ್ತಾಗಿ ಕರೆಸಿಕೊಳ್ಳಲಿಲ್ಲ?
* ಎ1 ನಿಂದ ಎ23 ವರೆಗೆ ಕೇವಲ ಹಿಂದೂಗಳ ಮೇಲೆ ಎಫ್‌ಐಆರ್ ಮಾಡಿ ನಂತರ ಮುಸ್ಲಿಮರ ಹೆಸರು ಸೇರಿಸಿರುವುದು ಯಾವ ಸೀಮೆ ನ್ಯಾಯ? ಗಲಭೆಕೋರರನ್ನು ರಕ್ಷಣೆ, ಇದು ತುಷ್ಟೀಕರಣದ ಪರಮಾವಧಿ ಅಲ್ಲವೇ?
* ಇಂತಹ ಕೃತ್ಯದ ಇತಿಹಾಸವಿದ್ದರೂ ಗುಪ್ತಚರ ವಿಭಾಗದವರು ಇದರ ಬಗ್ಗೆ ಮಾಹಿತಿ ಕೊಡಲಿಲ್ಲವೇಕೆ? ಇದು ಪೊಲೀಸ್ ಇಲಾಖೆಯ ವೈಫಲ್ಯ ಅಲ್ಲವೇ? ಅಥವಾ ಗುಪ್ತಚರ ಮಾಹಿತಿ ಇದ್ದೂ ನಿರ್ಲಕ್ಷ್ಯ ಮಾಡಲಾಯಿತೇ?
* ಗಣಪತಿ ಮೆರವಣಿಗೆಗೆ ರೂಟ್ ಮ್ಯಾಪ್ ಹಾಕಿಕೊಟ್ಟು ಅನುಮತಿ ನೀಡಿದ್ದರೂ, ಪೊಲೀಸರು ಮಾರ್ಗದುದ್ದಕ್ಕೂ ಭದ್ರತೆ ಯಾಕೆ ನೀಡಲಿಲ್ಲ?
* ಇಷ್ಟಕ್ಕೂ ಮಸೀದಿ ಅಥವಾ ದರ್ಗಾ ಮುಂದೆ ಗಣೇಶೋತ್ಸವ ಮೆರವಣಿಗೆ ಹಾದು ಹೋಗಬಾರದು ಎನ್ನುವುದಕ್ಕೆ ಕರ್ನಾಟಕವೇನು ಇಸ್ಲಾಮಿಕ್ ರಿಪಬ್ಲಿಕ್ಕಾ?
* ಪೊಲೀಸರ ಅನುಮತಿ ಪಡೆದು ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದವರನ್ನೇ ಎಫ್‌ಐಆರ್ ನಲ್ಲಿ ಎ1 ಮಾಡಿರುವುದೇಕೆ? ಎಂದು ಖಾರವಾಗಿ ಪ್ರಶ್ನಿಸಿದರು.
-
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
"ಬೆಂಗಳೂರು: 370 ಎಕ್ರೆ ಜಕ್ಕೂರು ವೈಮಾನಿಕ ಶಾಲೆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ಗೆ ಪ್ಲ್ಯಾನ್'' -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications