ಗ್ರಾಮ ಪಂಚಾಯಿತಿಯಲ್ಲಿ ಅತ್ಯಾಚಾರಕ್ಕೆ ಯತ್ನ, ಅಧ್ಯಕ್ಷ ಬಂಧನ

By: ಒನ್ ಇಂಡಿಯಾ ಪ್ರತಿನಿಧಿ
Subscribe to Oneindia Kannada

ಮಂಡ್ಯ, ಮೇ 28 : ಗ್ರಾಮ ಪಂಚಾಯಿತಿ ನೌಕರಳ ಮೇಲೆ ಕಚೇರಿಯಲ್ಲೇ ಅಧ್ಯಕ್ಷ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಮದ್ದೂರು ತಾಲೂಕಿನ ಕೆಸ್ತೂರು ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ. ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಅಧ್ಯಕ್ಷನನ್ನು ಬಂಧಿಸಲಾಗಿದೆ.

ಕೆಸ್ತೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಚಂದ್ರಹಾಸ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿ. ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದ ಮಹಿಳೆ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಅವಳನ್ನು ಕಚೇರಿಯಲ್ಲಿರುವಂತೆ ಹೇಳಿದ್ದ. [ಗ್ರಾಮ ಸಹಾಯಕರ ವೇತನ 10 ಸಾವಿರ ರೂ.ಗೆ ಏರಿಕೆ]

mandya

ಇತರ ನೌಕರರು ಕೆಲಸ ಮುಗಿಸಿ ಹೋದ ಬಳಿಕ, ಕಚೇರಿಯ ಬಾಗಿಲನ್ನು ಭದ್ರಪಡಿಸಿ, ಆಕೆಯ ಬಳಿಗೆ ಬಂದು ಎಳೆದಾಡಿದ್ದಾನೆ. ಈ ದೃಶ್ಯಗಳು ಕಚೇರಿಯಲ್ಲಿರುವ ಸಿಸಿಟಿವಿಯಲ್ಲಿ ಸೆರೆಯಾಗಿವೆ. ಮಹಿಳೆ ಕಿರುಚಾಡಿದರೂ ಪಕ್ಕದಲ್ಲಿ ಮನೆಯಿಲ್ಲದ ಕಾರಣ ಯಾರಿಗೂ ತಿಳಿದಿಲ್ಲ. ಆತನಿಂದ ಹೇಗೋ ತಪ್ಪಿಸಿಕೊಂಡು ಹೊರ ಬಂದ ಮಹಿಳೆ, ನೇರವಾಗಿ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾಳೆ. [ಪಂಚಾಯಿತಿಗಳಲ್ಲಿ ರಾಷ್ಟ್ರಗೀತೆ, ನಾಡಗೀತೆ ಹಾಡುವುದು ಕಡ್ಡಾಯ]

ಸ್ಥಳಕ್ಕೆ ಆಗಮಿಸಿದ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಿದ್ದಾರೆ. ನಂತರ ಅಧ್ಯಕ್ಷನನ್ನು ಬಂಧಿಸಿ ಅಜ್ಞಾತ ಸ್ಥಳದಲ್ಲಿಟ್ಟು ವಿಚಾರಣೆ ನಡೆಸುತ್ತಿದ್ದಾರೆ. ಕೆಸ್ತೂರು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ. [ಪಂಚಾಯಿತಿ ಫಲಿತಾಂಶದಲ್ಲಿ ಹಿಂಗೂ ಆಯ್ತು ನೋಡಿ!]

ಗ್ರಾಮದಲ್ಲಿ ಪ್ರತಿಭಟನೆ : ಗ್ರಾಮ ಪಂಚಾಯಿತಿ ಸಹಾಯಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಚಂದ್ರಹಾಸ ವಿರುದ್ಧ ಗ್ರಾಮಸ್ಥರು ಗ್ರಾಪಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಅಧ್ಯಕ್ಷ ಸ್ಥಾನದಿಂದ ಅವರನ್ನು ವಜಾಗೊಳಿಸಿ, ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು. ಕೆಸ್ತೂರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ, ಅಧ್ಯಕ್ಷನ ವಿರುದ್ಧ ಘೋಷಣೆಗಳನ್ನು ಕೂಗಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Mandya district Kestur Grama panchayat president Chandrahasa arrested for attempted to rape an woman employee in his office. Case registered in Kestur police station and police station.
Please Wait while comments are loading...