ಕೆಆರ್‌ಎಸ್ ಜಲಾಶಯದಲ್ಲಿ ಎಷ್ಟು ನೀರಿದೆ ಗೊತ್ತಾ?
ಮಂಡ್ಯ, ಮೇ 6 : ಬೆಂಗಳೂರು, ಮೈಸೂರು ಸೇರಿದಂತೆ ವಿವಿಧ ನಗರಗಳಿಗೆ ಕುಡಿಯುವ ನೀರು ಪೂರೈಕೆ ಮಾಡುವ ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ 85 ಅಡಿಗೆ ಕುಸಿದಿದೆ. 68 ಅಡಿಗಳಷ್ಟು ನೀರನ್ನು ಕುಡಿಯುವ ನೀರು ಪೂರೈಕೆ ಮಾಡಲು ಬಳಸಬಹುದಾಗಿದೆ ಎಂದು ಜಲಾಶಯದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕೃಷ್ಣರಾಜ ಸಾಗರ (ಕೆಆರ್‌ಎಸ್) ಜಲಾಶಯದ ಮಟ್ಟ 124 ಅಡಿ. ಮಂಗಳವಾರ ಜಲಾಶಯದ ನೀರಿನ ಮಟ್ಟ 85.1 ಅಡಿ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಜಲಾಶಯದ ನೀರಿನ ಮಟ್ಟ ಕುಸಿಯುತ್ತ ಹೋದರೆ ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಕೊರತೆ ಉಂಟಾಗುವ ಸಾಧ್ಯತೆ ಇದೆ. [ಕಾವೇರಿಗೆ ಬಾಗಿನ ಅರ್ಪಿಸಿ ಧನ್ಯೋಸ್ಮಿ ಎಂದ ಸಿಎಂ]

263 ಕ್ಯುಸೆಕ್ ನೀರು ಜಲಾಶಯಕ್ಕೆ ಹರಿದುಬರುತ್ತಿದ್ದು, 328 ಕ್ಯುಸೆಕ್ ನೀರು ಜಲಾಶಯದಿಂದ ಹೊರಹೋಗುತ್ತಿದೆ.
124 ಅಡಿಯ ಜಲಾಶಯದಲ್ಲಿ ಕುಡಿಯುವ ನೀರು ಪೂರೈಕೆ ಮಾಡಲು 68 ಅಡಿಗಳಷ್ಟು ನೀರನ್ನು ಬಿಡಬಹುದಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. [ಹವಾಮಾನ ಇಲಾಖೆಯಿಂದ ಭಾರೀ ಮಳೆ ಮುನ್ನೆಚ್ಚರಿಕೆ]
ಜಲಾಶಯದಲ್ಲಿ ಲಭ್ಯವಿರುವ 17 ಅಡಿ ನೀರನ್ನು ಕುಡಿಯುವ ನೀರು ಪೂರೈಕೆ ಮಾಡಲು ಇನ್ನು ಬಳಸಬಹುದಾಗಿದೆ. ಜಲಾಶಯದ ನೀರಿನ ಮಟ್ಟ ಇನ್ನೂ ಕುಸಿದರೆ ಬೆಂಗಳೂರು, ಮೈಸೂರು, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗುವ ಸಾಧ್ಯತೆ ಇದೆ. [ಗಾಳಿ ಮಳೆಗೆ ತತ್ತರಿಸಿದ ಬೆಂಗಳೂರು 'ಮಹಾನಗರ']
ಹೆಚ್ಚಿನ ನೀರು ಬರುವ ನಿರೀಕ್ಷೆ : ಜಲಾಶಯಕ್ಕೆ ಮುಂದಿನ ದಿನಗಳಲ್ಲಿ ಹೆಚ್ಚು ನೀರು ಹರಿದುಬರುವ ಸಾಧ್ಯತೆ ಇದೆ. ಕೊಡಗು ಸೇರಿದಂತೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಇದರಿಂದ ಹೆಚ್ಚಿನ ನೀರು ಹರಿದುಬರಬಹುದು ಎಂದು ನಿರೀಕ್ಷಿಸಲಾಗಿದೆ.












Click it and Unblock the Notifications