ಹೈಕಮಾಂಡ್​ ಘೋಷಣೆಗೂ ಮುನ್ನ ಮಂಡ್ಯ ಕಾಂಗ್ರೆಸ್ ಅಭ್ಯರ್ಥಿ ಹೆಸರು ಬಹಿರಂಗ: ಯಾರು ಆ ನಾಯಕ?

ಮಂಡ್ಯ, ಫೆಬ್ರವರಿ 22: 2019 ರ ಲೋಕಸಭಾ ಚುನಾವಣೆಯಲ್ಲಿ ತೀವ್ರ ಜಿದ್ದಾಜಿದ್ದಿನ ಕ್ಷೇತ್ರವಾದ ಮಂಡ್ಯ ಲೋಕಸಭಾ ಕ್ಷೇತ್ರ ಈ ಬಾರಿಯ ಸಹ ಚುನಾವಣಾ ರಂಗು ಜೋರಾಗಿದೆ. ಮಂಡ್ಯ ರಾಜಕಾರಣ ಅಂದರೆ ಇಂಡಿಯಾನೇ ತಿರುಗಿ ನೋಡುತ್ತೆ. ಇದೀಗ ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಚುನಾವಣಾ ಕಾವು ಜೋರಾಗಿದ್ದು, ಕಾಂಗ್ರೆಸ್‌ ಹೈಕಮಾಂಡ್‌ ಘೋಷಣೆಗೂ ಮುನ್ನ ಮಂಡ್ಯ ಕಾಂಗ್ರೆಸ್‌ ಅಭ್ಯರ್ಥಿ ಬಹಿರಂಗವಾಗಿದೆ.

ಹೌದು, ಮಂಡ್ಯ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಆಯ್ಕೆಗೆ ಕಸರತ್ತು ನಡೆಸುತ್ತಿದೆ. ಇನ್ನೊಂದೆಡೆ, ಹೈಕಮಾಂಡ್ ಘೋಷಣೆಗೂ ಮುನ್ನ ಕಾಂಗ್ರೆಸ್ ಶಾಸಕ ರವಿಕುಮಾರ್ ಗಣಿಗ ಅವರು ಮಂಡ್ಯದ ಅಭ್ಯರ್ಥಿ ಹೆಸರು ಘೋಷಣೆ ಮಾಡಿ ಅವರ ಪರ ಪ್ರಚಾರವನ್ನೂ ಆರಂಭಿಸಿದ್ದಾರೆ.

Mandya Lok Sabha Constituency Congress Candidate Name Revealed Before Announcement

ನಾಗಮಂಗಲದ ಉದ್ಯಮಿ ಸ್ಟಾರ್ ಚಂದ್ರು ಅಲಿಯಾಸ್ ವೆಂಕಟರಮಣೇಗೌಡ ಅವರು ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂದು ಕ್ಷೇತ್ರದ ಮತದಾರರಿಗೆ ಶಾಸಕರ ರವಿ ಗಣಿಗ ಅವರು ಪರಿಚಯ ಮಾಡಿಕೊಡುತ್ತಿದ್ದಾರೆ. ಇನ್ನೂ ಮಂಡ್ಯ ಲೋಕಸಭಾ ಚುನಾವಣೆಗೆ ಸ್ಟಾರ್ ಚಂದ್ರು ಅವರನ್ನು ನಿಲ್ಲಿಸುತ್ತಿದ್ದೇವೆ. ಆಶೀರ್ವಾದ ಮಾಡುವಂತೆ ಕಾಂಗ್ರೆಸ್ ಶಾಸಕ ರವಿಕುಮಾರ್ ಗಣಿಗ ಅವರು ಮನವಿ ಮಾಡುತ್ತಿದ್ದಾರೆ.

ಇನ್ನೂ ಇತ್ತಿಚ್ಚಿನ ದಿನದಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲೂ ಕಾಣಿಸಿಕೊಳ್ಳುತ್ತಿರುವ ಸ್ಟಾರ್ ಚಂದ್ರು, ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗಿಯಾಗಿದ್ದ ಕಾರ್ಯಕ್ರಮದಲ್ಲೂ ಕಾಣಿಸಿಕೊಂಡಿದ್ದರು ಅಲ್ಲದೇ ಗುದ್ದಲಿ ಪೂಜೆ ಸೇರಿದಂತೆ ಹಲವು ಕಾರ್ಯಕ್ರಮಗಳಿಗೆ ಶಾಸಕರು ತಮ್ಮ ಜೊತೆಯಲ್ಲೇ ಕರೆದುಕೊಂಡು ಹೋಗುತ್ತಿದ್ದಾರೆ ಎಂದು ಹೇಳಲಾಗಿದೆ.

ಇನ್ನೂ ಮಂಡ್ಯ ಹಾಲಿ ಸಂಸದರಾಗಿರುವ ಸುಮಲತಾ ಅಂಬರೀಶ್‌ ಅವರಿಗೆ ಈ ಬಾರೀ ಬಿಜೆಪಿ ಟಿಕೆಟ್‌ ನೀಡುವುದು ಅನುಮಾನವಾಗಿದೆ. ಈಗಾಗಲೇ ಲೋಕಸಭಾ ಚುನಾವಣೆ ಹಿನ್ನಲೆ ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿಯಾಗಿದ್ದು, ಮಂಡ್ಯ ಲೋಕಸಭಾ ಕ್ಷೇತ್ರಕ್ಕಾಗಿ ಜೆಡಿಎಸ್‌ ನಾಯಕರು ಪಟ್ಟು ಹಿಡಿದಿದ್ದಾರೆ. ಹೀಗಾಗಿ ಕಳೆದು ಕೊಂಡ ಮಂಡ್ಯ ಲೋಕಸಭಾ ಕ್ಷೇತ್ರವನ್ನ ಪಡೆಯುವ ನಿಟ್ಟಿನಲ್ಲಿ ಈ ಬಾರೀ ಜೆಡಿಎಸ್‌ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ಅವರು ಸ್ಪರ್ಧೆ ಮಾಡುವ ಸಾಧ್ಯತೆ ಇದೆ.

ಇತ್ತ ಸುಮಲತಾ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದರೇ ಗೆಲ್ಲುವುದು ಕಷ್ಟ ಸಾಧ್ಯ. ಹಾಗಾಗಿ ಕಾಂಗ್ರೆಸ್‌ ನಿಂದ ಸ್ಪರ್ಧೆ ನಡೆಸುತ್ತಾರಾ ಎನ್ನುವ ಮಾತುಗಳು ಕೇಳಿ ಬಂದಿತ್ತು. ಇತ್ತ ನಟಿ ಹಾಗೂ ಮಾಜಿ ಸಂಸದೆಯಾಗಿರುವ ರಮ್ಯಾ ಅವರು ಸಹ ಈ ಬಾರೀ ಮಂಡ್ಯದಿಂದ ಸ್ಪರ್ಧೆ ನಡೆಸುತ್ತಾರೆ ಎನ್ನುವ ಮಾತುಗಳು ಕೇಳಿ ಬಂದಿತ್ತು. ಆದರೆ, ಈ ಬಾರೀ ಹೊಸ ಅಭ್ಯರ್ಥಿಯನ್ನ ಕಣಕ್ಕಿಳಿಸಲು ಕಾಂಗ್ರೆಸ್‌ ನಾಯಕರು ಈಗಾಗಲೇ ಹಲವು ಸುತ್ತಿನ ಮಾತುಕತೆ ನಡೆಸಿ ಸ್ಟಾರ್‌ ಚಂದ್ರ ಅವರನ್ನ ಅಂತಿಮಗೊಳಿಸಿದ್ದಾರೆ ಎನ್ನಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+