Sumalatha Press Meet : ಪಕ್ಷ ಸೇರ್ಪಡೆ ವದಂತಿ ನಡುವೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಭೇಟಿಯಾದ ಸಂಸದೆ ಸುಮಲತಾ

ಬೆಂಗಳೂರಿನ ವಸಂತನಗರದ ಖಾಸಗಿ ಹೋಟೆಲ್​ನಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಅವರ ಜತೆ ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದ್ದಾರೆ.

ಬೆಂಗಳೂರು, ಮಾರ್ಚ್ 09: ವಿಧಾನಸಭಾ ಚುನಾವಣೆಗೂ ಮುನ್ನ ರಾಜ್ಯ ರಾಜಕೀಯದಲ್ಲಿ ಕುತೂಹಲ ಕೆರಳಿಸಿರುವ ಸಂಸದೆ ಸುಮಲತಾ ಬಿಜೆಪಿ ಸೇರುವ ವಿಚಾರಕ್ಕೆ ಮತ್ತಷ್ಟು ಪುಷ್ಠಿ ಬಂದಿದೆ. ಗುರುವಾರ ರಾತ್ರಿ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಭೇಟಿ ಮಾಡಿದ್ದಾರೆ.

ಬೆಂಗಳೂರಿನ ವಸಂತನಗರದ ಖಾಸಗಿ ಹೋಟೆಲ್​ನಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಅವರ ಜತೆ ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದ್ದಾರೆ. ಬಳಿಕ ಅಲ್ಲಿಂದ ತೆರಳಿದ್ದಾರೆ. ಈ ಭೇಟಿ ಸುಮಲತ ಆಅವರು ಬಿಜೆಪು ಸೇರಲಿದ್ದಾರೆ ಎಂಬುದಕ್ಕೆ ಮತ್ತಷ್ಟು ಪುರಾವೆ ನೀಡಿದೆ. ನಾಳೆ (ಶುಕ್ರವಾರ) ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಭಾರತೀಯ ಜನತಾ ಪಕ್ಷ ಸೇರುವ ನಿರ್ಧಾರವನ್ನು ಸುಮಲತಾ ಅಂಬರೀಶ್ ಪ್ರಕಟಿಸುವ ಸಾಧ್ಯತೆ ಇದೆ.

Mandya MP Sumalatha meets BJP president JP Nadda

ವಿಧಾನಸಭಾ ಚುನಾವಣೆಗೆ ಮುನ್ನ ನಟಿ, ರಾಜಕಾರಣಿ ಸುಮಲತಾ ಅಂಬರೀಶ್ ಆಡಳಿತಾರೂಢ ಬಿಜೆಪಿ ಸೇರಬಹುದು ಎಂಬ ಊಹಾಪೋಹಗಳ ನಡುವೆಯೇ ಸಂಸದೆ ಮಾರ್ಚ್ 10 ರಂದು ಮಂಡ್ಯದ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ಕರೆದಿದ್ದಾರೆ. ಸುಮಲತಾ ಶುಕ್ರವಾರ ಬಿಜೆಪಿ ಸೇರುವ ಸಾಧ್ಯತೆ ಇದೆ ಎಂದು ಜೆಡಿಎಸ್ ಶಾಸಕ ಸಿಎಸ್ ಪುಟ್ಟರಾಜು ಗುರುವಾರ ಭವಿಷ್ಯ ನುಡಿದಿದ್ದು, ಈ ಸುದ್ದಿಗೋಷ್ಠಿ ಮಹತ್ವ ಪಡೆದುಕೊಂಡಿದೆ.

ಮಧ್ಯಾಹ್ನ 12 ಗಂಟೆಗೆ ಮಂಡ್ಯದ ಚಾಮುಂಡೇಶ್ವರಿ ನಗರದಲ್ಲಿರುವ ತಮ್ಮ ನಿವಾಸದಲ್ಲಿ ಸುಮಲತಾ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಮಾರ್ಚ್ 4 ರಂದು ಸುಮಲತಾ ಅಂಬರೀಶ್ ಅವರು ರಾಷ್ಟ್ರೀಯ ಪಕ್ಷ ಸೇರುವ ಬಗ್ಗೆ ಇನ್ನು 15 ದಿನಗಳಲ್ಲಿ ನಿರ್ಧಾರ ತೆಗೆದುಕೊಳ್ಳುವುದಾಗಿ ಹೇಳಿದ್ದರು. ಇದರ ಜೊತೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಈ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದು ಹೇಳಿದ್ದಾರೆ.

Mandya MP Sumalatha meets BJP president JP Nadda

ಮಾರ್ಚ್ 12 ರಂದು ಮದ್ದೂರು ತಾಲೂಕಿನ ಗೆಜ್ಜಲಗೆರೆಯಲ್ಲಿ ಬೆಂಗಳೂರು - ಮೈಸೂರು ಎಕ್ಸ್‌ಪ್ರೆಸ್‌ವೇ ಉದ್ಘಾಟನೆ ಮತ್ತು ಅಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲು ಪ್ರಧಾನಿ ನರೇಂದ್ರ ಮೋದಿ ಅರು ಮಂಡ್ಯಕ್ಕೆ ಭೇಟಿ ನೀಡಲಿದ್ದಾರೆ. ಈ ಕಾರ್ಯಕ್ರಮದ ಬೆನ್ನಲೆ ಈ ಬೆಳವಣಿಗೆ ಕೂಡ ನಡೆದಿದೆ. ಮಂಡ್ಯದಲ್ಲಿ ನಡೆಯಲಿರುವ 1.5 ಕಿ.ಮೀ ಉದ್ದದ ರೋಡ್‌ಶೋನಲ್ಲಿ ಸುಮಲತಾ ಕೂಡ ಭಾಗವಹಿಸುವ ಸಾಧ್ಯತೆ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+