BREAKING: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ ಮಾಡಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್!
ಬೆಂಗಳೂರು, ಜು. 17: ಮಹತ್ವದ ಬೆಳವಣಿಗೆಯಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ಭೇಟಿ ಮಾಡಿ ಚರ್ಚಿಸಿದ್ದಾರೆ. ರಾಜಭವನಕ್ಕೆ ತೆರಳಿದ್ದ ಸಂಸದೆ ಸುಮಲತಾ ಅಂಬರೀಶ್ ಅವರು ಭೇಟಿ ಸಂದರ್ಭದಲ್ಲಿ ರಾಜ್ಯಪಾಲರಿಗೆ ಮನವಿಯೊಂದನ್ನು ಕೊಟ್ಟಿದ್ದಾರೆ.
ಕೆಆರ್‌ಎಸ್ ಅಣೆಕಟ್ಟಿನ ಸುತ್ತಲೂ ಅಕ್ರಮ ಗಣಿಗಾರಿಕೆ ಮಾಡಲಾಗುತ್ತಿದೆ ಎಂಬ ಆರೋಪವನ್ನು ಸಂಸದೆ ಸುಮಲತಾ ಅಂಬರೀಶ್ ಮಾಡಿದ್ದರು. ಆ ಆರೋಪದ ಬೆನ್ನಲ್ಲಿಯೇ ರಾಜ್ಯಪಾಲರನ್ನು ಭೇಟಿ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ. ರಾಜ್ಯಪಾಲರ ಭೇಟಿಯ ಬಳಿಕ ಮಾತನಾಡಿರುವ ಅವರು, "ರಾಜ್ಯಪಾಲರು ಹೊಸದಾಗಿ ಬಂದಿದ್ದಾರೆ. ಹೀಗಾಗಿ ಅವರನ್ನು ಭೇಟಿ ಮಾಡಿ ಶುಭಾಶಯ ಕೋರಿದ್ದೇನೆ" ಎಂದು ಹೇಳಿದ್ದಾರೆ.
"ಮಂಡ್ಯ ಜಿಲ್ಲೆಯಲ್ಲಿನ ಅಕ್ರಮ ಗಣಿಗಾರಿಕೆ ಬಗ್ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ವಿವರಿಸಿದ್ದೇನೆ. ಜೊತೆಗೆ ಕೆಆರ್‌ಎಸ್ ಅಣೆಕಟ್ಟು ಸಮೀಪ ಇರುವುದನ್ನೂ ಹೇಳಿದ್ದೇನೆ. ಈ ಬಗ್ಗೆ ಮನವಿಪತ್ರವೊಂದನ್ನು ರಾಜ್ಯಪಾಲರಿಗೆ ಕೊಟ್ಟಿದ್ದೇನೆ. ಈ ಬಗ್ಗೆ ರಾಜ್ಯ ಸರ್ಕಾರಕ್ಕೆ ಮಾಹಿತಿ ಕೊಡುವುದಾಗಿ ಅವರು ಭರವಸೆ ಕೊಟ್ಟಿದ್ದಾರೆ" ಎಂದು ಸಂಸದೆ ಸುಮಲತಾ ಹೇಳಿದ್ದಾರೆ.

Recommended Video
ಇನ್ನು ಚಿತ್ರನಟ ದರ್ಶನ್ ಹಾಗೂ ಉಮಾಪತಿ ಅವರ ನಡುವೆ ಆಸ್ತಿ ಜಟಾಪಟಿ ವಿಚಾರಕ್ಕೆ ಸಂಬಂಧಿಸಿದಂತೆ ಸುಮಲತಾ ಮಾತನಾಡಿ, "ಪ್ರಕರಣದ ಬಗ್ಗೆ ನಾನು ಮಾತಾಡೋಕೆ ಇಷ್ಟ ಪಡುವಿದಿಲ್ಲ. ನಾನು ಅನಾವಶ್ಯಕವಾಗಿ ಹೇಳಿಕೆ ಕೊಡುವುದು ಸರಿಯಲ್ಲ. ಹೊಟೇಲ್‌ನಲ್ಲಿ ನಡೆದಿದೆ ಎನ್ನಲಾದ ಹಲ್ಲೆ ಬಗ್ಗೆ ತನಿಖೆ ನಡೆಯುತ್ತಿದೆ. ತನಿಖೆ ನಡೆದು ಸತ್ಯಾಂಶ ಹೊರಗೆ ಬರಲಿ. ಹಲ್ಲೆ ಪ್ರಕರಣ ಬಗ್ಗೆ ನನಗೇ ಗೊತ್ತಿಲ್ಲ, ನಾನು ನನ್ನ ಕೆಲಸದ ಕಡೆ ಗಮನ ಕೊಟ್ಟಿದ್ದೇನೆ" ಎಂದಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications