Breaking; ಮಂಡ್ಯ ರಾಜಕೀಯ, ಸುಮಲತಾ ರಾಜ್ಯ ರಾಜಕೀಯಕ್ಕೆ!

ಮಂಡ್ಯ ಸಂಸದೆ ಸುಮತಾ ಅಂಬರೀಶ್ ರಾಜ್ಯ ರಾಜಕೀಯಕ್ಕೆ ಬರಬೇಕು ಎಂದು ಬೆಂಬಲಿಗರ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ. ಆದರೆ ಅವರು ಯಾವ ಪಕ್ಷ ಸೇರಬೇಕು ಎಂಬ ಬಗ್ಗೆ ಅಂತಿಮ ತೀರ್ಮಾನವಾಗಿಲ್ಲ.

ಬೆಂಗಳೂರು, ಜನವರಿ 31; ಮಂಡ್ಯದ ರಾಜಕೀಯ ದಿನ ದಿನಕ್ಕೆ ಕುತೂಹಲ ಮೂಡಿಸುತ್ತಿದೆ. ಕ್ಷೇತ್ರದ ಪಕ್ಷೇತರ ಸಂಸದೆ ಸುಮಲತಾ ಮುಂದಿನ ರಾಜಕೀಯ ನಡೆ ಬಗ್ಗೆ ಚರ್ಚೆಗಳು ಆರಂಭವಾಗಿದೆ.

ಮಂಗಳವಾರ ಮಂಡ್ಯದಲ್ಲಿ ಸಂಸದೆ ಸುಮಲತಾ ಬೆಂಬಲಿಗರ ಸಭೆ ನಡೆಯಿತು. ಸಭೆಯಲ್ಲಿ ಅವರು ರಾಜ್ಯ ರಾಜಕೀಯಕ್ಕೆ ಬರಬೇಕು ಎಂದು ತೀರ್ಮಾನ ಕೈಗೊಳ್ಳಲಾಗಿದೆ.

ಸುಮಲತಾ ರಾಜ್ಯ ರಾಜಕೀಯಕ್ಕೆ ಬರಲೇಬೇಕು ಎಂದು ಬಹುತೇಕ ಬೆಂಬಲಿಗರು ಒತ್ತಾಯಿಸಿದ್ದಾರೆ. ಆದರೆ ಈ ಬಗ್ಗೆ ಸಂಸದೆ ಸುಮಲತಾ ಇದುವರೆಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

Mandya MP Sumalatha Should Come To State Politics Supporters Decided

ಮಂಡ್ಯ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಿಂದ ಆಗಮಿಸಿದ್ದ ಸುಮಲತಾ ಬೆಂಬಲಿಗರು, ಅಭಿಮಾನಿಗಳು ಸಭೆ ನಡೆಸಿ ಅವರು ರಾಜ್ಯ ರಾಜಕೀಯಕ್ಕೆ ಬರಬೇಕು ಎಂದು ತೀರ್ಮಾನ ಕೈಗೊಂಡಿದ್ದಾರೆ.

ಯಾವ ಪಕ್ಷ ಸೇರಬೇಕು?; ಬೆಂಬಲಿಗರ ಸಭೆಯಲ್ಲಿ ಸುಮಲತಾ ಯಾವ ಪಕ್ಷ ಸೇರಬೇಕು? ಎಂದು ಸಹ ಚರ್ಚೆ ನಡೆದಿದೆ. ಬಿಜೆಪಿ ಅಥವ ಕಾಂಗ್ರೆಸ್ ಸೇರುವ ಕುರಿತು ಬೆಂಬಲಿಗರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಅಥವ ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಸಮನಾದ ಅಭಿಪ್ರಾಯಗಳು ಸಂಗ್ರಹಗೊಂಡಿವೆ.

ರಾಜ್ಯ ರಾಜಕೀಯಕ್ಕೆ ಸುಮತಾ ಆಗಮಿಸಬೇಕು. ಮುಂದಿನ ಚುನಾವಣೆಯಲ್ಲಿ ಮಂಡ್ಯ ಅಥವ ಮದ್ದೂರು ಕ್ಷೇತ್ರದಿಂದ ಕಣಕ್ಕಿಳಿಯಬೇಕು ಎಂದು ಬೆಂಬಲಿಗರು ಒತ್ತಾಯಿಸಿದ್ದಾರೆ.

2019ರ ಲೋಕಸಭೆ ಚುನಾವಣೆಯಲ್ಲಿ ಸುಮಲತಾ ಪಕ್ಷೇತರ ಅಭ್ಯರ್ಥಿಯಾಗಿ ಮಂಡ್ಯದಲ್ಲಿ ಕಣಕ್ಕಿಳಿದರು. ಬಿಜೆಪಿ ಯಾವುದೇ ಅಭ್ಯರ್ಥಿ ಕಣಕ್ಕಿಳಿಸದೇ ಅವರನ್ನು ಬೆಂಬಲಿಸಿತು. ಎದುರಾಳಿಯಾಗಿ ನಿಖಿಲ್ ಕುಮಾರಸ್ವಾಮಿ ಕಣಕ್ಕಿಳಿದರು. ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿಯಾಗಿದ್ದೂ, ಎಚ್. ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾದ್ದರೂ ನಿಖಿಲ್ ಚುನಾವಣೆಯಲ್ಲಿ ಸೋತರು.

2024ರಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ. ಮುಂದಿನ ಚುನಾವಣೆಗೂ ಮೊದಲು ಸುಮಲತಾ ಬಿಜೆಪಿ ಸೇರಬೇಕು ಎಂಬ ಚರ್ಚೆ ಜೋರಾಗಿದೆ. ಅವರನ್ನು ಪಕ್ಷಕ್ಕೆ ಕರೆತರುತ್ತೇವೆ ಎಂದು ಸಹ ಬಿಜೆಪಿ ನಾಯಕರು ಹೇಳುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+