ಹಿಂದೂ ಹಬ್ಬಗಳಿಗೆ ಯಾಕಿಷ್ಟು ತಾತ್ಸಾರ: ಕರ್ನಾಟಕ ಪಾಕಿಸ್ತಾನ ಮಾಡಲಾಗುತ್ತಿದೆ: ಪ್ರಹ್ಲಾದ್ ಜೋಶಿ
ಬೆಂಗಳೂರು, ಸೆಪ್ಟಂಬರ್ 12: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಬುಧವಾರ ತಡರಾತ್ರಿ ಗಣೇಶ ವಿಸರ್ಜನೆ ವೇಳೆ ಕಿಡಿಗೇಡಿಗಳಿಂದ ಗಲಭೆ ನಡೆದಿದೆ. ಇದೆಲ್ಲ ನೋಡಿದರೆ ಕರ್ನಾಟಕದ ಪರಿಸ್ಥಿತಿ ಎಲ್ಲಿಗೆ ಬಂದು ನಿಂತಿದೆ. ಹಿಂದೂಗಳ ಹಬ್ಬದಂದು ನಡೆದ ಈ ದುಷ್ಕೃತ್ಯ ಅತ್ಯಂತ ಖಂಡನೀಯ ಎಂದು ರಾಜ್ಯ ಸರ್ಕಾರದ ಆಡಳಿತ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮಂಡ್ಯ ಗಲಭೆ ಕುರಿತು ಅಸಮಾಧಾನ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು, ಎಲ್ಲಿಗೆ ಬಂದು ನಿಂತಿದೆ ನಮ್ಮ ಕರ್ನಾಟಕದ ಪರಿಸ್ಥಿತಿ?. ಸರ್ವಜನಾಂಗದ ಶಾಂತಿಯ ತೋಟವನ್ನು ರಾಜ್ಯ ಕಾಂಗ್ರೆಸ್ ಅಕ್ಷರಶಃ ಪಾಕಿಸ್ತಾನ ಮಾಡುತ್ತಿದೆ ಎಂದು ಗುಡುಗಿದರು.

ಮಂಡ್ಯದ ನಾಗಮಂಗಲದಲ್ಲಿ ಗಣಪತಿ ವಿಸರ್ಜನೆ ವೇಳೆ ನಡೆದ ಬೆಳವಣಿಗೆ ನಿಜಕ್ಕೂ ಖಂಡನೀಯ. ಮಸೀದಿ ಮುಂದೆ ಗಣಪತಿ ಮೆರವಣಿಗೆ ಹೋಗಬಾರದು ಎಂಬ ಕಾನೂನು ಎಲ್ಲಿದೆ?. ಗಣೇಶ ಮೂರ್ತಿ ಇದ್ದರೂ ಕಲ್ಲು ತೂರಾಟ ಮಾಡಿ ಬೆಂಕಿ ಹಚ್ಚಿದ್ದಾರೆ.
ಕಾಂಗ್ರೆಸ್ ಹಿಂದೂ ವಿರೋಧಿ ನೀತಿಯೇ ಘಟನೆಗೆ ಕಾರಣ
ಹಿಂದೂ ಹಬ್ಬಗಳು ಎಂದರೆ ಕಾಂಗ್ರೆಸ್ ಪಕ್ಷಕ್ಕೆ, ರಾಜ್ಯ ಸರ್ಕಾರಕ್ಕೆ ಯಾಕೆ ಇಷ್ಟೊಂದು ತಾತ್ಸಾರ? ಎಂದು ಪ್ರಶ್ನಿಸಿದರು. ಕಾಂಗ್ರೆಸ್ ಸರ್ಕಾರ ವೋಟ್ ಬ್ಯಾಂಕ್ ನೀತಿ ಅನುಸರಿಸದೆ ಮತಾಂಧ ಶಕ್ತಿಯನ್ನು ಹತ್ತಿಕ್ಕಬೇಕು. ಕಾಂಗ್ರೆಸ್ ನ ಹಿಂದೂ ವಿರೋಧಿ ನೀತಿಯಿಂದ ಈ ರೀತಿ ಘಟನೆಗಳು ಆಗುತ್ತಿದೆ. ಈ ಘಟನೆಯ ಸಂಪೂರ್ಣ ಹೊಣೆ ರಾಜ್ಯ ಕಾಂಗ್ರೆಸ್ ಸರ್ಕಾರದ್ದು ಎಂದು ಅವರು ಹೇಳಿದರು.

ಕಳೆದ ರಾತ್ರಿ ಮಂಡ್ಯದ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಮಾಡುವಾಗ ಪುಂಡರು ಗಣೇಶ್ ಮೂರ್ತಿ ಮೇಲೆ ಕಲ್ಲೆಸೆದಿದ್ದಾರೆ. ಚಪ್ಪಲಿ ಎಸೆದಿದ್ದಾರೆ. ಕಾಪೌಂಡ್ ಒಳಗಿನ ಬೈಕ್ ಎಳೆದು ಹೊರ ತಂದು ಸುಟ್ಟಿರುವ ಘಟನೆಗಳು ಬೆಳಕಿಗೆ ಬಂದಿವೆ. ಇದು ಮುಸ್ಲಿಂ ಯುವಕರ ಗುಂಪು ಮಾಡಿರುವ ಘಟನೆ ಎಂದು ಹಿಂದೂ ಯುವಕರು, ಗಜಾನನ ಮಂಡಳಿಯವರು ಪ್ರತಿಭಟನೆ ನಡೆಸಿದ್ದಾರೆ.
ಮುಂಜಾಗ್ರತಾ ಕ್ರಮ ಕೈಗೊಂಡಿಲ್ಲ: ಆರ್.ಅಶೋಕ ಕಿಡಿ
ನಾಗಮಂಗಲದಲ್ಲಿ ಪರಿಸ್ಥಿತಿ ನೆನ್ನೆ ರಾತ್ರಿಯಿಂದಲೂ ಉದ್ವಿಗ್ನಗೊಂಡಿದೆ. ಸ್ಥಳದಲ್ಲಿ ಪೊಲೀಸ್ ಅಧಿಕಾರಿಗಳು ಬೀಡು ಬಿಟ್ಟಿದ್ದಾರೆ. ಇನ್ನೂ ಈ ಬಗ್ಗೆ ವಿಪಕ್ಷ ನಾಯಕ ಆರ್.ಅಶೋಕ ಅವರು ಸಹ ಪ್ರತಿಕ್ರಿಯಿಸಿದ್ದು, ಕಾಂಗ್ರೆಸ್ ಪಕ್ಷದ ಮೇಲೆ ಕೆಂಡ ಕಾರಿದ್ದಾರೆ.
ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಮತಾಂಧ ಶಕ್ತಿಗಳು ಮತ್ತೆ ಅಟ್ಟಹಾಸ ಮೆರೆದಿವೆ. ಸಮಾಜದಲ್ಲಿನ ಶಾಂತಿ ಕದಡಲಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದು ಹೋಗಿದೆ ಎಂಬುಕ್ಕೆ ನಾಗಮಂಗಲದ ಘಟನೆ ನಿಜಕ್ಕೂ ಒಂದು ಸಾಕ್ಷಿಯಾಗಿದೆ. ಪೊಲೀಸರು ಮುಂಜಾಗ್ರತಾ ಕ್ರಮ ಕೈಗೊಂಡಿಲ್ಲ.
ಕಾಂಗ್ರೆಸ್ ಸರ್ಕಾರದ ತುಷ್ಟೀಕರಣ ರಾಜಕಾರಣ, ವೋಟ್ ಬ್ಯಾಂಕ್ ನಡೆಯಿಂದಲೇ ಪುಂಡರ ಈ ರೀತಿ ವರ್ತಿಸಿದ್ದಾರೆ. ಇವರೇ ಮುಂದೆ ರಾಷ್ಟ್ರ ವಿರೋಧಿ ಶಕ್ತಿಗಳಾಗಿ ಬದಲಾಗುತ್ತವೆ. ಅದಕ್ಕೆ ಅವಕಾಶ ಕೊಡದೇ ನಿಯಂತ್ರಿಸುವ ಕೆಲಸವಾಗಬೇಕು ಎಂದುರ.












Click it and Unblock the Notifications