ಡಿಸೆಂಬರ್ 20 ರಿಂದ 22 ರವರೆಗೆ ಮಂಡ್ಯದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ
ಬೆಂಗಳೂರು, ಜೂನ್ 25: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಂಡ್ಯದಲ್ಲಿ ಡಿಸೆಂಬರ್ 20, 21, 22 ರಂದು ನಡೆಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಿಳಿಸಿದರು.
ಈ ಕುರಿತು ಮಂಗಳವಾರ ಗೃಹ ಕಚೇರಿ ಕೃಷ್ಣಾದಲ್ಲಿ ಸಾಹಿತ್ಯ ಸಮ್ಮೇಳನದ ಪೂರ್ವಭಾವಿಯಾಗಿ ಕನ್ನಡ ಸಾಹಿತ್ಯ ಪರಿಷತ್ತು, ಮಂಡ್ಯ ಜಿಲ್ಲಾಡಳಿತ, ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮದವರಿಗೆ ಮಾಹಿತಿ ನೀಡಿದ ಸಿದ್ದರಾಮಯ್ಯ, ಈ ಹಿಂದೆ ಜೂನ್ ತಿಂಗಳಲ್ಲಿ ಸಮ್ಮೇಳನ ಆಯೋಜಿಸಲು ತೀರ್ಮಾನಿಸಲಾಗಿತ್ತು. ಆದರೆ ಚುನಾವಣಾ ನೀತಿ ಸಂಹಿತೆಯ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು. ಇದೀಗ ಡಿಸೆಂಬರ್ ತಿಂಗಳಲ್ಲಿ ಸಮ್ಮೇಳನ ನಡೆಸಲು ನಿರ್ಧರಿಸಲಾಗಿದೆ.

ರಾಜ್ಯದ, ಹೊರರಾಜ್ಯ ಹಾಗೂ ವಿದೇಶದ ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಈ ಸಮ್ಮೇಳನದಲ್ಲಿ ಭಾಗವಹಿಸುವಂತೆ ಮನವಿ ಮಾಡುವುದಾಗಿ ತಿಳಿಸಿದರು. ಸರ್ಕಾರ ಜಿಲ್ಲಾಡಳಿತ, ಸಾಹಿತ್ಯ ಪರಿಷತ್ತಿಗೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದ ಮುಖ್ಯಮಂತ್ರಿಗಳು, ಸಾಹಿತ್ಯ ಸಮ್ಮೇಳನ ಅಧ್ಯಕ್ಷರ ಆಯ್ಕೆಯಾದ ಕೂಡಲೇ ಮಾಹಿತಿ ನೀಡಲಾಗುವುದು. ಜಿಲ್ಲಾಡಳಿತ, ಸಾಹಿತ್ಯ ಪರಿಷತ್ತಿನವರು ಸಾಹಿತಿಗಳ ಪಟ್ಟಿ ಒದಗಿಸಿದ ನಂತರ ಸರ್ಕಾರದೊಂದಿಗೆ ಚರ್ಚಿಸಿ ಅಂತಿಮಗೊಳಿಸಲು ತೀರ್ಮಾನಿಸಲಾಯಿತು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಮಂಡ್ಯದಲ್ಲಿ 48 ನೇ ಸಾಹಿತ್ಯ ಸಮ್ಮೇಳನ 1974 ರಲ್ಲಿ ಜಯದೇವಿ ತಾಯಿ ಲಿಗಾಡೆ ಅವರ ಅಧ್ಯಕ್ಷತೆಯಲ್ಲಿ, 63 ನೇ ಸಾಹಿತ್ಯ ಸಮ್ಮೇಳನ 1994 ರಲ್ಲಿ ಡಾ. ಚದುರಂಗ ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿತ್ತು. ಇದೀಗ ಮೂರನೇ ಬಾರಿ ಸಮ್ಮೇಳನ ಆಯೋಜಿಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು. ಎಲ್ಲರೂ ಸೇರಿ ಸಮ್ಮೇಳನವನ್ನು ಯಶಸ್ವಿಯಾಗಿ ಅಯೋಜಿಸುವ ವಿಶ್ವಾಸ ನನಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚೆಲುವರಾಯಸ್ವಾಮಿ, ಮಂಡ್ಯ ಜಿಲ್ಲೆಯ ಶಾಸಕರು, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಗಳಾದ ಕೆ. ಗೋವಿಂದರಾಜು, ನಸೀರ್ ಅಹ್ಮದ್, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಮಹೇಶ್ ಜೋಷಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಅಜಯ್ ನಾಗಭೂಷಣ್ ಮತ್ತು ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
-
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Love Mocktail 3: ಲವ್ ಮಾಕ್ಟೇಲ್ 3 ಸಿನಿಮಾ ಕದ್ದ ಕಥೆ: ಮಾರಿ ಗೋಲ್ಡ್ ನಿರ್ದೇಶಕ ರಾಘವೇಂದ್ರ ನಾಯ್ಕ್ ಗಂಭೀರ ಆರೋಪ -
ಲವ್ ಮಾಕ್ಟೇಲ್ 3 ವಿವಾದ: ನನ್ನ ಕಥೆಯ ದ್ವಿತೀಯಾರ್ಧ ನಕಲು: ಸಿನಿಮಾ ಬರಹಗಾರರೇ ಎಚ್ಚರ ಎಂದ ನಿರ್ದೇಶಕ ರಾಘವೇಂದ್ರ -
Vijay Sethupathi: ರಿಷಬ್ ಶೆಟ್ಟಿ ಜೊತೆ ನಟಿಸುವ ದೊಡ್ಡ ಆಸೆ ನನಗಿದೆ: ಆಸೆ ಬಿಚ್ಚಿಟ್ಟ ನಟ ವಿಜಯ್ ಸೇತುಪತಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್












Click it and Unblock the Notifications