Mangaluru blast case: ಉಡುಪಿ ಮಠಕ್ಕೂ ಭೇಟಿ ನೀಡಿದ್ದ ಆರೋಪಿ ಶಾರಿಕ್

ಉಡುಪಿ, ನ. 29: ಮಂಗಳೂರು ಆಟೋ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರಿಕ್ ಅಕ್ಟೋಬರ್‌ನಲ್ಲಿ ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಕೃಷ್ಣಮಠದ ಕಾರ್ ಸ್ಟ್ರೀಟ್ ಪ್ರದೇಶದ ಅಂಗಡಿಗಳಲ್ಲಿ ಅಳವಡಿಸಿರುವ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿದ್ದು, ಅಂಗಡಿ ಮಾಲೀಕರಿಂದ ಮಾಹಿತಿ ಸಂಗ್ರಹಿಸಲಾಗಿದೆ ಎಂದು ಉಡುಪಿ ಪೊಲೀಸರು ತಿಳಿಸಿದ್ದಾರೆ.

ವಯಸ್ಸಾದ ಮಹಿಳೆಯೊಬ್ಬರು ಶಾರಿಕ್ ಫೋನ್ ಬಳಸಿ ಮೊಮ್ಮಗನಿಗೆ ಕರೆ ಮಾಡಿದ್ದಾರೆ. ಅಕ್ಟೋಬರ್ 16 ರಂದು ಉಡುಪಿಯ ಕಾರ್ ಸ್ಟ್ರೀಟ್ ಪ್ರದೇಶಕ್ಕೆ ಬಂದು ಕಾರ್ಕಳ ಮತ್ತು ಬಂಟ್ವಾಳಕ್ಕೆ ಪ್ರಯಾಣ ಬೆಳೆಸಿರುವ ಶಂಕೆ ವ್ಯಕ್ತವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆದರಿಕೆಯ ಹಿನ್ನೆಲೆಯಲ್ಲಿ ಕೃಷ್ಣ ಮಠ ಮತ್ತು ಸುತ್ತಮುತ್ತ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

Mangaluru blast case: Accused Shariq visited Udupi Krishna mutt

ಈ ಮಧ್ಯೆ, ಶಂಕಿತ ಉಗ್ರರು ಮಂಗಳೂರಿನ ಕದ್ರಿ ಶ್ರೀ ಮಂಜುನಾಥೇಶ್ವರ ದೇವಸ್ಥಾನವನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲು ಸಂಚು ರೂಪಿಸಿದ್ದಾರೆ ಎಂಬ ಮಾಹಿತಿ ಸಿಕ್ಕಿರುವ ಹಿನ್ನೆಲೆಯಲ್ಲಿ ಭದ್ರತಾ ವ್ಯವಸ್ಥೆ ಕೈಗೊಳ್ಳುವ ಕುರಿತು ಪೂರ್ವಭಾವಿ ಸಭೆ ನಡೆದಿದೆ.

ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎ ಜೆ ಶೆಟ್ಟಿ, ಕಾರ್ಯನಿರ್ವಾಹಕ ಅಧಿಕಾರಿ ಪಿ ಜಯಮ್ಮ ಹಾಗೂ ಟ್ರಸ್ಟಿಗಳು ಉಪಸ್ಥಿತರಿದ್ದರು. ಮೆಟಲ್ ಡಿಟೆಕ್ಟರ್ ಅಳವಡಿಕೆ ಮತ್ತು ಬ್ಯಾಗ್ ಸ್ಕ್ರೀನಿಂಗ್ ಯಂತ್ರಗಳ ಅಳವಡಿಕೆ ಬಗ್ಗೆ ಕ್ರಮಗಳನ್ನು ತೆಗೆದುಕೊಳ್ಳಲು ಸಭೆಯಲ್ಲಿ ನಿರ್ಣಯಿಸಲಾಗಿದೆ ಎಂದು ದೇವಸ್ಥಾನದ ಮೂಲಗಳು ತಿಳಿಸಿವೆ.

ಜನರ ಅನುಮಾನ ತಪ್ಪಿಸಲು ಆರೋಪಿ ಶಾರಿಕ್ ಹೋದಲ್ಲೆಲ್ಲಾ ತಾನು ಹಿಂದೂ ಎಂದು ಬಿಂಬಿಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ನವೆಂಬರ್‌ 19ರಂದು ಸಂಜೆ 4.50 ಸುಮಾರಿಗೆ ಕಂಕನಾಡಿ ಠಾಣಾ ವ್ಯಾಪ್ತಿಯ ಗರೋಡಿ ಬಳಿ ಆಟೋ ರಿಕ್ಷಾದಲ್ಲಿ ಸ್ಫೋಟ ಸಂಭವಿಸಿತ್ತು ಘಟನೆಯಲ್ಲಿ ಆರೋಪಿ ಶಾರಿಕ್ ಮತ್ತು ಚಾಲಕ ಗಾಯಗೊಂಡಿದ್ದಾರೆ. ಆರೋಪಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ತನಿಖೆ ವೇಳೆ ಗಲವು ಗಂಭೀರ ವಿಷಯಗಳು ಬಯಲಿಗೆ ಬರುತ್ತಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+