Get Updates
Get notified of breaking news, exclusive insights, and must-see stories!

Breaking: ಮಂಗಳೂರು ಸ್ಫೋಟ ಭಯೋತ್ಪಾದಕ ಕೃತ್ಯ- ಡಿಜಿಪಿ

ಮಂಗಳೂರು, ನ. 20: ಮಂಗಳೂರಿನಲ್ಲಿ ನಡೆದ ಸ್ಫೋಟವು ಆಕಸ್ಮಿಕವಲ್ಲ. ಆದರೆ, ಭಯೋತ್ಪಾದಕ ಕೃತ್ಯ ಎಂದು ರಾಜ್ಯದ ಪೊಲೀಸ್ ಮಹಾನಿರ್ದೇಶಕರು ಭಾನುವಾರ ಮಾಹಿತಿ ನೀಡಿದ್ದಾರೆ.

ಭಾನುವಾರ ಈ ಬಗ್ಗೆ ಟ್ವೀಟ್‌ನಲ್ಲಿ ತಿಳಿಸಿರುವ ಪೊಲೀಸ್ ಮಹಾನಿರ್ದೇಶಕರು (ಡಿಜಿಪಿ), "ಈಗ ದೃಢಪಟ್ಟಿದೆ. ಈ ಸ್ಫೋಟವು ಆಕಸ್ಮಿಕವಲ್ಲ ಆದರೆ ಗಂಭೀರ ಹಾನಿಯನ್ನುಂಟುಮಾಡುವ ಉದ್ದೇಶದಿಂದ ನಡೆದ ಭಯೋತ್ಪಾದಕ ಕೃತ್ಯವಾಗಿದೆ. ರಾಜ್ಯ ಪೊಲೀಸರು, ಕೇಂದ್ರ ಏಜೆನ್ಸಿಗಳೊಂದಿಗೆ ಸೇರಿ ತನಿಖೆ ನಡೆಸುತ್ತಿದ್ದಾರೆ" ಎಂದು ತಿಳಿಸಿದ್ದಾರೆ.

ಶನಿವಾರ ಮಂಗಳೂರಿನಲ್ಲಿ ಸಂಚರಿಸುತ್ತಿದ್ದ ಆಟೋರಿಕ್ಷಾದಲ್ಲಿ ಸ್ಫೋಟ ಸಂಭವಿಸಿದೆ. ನಗರದ ಕಂಕನಾಡಿ ಪೊಲೀಸ್ ಠಾಣೆಯ ಬಳಿಯ ನಾಗುರಿಯಿಂದ ಪಂಪ್‌ವೆಲ್ ಕಡೆಗೆ ಚಲಿಸುತ್ತಿದ್ದ ಆಟೋದಲ್ಲಿ ಸ್ಫೋಟ ಸಂಭವಿಸಿತ್ತು. ಆಟೋದಲ್ಲಿ ಛಿದ್ರಗೊಂಡ ಕುಕ್ಕರ್ ಪತ್ತೆಯಾಗಿತ್ತು. ಆಟೋದಲ್ಲಿದ್ದ ಪ್ರಯಾಣಿಕನ ಕೈಯಲ್ಲಿದ್ದ ಪ್ಲಾಸ್ಟಿಕ್ ಬ್ಯಾಗ್‌ನಲ್ಲಿ‌ ಮೊದಲಿಗೆ ಬೆಂಕಿ ಕಾಣಿಸಿಕೊಂಡಿದೆ. ಬಳಿಕ ಸ್ಫೋಟ ಸಂಭವಿಸಿ ಆಟೋದಲ್ಲಿ ಬೆಂಕಿ‌ ಕಾಣಿಸಿಕೊಂಡಿದೆ. ಸ್ಫೋಟದಲ್ಲಿ ಪ್ರಯಾಣಿಕ ಹಾಗೂ ಆಟೋ ಚಾಲಕ ಗಾಯಗೊಂಡಿದ್ದಾರೆ.

Mangaluru blast its an act of terror: Director General of Police

"ಸಂಜೆ 5.15 ರ ಸುಮಾರಿಗೆ ಆಟೋರಿಕ್ಷಾದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಪ್ರಯಾಣಿಕರು ಸಾಗಿಸುತ್ತಿದ್ದ ಬ್ಯಾಗ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಚಾಲಕ ಹೇಳಿದ್ದಾರೆ. ಚಾಲಕ ಮತ್ತು ಪ್ರಯಾಣಿಕರಿಗೆ ಸುಟ್ಟ ಗಾಯಗಳಾಗಿವೆ. ನಾವು ಅವರನ್ನು ಆಸ್ಪತ್ರೆಗೆ ಸೇರಿಸಿದ್ದೇವೆ" ಎಂದು ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಈ ಹಿಂದೆ ಹೇಳಿದ್ದರು.

ಘಟನೆಯ ನಂತರ, ವಿಧಿವಿಜ್ಞಾನ ತಂಡಗಳು ಮಾದರಿಗಳನ್ನು ಸಂಗ್ರಹಿಸಲು ಸ್ಥಳಕ್ಕೆ ಬಂದಿವೆ.

ಈ ಹಿಂದೆ 2020 ರಲ್ಲಿ, ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಬೆದರಿಕೆ ಹೆಚ್ಚು ಆತಂಕಕ್ಕೆ ಕಾರಣವಾಗಿತ್ತು. ನಂತರ ಬಾಂಬ್ ನಿಷ್ಕ್ರಿಯ ದಳವು ಸ್ಫೋಟಕ ಸಾಧನವನ್ನು ಪತ್ತೆಹಚ್ಚಿತ್ತು. ಪ್ರಕರಣಕ್ಕೆ ಸಂಬಂಧಿಸಿದ್ದ ಆರೋಪಿ ಪೊಲೀಸರಿಗ ಶರಣಾಗಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+