ಮಂಗಳೂರು ಚಲೋ : 523 ಬಿಜೆಪಿ ಕಾರ್ಯಕರ್ತರ ಬಂಧನ
ಬೆಂಗಳೂರು, ಸೆಪ್ಟೆಂಬರ್ 05 : ಕರ್ನಾಟಕ ಬಿಜೆಪಿ ಯುವ ಮೋರ್ಚಾ ಹಮ್ಮಿಕೊಂಡಿದ್ದ ಮಂಗಳೂರು ಚಲೋವನ್ನು ವಿವಿಧ ಜಿಲ್ಲೆಗಳಲ್ಲಿ ತಡೆಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ರಾಜ್ಯದಲ್ಲಿ ಒಟ್ಟು 523 ಬಿಜೆಪಿ ಕಾರ್ಯಕರ್ತರನ್ನು ಬಂಧಿಸಲಾಗಿದೆ.
ಗೃಹ ಸಚಿವ ರಾಮಲಿಂಗಾ ರೆಡ್ಡಿ ಈ ಕುರಿತು ಮಾಹಿತಿ ನೀಡಿದರು, 'ಶಾಂತಿ ಕಾಪಾಡಲು ಬೆಂಗಳೂರು, ಬೆಳಗಾವಿ, ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ರಾಜ್ಯದಲ್ಲಿ ಒಟ್ಟು 523 ಕಾರ್ಯಕರ್ತರನ್ನು ಬಂಧಿಸಲಾಗಿದೆ' ಎಂದು ಹೇಳಿದರು.

'ಪೊಲೀಸರು ಮಂಗಳೂರು ಚಲೋಗೆ ಅನುಮತಿ ಕೊಟ್ಟಿರಲಿಲ್ಲ. ಆದರೂ ಹೋರಾಟ ಮಾಡಲು ಹೊರಟಿದ್ದರು. ಪೊಲೀಸರು ಕೇಳಿದ್ದ ಮಾಹಿತಿಯನ್ನು ಕೊಟ್ಟಿರಲಿಲ್ಲ. ಆದ್ದರಿಂದ ಬೈಕ್ ಜಾಥಾಕ್ಕೆ ಅನುಮತಿ ಕೊಟಿಲ್ಲ' ಎಂದು ಸಚಿವರು ಸ್ಪಷ್ಟಪಡಿಸಿದರು.
ನಾಯಕರು ವಶಕ್ಕೆ : ಬಿಜೆಪಿಯ ಮಂಗಳೂರು ಚಲೋಗೆ ಬೆಂಗಳೂರಿನಲ್ಲಿ ಪೊಲೀಸರು ತಡೆ ಹಾಕಿದ್ದರು. ನಗರದ ಫ್ರೀಡಂಪಾರ್ಕ್‌ನಿಂದ ಬೈಕ್ ಜಾಥಾ ಹೊರಟಿದ್ದ ಯುವಮೋರ್ಚಾ ಅಧ್ಯಕ್ಷ ಪ್ರತಾಪ್ ಸಿಂಹ, ಮಾಜಿ ಡಿಸಿಎಂ ಆರ್.ಅಶೋಕ್, ಸಂಸದೆ ಶೋಭಾ ಕರಂದ್ಲಾಜೆ, ಮಾಜಿ ಸಚಿವ ಅರವಿಂದ್ ಲಿಂಬಾವಳಿ ಮುಂತಾದವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು.












Click it and Unblock the Notifications