Get Updates
Get notified of breaking news, exclusive insights, and must-see stories!

ಡಿ.ಕೆ ಸಹೋದರರ ವಿರುದ್ಧ ಬಿಜೆಪಿ ಹಾಗೂ ಕುಮಾರಸ್ವಾಮಿ ಅವರ ಮಿಷನ್ ಸಕ್ಸಸ್ : ಡಿ ಕೆ ಶಿವಕುಮಾರ್‌ ಏನಂದ್ರು?

ಬೆಂಗಳೂರು, ಜೂನ್‌ 04: ಡಿ.ಕೆ ಸಹೋದರರ ವಿರುದ್ಧ ಬಿಜೆಪಿ ಹಾಗೂ ಕುಮಾರಸ್ವಾಮಿ ಅವರ ಮಿಷನ್ ಸಕ್ಸಸ್ ಆಗಿದೆಯಾ ಎಂಬ ಚರ್ಚೆ ರಾಜಕೀಯ ವಲಯದಲ್ಲಿ ನಡೆಯುತ್ತಿದೆ. ಈ ಬಗ್ಗೆ ಯಶಸ್ಸು ಆಗಿರಬಹುದು, ಮಂಜುನಾಥ್ ಅವರನ್ನು ಸ್ಪರ್ಧೆ ಮಾಡಿಸಿದ್ದು ಅವರ ಯಶಸ್ಸಿಗೆ ಕಾರಣ. ಅದನ್ನು ನಾವು ಒಪ್ಪಿದ್ದೇವೆ. ಇದು ಮಂಜುನಾಥ್ ಅವರ ಗೆಲುವು. ಅವರ ಪಕ್ಷಗಳ ಗೆಲುವಲ್ಲ ಎಂದು ಡಿಸಿಎಂ ಡಿ ಕೆ ಶಿವಕುಮಾರ್‌ ಹೇಳಿದರು.

ಪಕ್ಷ ಅಭ್ಯರ್ಥಿಗಳ ಆಯ್ಕೆಯಲ್ಲಿ ಎಡವಿತಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಉತ್ತಮ ಅಭ್ಯರ್ಥಿಗಳನ್ನು ನಾವು ಕಣಕ್ಕಿಳಿಸಿದ್ದೆವು. ಎಲ್ಲಾ ಅಭ್ಯರ್ಥಿಗಳು ಸರಿಯಾಗಿದ್ದರು. ಎಲ್ಲಾ ಕಾರ್ಯಕರ್ತರೂ ಉತ್ತಮವಾಗಿ ಕೆಲಸ ಮಾಡಿದ್ದರು. ನಾನು ಯಾವುದೇ ಕಾರ್ಯಕರ್ತರನ್ನು ದೂರುವುದಿಲ್ಲ. ಜನರ ತೀರ್ಪು ಗೌರವಿಸುತ್ತೇನೆ ಎಂದು ಹೇಳಿದರು. ಕೇಂದ್ರದಲ್ಲಿ ಸರ್ಕಾರ ರಚನೆ ಬಗ್ಗೆ ಚರ್ಚೆ ನಡೆಯುತ್ತಿದ್ದು, ನಿಮ್ಮ ಸಹಾಯ ಕೇಳಿದ್ದಾರಾ ಎಂದು ಪ್ರಶ್ನಿಸಿದಾಗ, ಇಲ್ಲ, ನನ್ನನ್ನು ಯಾರೂ ಸಂಪರ್ಕ ಮಾಡಿಲ್ಲ ಎಂದು ಹೇಳಿದರು.

Manjunath s victory in Bengaluru rural constituency is not a party s victory DK Shivakumar

10 ವರ್ಷಗಳ ನಂತರ ಕಾಂಗ್ರೆಸ್ ಪಕ್ಷ 100ರ ಗಡಿ ದಾಟಿದ್ದು, ಜನರು ಮತ್ತೆ ಕಾಂಗ್ರೆಸ್ ಪಕ್ಷದ ಮೇಲೆ ಭರವಸೆ ಇಟ್ಟಿದ್ದಾರೆ. ಕಾಂಗ್ರೆಸ್ ಮುಕ್ತ ಭಾರತ ಮಾಡಲು ಸಾಧ್ಯವಿಲ್ಲ ಎಂಬುದನ್ನು ಈ ಚುನಾವಣೆ ಮನದಟ್ಟು ಮಾಡಿದೆ. ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರ ಭಾರತ ಜೋಡೋ ಯಾತ್ರೆ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರ ನಿರಂತರ ಪರಿಶ್ರಮ ಹೋರಾಟದಿಂದ ಪಕ್ಷ ಚೇತರಿಕೆ ಕಂಡಿದೆ. ಪ್ರಿಯಾಂಕಾ ಗಾಂಧಿ ಅವರ ಕೊಡುಗೆ ಸಾಕಷ್ಟು ಇದೆ. ಕಾಂಗ್ರೆಸ್ ಪಕ್ಷದ ಮತ ಪ್ರಮಾಣ ಕೂಡ ಹೆಚ್ಚಾಗಿದೆ. ಹಳೇ ಮೈಸೂರು ಭಾಗದಲ್ಲಿ ವಿಧಾನಸಭೆ ಚುನಾವಣೆಗೆ ಹೋಲಿಸಿದರೆ ಲೋಕಸಭೆ ಚುನಾವಣೆ ಮತ ಪ್ರಮಾಣ ಕುಸಿದಿದ್ದು, ಮೊದಲಿನಿಂದಲೂ ಈ ರೀತಿ ವ್ಯತ್ಯಾಸ ಕಂಡು ಬಂದಿದೆ. ಎಸ್ ಎಂ ಕೃಷ್ಣ ಅವರ ಸರಕಾರ ಇದ್ದಾಗಲೂ ಹೀಗೆ ಆಗಿತ್ತು. ಅದು ಈ ರಾಜ್ಯದ ರಾಜಕೀಯ ಗುಣ. ಈ ಬಾರಿ ಬದಲಾಗಬಹುದು ಅಂದುಕೊಂಡಿದ್ದೆವು. ಆದರೆ ಆಗಲಿಲ್ಲ.

ನನ್ನ ಕ್ಷೇತ್ರದಲ್ಲಿ 60 ಸಾವಿರ ಮುನ್ನಡೆ ನಿರೀಕ್ಷೆ ಇತ್ತು. ಆದರೆ 26 ಸಾವಿರ ಮಾತ್ರ ಬಂದಿದೆ. ಚನ್ನಪಟ್ಟಣದಲ್ಲಿ ಅವರಿಗೆ ಉಲ್ಟಾ ಬಂದಿದೆ. ಇದರಿಂದ ನಾವು ಪಾಠ ಕಲಿಯುತ್ತೇವೆ. ವೈಯಕ್ತಿಕವಾಗಿ ಕೆಲವು ಅನುಮಾನಗಳಿವೆ. ಆದರೂ ಜನರ ತೀರ್ಪನ್ನು ಗೌರವಿಸುತ್ತೇನೆ. ಕಲ್ಯಾಣ ಕರ್ನಾಟಕದಲ್ಲಿ ಜನ ನಮಗೆ ಆಶೀರ್ವಾದ ನೀಡಿದ್ದಾರೆ. ಮನ್ಸೂರ್ ಅಲಿ ಖಾನ್ ಅವರು ಕೊನೆ ಹಂತದಲ್ಲಿ ಸೋಲನುಭವಿಸಿದ್ದಾರೆ. ರಾಜಕೀಯದಲ್ಲಿ ಇದು ಸರ್ವೇ ಸಾಮಾನ್ಯ. ನಮ್ಮ ತಪ್ಪುಗಳನ್ನು ತಿದ್ದಿಕೊಳ್ಳುತ್ತೇವೆ.

ಗ್ಯಾರಂಟಿ ಯೋಜನೆ ಕೈಹಿಡಿಯಲಿಲ್ಲವೇ, ಈ ಫಲಿತಾಂಶದಿಂದ ತೃಪ್ತಿಯಾಗಿದ್ದೀರಾ ಎಂದು ಕೇಳಿದಾಗ, "ಈಗಲೇ ಆ ರೀತಿ ಹೇಳಲು ಸಾಧ್ಯವಿಲ್ಲ. ಕನಿಷ್ಠ 14 ಕ್ಷೇತ್ರಗಳಲ್ಲಿ ಪಕ್ಷ ಗೆಲ್ಲಲಿದೆ ಎಂದು ಭಾವಿಸಿದ್ದೆವು. ಬೆಂಗಳೂರು, ಮುಂಬೈ ಕರ್ನಾಟಕ ಸೇರಿದಂತೆ ಇನ್ನು ಕೆಲವು ಕಡೆ ನಮಗೆ ನಿರೀಕ್ಷಿತ ಮಟ್ಟದ ಫಲಿತಾಂಶ ಬಂದಿಲ್ಲ. ಯಾವ ವರ್ಗ ಯಾಕೆ ನಮ್ಮಿಂದ ದೂರವಾಗಿದೆ ಎಂದು ಪರಿಶೀಲನೆ ಮಾಡುತ್ತೇವೆ. ಹೀಗಾಗಿ ಗ್ಯಾರಂಟಿ ಯೋಜನೆಗಳು ಸಂಪೂರ್ಣವಾಗಿ ಕೈ ಹಿಡಿದಿಲ್ಲ ಎಂದು ಹೇಳಲು ಸಾಧ್ಯವಿಲ್ಲ ಎಂದರು.

ಎಕ್ಸಿಟ್ ಪೋಲ್ ಸುಳ್ಳಾಗಿರುವ ಬಗ್ಗೆ ಕೇಳಿದಾಗ, "ನನಗೆ ಚುನಾವಣೋತ್ತರ ಸಮೀಕ್ಷೆ ಮೇಲೆ ನನಗೆ ನಂಬಿಕೆ ಇಲ್ಲ ಎಂದು ಹೇಳಿದ್ದೆ. ನಮಗೆ ಎರಡಂಕಿ ಸ್ಥಾನ ಬರಲಿದೆ ಎಂದು ಭಾವಿಸಿದ್ದೆವು. ಕೊನೆ ಕ್ಷಣದವರೆಗೂ ನಾವು ಎರಡಂಕಿ ಸ್ಥಾನ ಪಡೆದಿದ್ದೆವು. ಕೆಲವು ಕೆಲಸಗಳಿಗೆ ಮತ ಬರುತ್ತವೆ ಎಂದು ಭಾವಿಸಿದ್ದೆವು. ಆದರೆ ನಿರೀಕ್ಷಿತ ಮಟ್ಟದಲ್ಲಿ ಮತ ಬಂದಿಲ್ಲ ಎಂದು ಹೇಳಿದರು.

ಕೇಂದ್ರದಲ್ಲಿ ಅತಂತ್ರದ ಪರಿಸ್ಥಿತಿ ಬಗ್ಗೆ ಕೇಳಿದಾಗ, "ಬಿಜೆಪಿಗೆ ನಿರೀಕ್ಷಿತ ಸಂಖ್ಯಾಬಲ ಸಿಕ್ಕಿಲ್ಲ. ಅವರು ಈ ಸೋಲನ್ನು ಸ್ವೀಕರಿಸಬೇಕು. ಮಹಾರಾಷ್ಟ್ರದಲ್ಲಿ ಅವರು ಮಾಡಿದ ಕುತಂತ್ರವನ್ನು ಜನ ಒಪ್ಪಿಲ್ಲ. ಉತ್ತರ ಪ್ರದೇಶದಲ್ಲೂ ರಾಮಮಂದಿರ, ಮೋದಿ ಗಾಳಿ ಇಲ್ಲ. ಭಾವನೆಗಿಂತ ಬದುಕು ಈ ಚುನಾವಣೆಯಲ್ಲಿ ಗೆದ್ದಿದೆ. ನಮ್ಮ ನಾಯಕರು ಸಭೆ ಮಾಡುತ್ತಿದ್ದಾರೆ. ಭಾರತೀಯ ರಾಜಕಾರಣದಲ್ಲಿ ಯಾವಾಗ ಏನುಬೇಕಾದರೂ ನಡೆಯಬಹುದು ಎಂದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+