Manmohan Singh Death: 'ಮನಮೋಹನ್ ಸಿಂಗ್ ಕರ್ನಾಟಕದ ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ಕೊಟ್ಟವರು'
ಬೆಂಗಳೂರು, ಡಿಸೆಂಬರ್ 27: ಮನಮೋಹನ್ ಸಿಂಗ್ ಅವರು ಕರ್ನಾಟಕಕ್ಕೆ ಅದರಲ್ಲೂ ಬೆಂಗಳೂರು ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ನೀಡಿದವರು. ನರ್ಮ್ ಯೋಜನೆ ಮೂಲಕ ಅನೇಕ ನಗರಗಳ ಮೂಲ ಸೌಕರ್ಯ ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ನೀಡಿದರು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.
ಮನಮೋಹನ್ ಸಿಂಗ್ ಅವರ ಕಾರ್ಯವೈಖರಿ ಕುರಿತು ಸುದ್ದಿಗಾರರ ಜೊತೆಗೆ ಡಿ ಕೆ ಶಿವಕುಮಾರ್ ಅವರು ಮಾತನಾಡಿ, ಬೆಂಗಳೂರಿನ ಅನೇಕ ಮೇಲ್ಸೇತುವೆಗಳು ಇವರು ನೀಡಿದ ಕೊಡುಗೆಗಳು. ಮನ ಮೋಹನ್ ಸಿಂಗ್ ಅವರ ಬಗ್ಗೆ ಮಾತನಾಡಲು ಒಂದು ದಿನವೂ ಸಾಲುವುದಿಲ್ಲ. ಅವರು ದೇಶದ ಎಲ್ಲಾ ವರ್ಗದ ಜನರಿಗೆ ಮರೆಯಲಾಗದ ಕೊಡುಗೆ ಕೊಟ್ಟಿದ್ದಾರೆ. ರೈತರ ಸಾಲಮನ್ನಾ ಮಾಡಿ ಅವರ ಪರವಾಗಿ ದೃಢವಾಗಿ ನಿಂತವರು ಎಂದು ಸ್ಮರಿಸಿದರು.

ಪ್ರತಿ ಕೆಲಸದಲ್ಲಿಯೂ ಗಾಂಭೀರ್ಯತೆ ಪ್ರಾಮಾಣಿಕತೆಯನ್ನು ಉಳಿಸಿಕೊಂಡಿದ್ದವರು ಮನಮೋಹನ್ ಸಿಂಗ್ ಅವರು. ಅವರ ಆಡಳಿತ ಕಾಲದಲ್ಲಿ ಬಡವರ ಪರವಾಗಿ ಅನೇಕ ಕಾರ್ಯಕ್ರಮಗಳನ್ನು ನೀಡಿದ್ದಾರೆ. ನರೇಗಾ ಮೂಲಕ ಗ್ರಾಮೀಣ ಜನರ ಬದುಕಿನಲ್ಲಿ ಉದ್ಯೋಗ ಗ್ಯಾರಂಟಿ ಸೃಷ್ಟಿ ಮಾಡಿದವರು. ಆಹಾರ ಭದ್ರತಾ ಕಾಯ್ದೆ, ಮಾಹಿತಿ ಹಕ್ಕು ಸೇರಿದಂತೆ ಈ ದೇಶವನ್ನು ಗಟ್ಟಿಗೊಳಿಸುವ ಅನೇಕ ಕಾಯ್ದೆಗಳನ್ನು ನೀಡಿದವರು ಎಂದರು.
ಗಾಂಧಿ ಭಾರತ' ಕಾರ್ಯಕ್ರಮ ಅಂಗವಾಗಿ ಬೆಳಗಾವಿಯಲ್ಲಿ ಮಾಡಿರುವ ವಿದ್ಯುತ್ ದೀಪಾಲಂಕಾರವನ್ನು ಸಾರ್ವಜನಿಕರ ವೀಕ್ಷಣೆಗೆ ಉಳಿಸಿಕೊಳ್ಳುವ ಬಗ್ಗೆ ಮುಖ್ಯಮಂತ್ರಿಗಳ ಬಳಿ ಮಾತನಾಡಿ ಶುಕ್ರವಾರ ಬೆಳಿಗ್ಗೆ ಮಾಹಿತಿ ನೀಡಲಾಗುವುದು. ಸಾಕಷ್ಟು ಜನರು ದೀಪಾಲಂಕಾರವನ್ನು ವೀಕ್ಷಿಸುತ್ತಿದ್ದಾರೆ. ಈ ಕಾರಣಕ್ಕೆ ಉಳಿಸಿಕೊಳ್ಳುವ ಬಗ್ಗೆ ತೀರ್ಮಾನ ಮಾಡಲಾಗುವುದು ಎಂದು ಹೇಳಿದರು.
ಶುಕ್ರವಾರ ಸರ್ಕಾರದ ಹಾಗೂ ಪಕ್ಷದ ಎಲ್ಲಾ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ. ಸರ್ಕಾರಿ ರಜೆ ಘೋಷಣೆ ಮಾಡಲಾಗಿದ್ದು, ರಾಜ್ಯದಲ್ಲಿ ಒಂದು ವಾರಗಳ ಕಾಲ ಶೋಕಾಚರಣೆ ಮಾಡಲಾಗುವುದು. ಶ್ರದ್ಧಾಂಜಲಿ ಕಾರ್ಯಕ್ರಮಕ್ಕೆ ಹೊರಜಿಲ್ಲೆಗಳಿಂದ ಜನರು ಆಗಮಿಸುವುದು ಬೇಡ. ಬದಲಾಗಿ ಬೆಳಗಾವಿಯಲ್ಲಿ ಇರುವವರು ಶ್ರದ್ಧಾಂಜಲಿ ಸಭೆಯಲ್ಲಿ ಭಾಗವಹಿಸಿ ಗೌರವ ಸಲ್ಲಿಸಬೇಕು. ಹೊರ ಊರುಗಳಿಂದ ಹೊರಡುವ ಅನೇಕ ಕಾರ್ಯಕರ್ತರು ಹಾಗೂ ನಾಯಕರುಗಳು ಬೆಳಗಾವಿಗೆ ಬರುವುದು ಬೇಡ. ಈಗಾಗಲೇ ಹೊರ ಊರುಗಳಿಂದ ಬಂದಿರುವವರು ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.
ಹೊರ ಊರುಗಳಿಂದ ಬಂದಿರುವ ಸಂಸದರು ಹಾಗೂ ನಾಯಕರುಗಳ ಹೊಣೆ ಹೊತ್ತಿರುವ ಉಸ್ತುವಾರಿ ಸಮಿತಿಯವರು ಅವರುಗಳು ತೆರಳುವ ತನಕ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು. ನಿಮ್ಮ ಜವಾಬ್ದಾರಿ ಮರೆಯಬಾರದು ಎಂದು ತಿಳಿಸಿದರು. ನಾನು ಪಕ್ಷದ ಅಧ್ಯಕ್ಷನಾಗಿ ಮನಮೋಹನ್ ಸಿಂಗ್ ಅವರ ಅಂತಿಮ ದರ್ಶನದಲ್ಲಿ ಭಾಗವಹಿಸುವುದು ನಮ್ಮ ಕರ್ತವ್ಯ. ರಾಜ್ಯದ ಹಿರಿಯ ನಾಯಕರು ಸೇರಿದಂತೆ ಒಂದಷ್ಟು ಮಂದಿ ದೆಹಲಿಗೆ ತೆರಳಲಿದ್ದೇವೆ. ನಾವೆಲ್ಲರೂ ಅವರ ಮಾರ್ಗದರ್ಶನದಲ್ಲಿ ಹಾಗೂ ಕೈ ಕೆಳಗೆ ಕೆಲಸ ಮಾಡಿದವರು ಎಂದು ಹೇಳಿದರು.
ಮನಮೋಹನ್ ಸಿಂಗ್ ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ತುಂಬಾ ನೋವಾಗಿದೆ. ಮನಮೋಹನ್ ಸಿಂಗ್ ಕೇವಲ ರಾಜಕಾರಣಿ ಅಲ್ಲ. ಅವರೊಬ್ಬ ದೇಶ ಹಾಗೂ ಈ ಜಗತ್ತು ಕಂಡ ಮಹಾನ್ ಆರ್ಥಿಕ ತಜ್ಞ. ಇಂದು ಭಾರತ ಜಾಗತಿಕ ಮಟ್ಟದಲ್ಲಿ ಆರ್ಥಿಕ ಪ್ರಗತಿ ಸಾಧಿಸಿದ್ದರೆ ಅದಕ್ಕೆ ಪ್ರಮುಖ ಕಾರಣ ಮನಮೋಹನ್ ಸಿಂಗ್ ಅವರ ಕ್ರಾಂತಿಕಾರಿ ನೀತಿಗಳು. ದೇಶ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾಗ ಜಾಗತೀಕರಣಕ್ಕೆ ಒಡ್ಡಿಕೊಳ್ಳುವ ಮೂಲಕ ದೇಶವನ್ನು ಕಾಪಾಡಿದ ಆಪದ್ಭಾಂದವ.
ಇದೇ ಕಾರಣಕ್ಕೆ ಸೋನಿಯಾ ಗಾಂಧಿ ಅವರು ತಮ್ಮ ಪಾಲಿಗೆ ಬಂದ ಪ್ರಧಾನಿ ಹುದ್ದೆಯನ್ನು ಮನಮೋಹನ್ ಸಿಂಗ್ ಅವರಿಗೆ ಬಿಟ್ಟುಕೊಟ್ಟರು. ಯುಪಿಎ ಮೊದಲ ಹಾಗೂ ಎರಡನೇ ಸರ್ಕಾರದ ಅವಧಿಯಲ್ಲಿ ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್ ಅವರು ನರೇಗಾ, ಮಾಹಿತಿ ಹಕ್ಕು, ಶೈಕ್ಷಣಿಕ ಹಕ್ಕು, ಆಹಾರ ಭದ್ರತಾ ಕಾಯ್ದೆಯಂತಹ ಕ್ರಾಂತಿಕಾರಿ ಯೋಜನೆಗಳನ್ನು ದೇಶದ ಜನತೆಗೆ ಕೊಟ್ಟಿದ್ದಾರೆ.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ












Click it and Unblock the Notifications