Manmohan Singh: ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ, ಮನಮೋಹನ್ ಸಿಂಗ್ ನಿಧನ ಹಿನ್ನೆಲೆ...
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ನಿಧನರಾದ ಸುದ್ದಿ ಇದೀಗ ಜಗತ್ತಿನಾದ್ಯಂತ ಸಂಚಲನ ಸೃಷ್ಟಿ ಮಾಡಿದೆ. ಅಭಿವೃದ್ಧಿಯ ಬೆನ್ನೆಲುಬಾಗಿ, ಆಧುನಿಕ ಭಾರತದ ಅಭಿವೃದ್ಧಿ ವಿಚಾರದಲ್ಲಿ ದೊಡ್ಡ ಕೊಡುಗೆ ನೀಡಿರುವ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಇನ್ನಿಲ್ಲ ಎಂಬ ಸುದ್ದಿ ಸಂಚಲನ ಸೃಷ್ಟಿ ಮಾಡಿದೆ. ಈ ಸುದ್ದಿ ತಿಳಿದು ಕರ್ನಾಟಕ ಸರ್ಕಾರ ಇದೀಗ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದೆ.
ಹೌದು, ಕರ್ನಾಟಕ ಸರ್ಕಾರ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಮಾಡುವ ಜೊತೆಗೆ 7 ದಿನಗಳ ಕಾಲ ಶೋಕಾಚರಣೆಗೆ ಕೂಡ ಆದೇಶ ಹೊರಡಿಸಿದೆ. ಇದರ ಜೊತೆಗೆ ಸರ್ಕಾರದ ಎಲ್ಲಾ ಕಾರ್ಯಕ್ರಮಗಳು ಕೂಡ ರದ್ದಾಗಿದ್ದು, ಕೇಂದ್ರ ಸರ್ಕಾರ ಕೂಡ ಇದೇ ಆದೇಶ ನೀಡಿದೆ. ಭಾರತ ಕಂಡ ಶ್ರೇಷ್ಠ ನಾಯಕರ ಸಾಲಿಗೆ ಮನಮೋಹನ್ ಸಿಂಗ್ ಅವರು ಕೂಡ ಸೇರಿದ್ದು, ವಯೋ ಸಹಜ ಕಾಯಿಲೆಗಳಿಂದ ಅವರು ಬಳಲುತ್ತಿದ್ದರು.

ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ
ಮನಮೋಹನ್ ಸಿಂಗ್ ಅವರಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ದಿಢೀರ್ ಇಂತಹ ಬೆಳವಣಿಗೆ ನಡೆದು ಹೋಗಿದೆ. ಮನಮೋಹನ್ ಸಿಂಗ್ ಅವರು ನಿನ್ನೆ ಸಂಜೆ ದಿಢೀರ್ ದೆಹಲಿ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಈ ಸಮಯದಲ್ಲಿ ಸಾಕಷ್ಟು ಆತಂಕ ನಿರ್ಮಾಣ ಆಗಿತ್ತು. ತುರ್ತುನಿಗಾ ಘಟಕದಲ್ಲಿ ಸಂಜೆಯಿಂದಲೂ ಮನಮೋಹನ್ ಸಿಂಗ್ ಅವರಿಗೆ ಚಿಕಿತ್ಸೆಯನ್ನು ನೀಡಲಾಗಿತ್ತು.
ಆದ್ರೆ ಚಿಕಿತ್ಸೆ ಫಲಿಸದೆ ಮನಮೋಹನ್ ಸಿಂಗ್ ಅವರು ಕೊನೆಯುಸಿರೆಳೆದ ಮಾಹಿತಿ ಹೊರಬಿದ್ದು ಈ ಸುದ್ದಿ ಜಾಗತಿಕವಾಗಿ ಕೂಡ ಹಬ್ಬಿತ್ತು. ಜಾಗತಿಕ ಗಣ್ಯರಿಂದ ಕೂಡ ಇದೀಗ, ಸಂತಾಪ ಸೂಚಿಸಲಾಗಿದ್ದು, ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮತ್ತೊಂದು ಕಡೆ ಶೋಕಾಚರಣೆ ಇರುವ ಹಿನ್ನೆಲೆಯಲ್ಲಿ ಸರ್ಕಾರದ ಕಾರ್ಯಕ್ರಮಗಳು ಕೂಡ ರದ್ದಾಗಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೇರಿದಂತೆ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹಾಗೂ ಸಚಿವರು ದೆಹಲಿಗೆ ತೆರಳಿ ಅಂತಿಮ ನಮನ ಸಲ್ಲಿಸಲಿದ್ದಾರೆ.
ಭಾರತದ ಆರ್ಥಿಕತೆಗೆ ಭದ್ರ ಬುನಾದಿ!
1992ರ ಸಮಯದಲ್ಲೇ ಭಾರತದ ಆರ್ಥಿಕತೆಗೆ ಭದ್ರ ಬುನಾದಿ ಹಾಕಿಕೊಟ್ಟಿದ್ದರು ಮನಮೋಹನ್ ಸಿಂಗ್ ಅವರು. ಭಾರತೀಯರ ಅಭಿವೃದ್ಧಿಗೆ ಶ್ರಮಿಸಿದ್ದ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು 2004 ರಿಂದ 2014ರ ತನಕ ಭಾರತದ ಪ್ರಧಾನಿಯಾಗಿ ಕೂಡ ಕೆಲಸ ಮಾಡಿ ಸಾಕಷ್ಟು ಸುಧಾರಣೆ ತಂದಿದ್ದರು. ಭಾರತದ ಆರ್ಥಿಕ ಸ್ಥಿತಿ ಕೂಡ, ಮನಮೋಹನ್ ಸಿಂಗ್‌ರ ಕಾಲದಲ್ಲಿ ಸಾಕಷ್ಟು ದೊಡ್ಡ ಸುಧಾರಣೆ ಕಂಡಿತ್ತು. ಇದೀಗ ಮನಮೋಹನ್ ಸಿಂಗ್ ಅವರ ಅಗಲಿಕೆಯು ಭಾರಿ ನೋವು ತರಿಸಿದ್ದು, ಭಾರತೀಯರು ಕಂಬನಿ ಮಿಡಿದಿದ್ದಾರೆ.
1947ರ ಸ್ವಾತಂತ್ರ್ಯಕ್ಕೂ ಮೊದಲು....
ಅದು 1932ರ ಸೆಪ್ಟೆಂಬರ್ 26, ಆ ದಿನ ಭಾರತದ ಆರ್ಥಿಕತೆಯ ಲೆಜೆಂಡ್ ಮನಮೋಹನ್ ಸಿಂಗ್ ಅವರು ಜನಿಸಿದ್ದರು. ಆಗಿನ್ನೂ ಭಾರತ & ಪಾಕಿಸ್ತಾನ ಬೇರೆ ಬೇರೆ ಆಗಿರಲಿಲ್ಲ. ಅಖಂಡ ಭಾರತ ಅಸ್ತಿತ್ವದಲ್ಲಿ ಇದ್ದ ಸಮಯದಲ್ಲಿ, ಪಾಕಿಸ್ತಾನದ ಈಗಿನ ಭೂಭಾಗ ಗಾಹ್ ಭಾಗದಲ್ಲಿ ಮನಮೋಹನ್ ಸಿಂಗ್ ಅವರು ಜನಿಸಿದ್ದರು.
ಹೀಗೆ ಪಾಕಿಸ್ತಾನದ ಈಗಿನ ಭೂಭಾಗದಲ್ಲಿ ಜನಿಸಿ ಮುಂದೆ ಭಾರತದ ಪ್ರಧಾನಿ ಕೂಡ ಆದರು. 1947ರ ಸಮಯದಲ್ಲಿ, ಭಾರತ & ಪಾಕಿಸ್ತಾನ ಎಂದು ದೇಶ ವಿಭಜನೆ ಮಾಡಿ ಹೊರಟ ಬ್ರಿಟೀಷರ ನಿರ್ಧಾರದ ಪರಿಣಾಮ ಕಿಚ್ಚು ಹೊತ್ತಿತ್ತು. ಹೀಗೆ ಪಾಕಿಸ್ತಾನದ ಭೂಭಾಗದಲ್ಲಿ ವಾಸವಿದ್ದ ಮನಮೋಹನ್ ಸಿಂಗ್ ಅವರ ಕುಟುಂಬವು, ಭಾರತಕ್ಕೆ ವಲಸೆ ಬಂದು ನೆಲಸಿದರು.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications