ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ದೇವಾಲಯದಲ್ಲಿ ಹೊಸ ವಿವಾದ, ಕನ್ನಡಿಗರ ಆಕ್ರೋಶ!
Mantralaya Temple: ಶ್ರೀ ರಾಘವೇಂದ್ರ ಸ್ವಾಮಿ (ರಾಯರು) ಕನ್ನಡಿಗರ ಆರಾಧ್ಯ ದೈವರಾಗಿದ್ದಾರೆ. ಆದರೆ ಇದೀಗ ಮಂತ್ರಾಲಯದ ವಿಚಾರವಾಗಿ ಆಂಧ್ರಪ್ರದೇಶದ ತೆಲುಗು ಭಾಷಿಕರು ಅನವಶ್ಯಕವಾಗಿ ವಿವಾದವೊಂದನ್ನು ಸೃಷ್ಟಿ ಮಾಡಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಈ ವಿಚಾರವು ಭಾರೀ ಚರ್ಚೆಗೆ ಕಾರಣವಾಗಿದೆ.
ರಾಯರನ್ನು ಕನ್ನಡಿಗರು ಸ್ಮರಿಸುವ ಹಾಗೂ ಭಕ್ತಿಯಿಂದ ಹೇಳುವ ಪ್ರಮುಖ ಸಾಲುಗಳಾದ "ಪೂಜ್ಯಾಯ ರಾಘವೇಂದ್ರಾಯ ಸತ್ಯ ಧರ್ಮ ರತಾಯಚ ಭಜತಾಂ ಕಲ್ಪವೃಕ್ಷಾಯ ನಮತಾಂ ಕಾಮಧೇನವೇ" ಎನ್ನುವ ವಿಶೇಷ ಸಾಲುಗಳ ಬಗ್ಗೆ ಆಂಧ್ರಪ್ರದೇಶದ ತೆಲುಗು ಭಾಷಿಕರು ಅನಗತ್ಯ ವಿವಾದವನ್ನು ಸೃಷ್ಟಿ ಮಾಡುತ್ತಿದ್ದಾರೆ. ಕರ್ನಾಟಕ ಮತ್ತು ಆಂಧ್ರಪ್ರದೇಶದ ಗಡಿ ಭಾಗದಲ್ಲಿರುವ ಮಂತ್ರಾಲಯ ದೇವಾಲದಯ ವಿಚಾರದಲ್ಲಿ ಇದೀಗ ಭಾಷಾ ವಿವಾದ ಸೃಷ್ಟಿಯಾಗಿದೆ. ಇದನ್ನು ತೆಲುಗು ಭಾಷಿಕರು ಸೋಷಿಯಲ್ ಮೀಡಿಯಾ ಎಕ್ಸ್ನಲ್ಲಿ ಸೃಷ್ಟಿ ಮಾಡಿದ್ದು, ಇದಕ್ಕೆ ಕನ್ನಡಿಗರು ವಿರೋಧ ವ್ಯಕ್ತಪಡಿಸಿದ್ದಾರೆ.

Andhra & Amaravati Updates ಎನ್ನುವ ಸೋಷಿಯಲ್ ಮೀಡಿಯಾ ಖಾತೆಯಿಂದ 📍ಮಂತ್ರಾಲಯ, ಆಂಧ್ರಪ್ರದೇಶ .. ಮಾನ್ಯ ಮುಖ್ಯಮಂತ್ರಿಗಳೇ, ಮಾನ್ಯ ಉಪಮುಖ್ಯಮಂತ್ರಿಗಳೇ, ತೆಲುಗು ಮಂಡಳಿ ಎಲ್ಲಿದೆ ಸರ್? ಮಂತ್ರಾಲಯ ಆಂಧ್ರಪ್ರದೇಶದ ಒಂದು ಭಾಗ, ಅಲ್ಲಿ ತೆಲುಗು ಭಾಷೆಯನ್ನು ಸಂಪೂರ್ಣವಾಗಿ ಹೇಗೆ ತ್ಯಜಿಸಬಹುದು? ಮೊದಲು, ಈ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಿ ಎಂದು ಕನ್ನಡದಲ್ಲಿ ಬರೆದಿರುವ "ಪೂಜ್ಯಾಯ ರಾಘವೇಂದ್ರಾಯ ಸತ್ಯ ಧರ್ಮ ರತಾಯಚ ಭಜತಾಂ ಕಲ್ಪವೃಕ್ಷಾಯ ನಮತಾಂ ಕಾಮಧೇನವೇ" ಎನ್ನುವ ಬರಹವಿರುವ ಫೋಟೋವನ್ನು ಪೋಸ್ಟ್ ಮಾಡಿ ಪ್ರಶ್ನೆ ಮಾಡಲಾಗಿದೆ. ಇದಕ್ಕೆ ಹಲವು ತೆಲುಗು ಭಾಷಿಕರು ಸಹಮತ ವ್ಯಕ್ತಪಡಿಸಿ ಟ್ಯಾಗ್ ಮಾಡುತ್ತಿದ್ದು. ಇದೀಗ ಈ ಪೋಸ್ಟ್ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಮಂತ್ರಾಲಯದ ಪ್ರವೇಶದ್ವಾರದಲ್ಲಿ "ತೆಲುಗು ಭಾಷೆಯ"ಬರಹ ದೊಡ್ಡದಾಗಿ, ಸ್ಪಷ್ಟವಾದ ರೀತಿಯಲ್ಲಿ ಪ್ರದರ್ಶಿಸಬೇಕು. ಇತರ ಭಾಷೆಗಳನ್ನು ಸಹ ತೋರಿಸಬಹುದು, ಯಾವುದೇ ಆಕ್ಷೇಪಣೆ ಇಲ್ಲ, ಆದರೆ ದಯವಿಟ್ಟು ತೆಲುಗು ಭಾಷೆಯನ್ನು ಪ್ರಮುಖವಾಗಿ ಹೈಲೈಟ್ ಮಾಡಿ, ಏಕೆಂದರೆ ಅದು ನಮ್ಮ ಗುರುತು ಮತ್ತು ಸಂಸ್ಕೃತಿಯನ್ನು ಪ್ರತಿಬಿಂಬಿಸುತ್ತದೆ ಮತ್ತೊಬ್ಬ ತೆಲುಗು ನೆಟ್ಟಿಗರು ಟ್ವೀಟ್ ಮಾಡಿದ್ದಾರೆ.
ಅಲ್ಲದೇ ಗೂಗಲ್ ಮ್ಯಾಪ್ನಲ್ಲಿ ಶ್ರೀ ರಾಘವೇಂದ್ರ ಸ್ವಾಮಿ ಮಠ ಎನ್ನುವ ಬದಲು ಶ್ರೀ ರಾಘವೇಂದ್ರ ಸ್ವಾಮಿವಾರಿ ಮಠಂ ಎಂದು ಬದಲಾಯಿಸಿ ಎನ್ನುವ ಅಭಿಯಾನವೂ ಸಹ ಕಳೆದ ಕೆಲವು ದಿನಗಳಿಂದ ನಡೆಯುತ್ತಿದೆ. ಆಂಧ್ರಪ್ರದೇಶದ ರಾಯಲಸೀಮಾ ಜಿಲ್ಲೆಯ ಇತರ ರಾಜ್ಯಗಳೊಂದಿಗೆ ಗಡಿ ಹಂಚಿಕೊಳ್ಳುವ ಪ್ರದೇಶಗಳಿಗೆ ನಮ್ಮ ಭಾಷೆಯಲ್ಲಿ ಹೆಸರುಗಳು ಇರಬೇಕು.
ಈಗ ಮಂತ್ರಾಲಯವನ್ನು ನಮ್ಮ ತೆಲುಗು ಭಾಷೆಗೆ ಬದಲಾಯಿಸಲಾಗಿದೆ, ಅದೇ ರೀತಿ, ಬೇರೆ ಯಾವುದೇ ಪ್ರದೇಶವು ನಮ್ಮ ಅಧಿಕೃತ ಭಾಷೆಯಲ್ಲಿಲ್ಲದಿದ್ದರೂ ತೆಲುಗು ಹೊರತುಪಡಿಸಿ ಬೇರೆ ಭಾಷೆಯಲ್ಲಿದ್ದರೆ, ಅವು ತೆಲುಗಿನಲ್ಲಿವೆ ಎಂದು ಖಚಿತಪಡಿಸಿಕೊಳ್ಳೋಣ ಎಂದು ಟ್ವೀಟ್ ಮಾಡಲಾಗಿದೆ.
📍మంత్రాలయం, ఆంధ్రప్రదేశ్
— Andhra & Amaravati Updates (@AP_CRDANews) December 9, 2025
గౌరవనీయులైన ముఖ్యమంత్రి గారు, గౌరవనీయులైన ఉప ముఖ్యమంత్రి గారు, తెలుగు బోర్డు ఎక్కడ ఉంది సార్? మంత్రాలయం ఆంధ్రప్రదేశ్లో భాగం, అక్కడ తెలుగును పూర్తిగా ఎలా వదిలేస్తారు? ముందుగా ఈ విషయంలో తగిన చర్యలు తీసుకోండి.@ncbn @AndhraPradeshCM @PawanKalyan… pic.twitter.com/I39CTv6jfT
ಒಟ್ಟಾರೆ ಕರ್ನಾಟಕ ಮತ್ತು ಆಂಧ್ರಪ್ರದೇಶದ ಗಡಿಭಾಗ ಹಾಗೂ ರಾಯಚೂರಿನಿಂದ ಕೂಗಳತೆಯ ದೂರದಲ್ಲಿರುವ ರಾಯರ ಸನ್ನಿಧಾನದ ಬಗ್ಗೆ ಇದೀಗ ಅನವಶ್ಯಕವಾದ ವಿವಾದ ಸೃಷ್ಟಿಯಾಗಿದೆ. ದಶಕಗಳಿಂದ ಕನ್ನಡದಲ್ಲಿರುವ ಬೋರ್ಡ್ನ ಬಗ್ಗೆ ಈಗ ವಿವಾದವೇಕೆ ಎಂದು ಕನ್ನಡಿಗರು ಪ್ರಶ್ನೆ ಮಾಡಿದ್ದಾರೆ.
ಮಂತ್ರಾಲಯ ಆಂಧ್ರಪ್ರದೇಶದಲ್ಲಿದೆ: ಮಂತ್ರಾಲಯ ರಾಯರ ಸನ್ನಿಧಾನವು ಆಂಧ್ರಪ್ರದೇಶದಲ್ಲಿ ಇದೆ. ಇಲ್ಲಿ ಕನ್ನಡದ ಬೋರ್ಡ್ ಯಾಕೆ ಎಂದು ತೆಲುಗು ಭಾಷಿಕರು ಸೋಷಿಯಲ್ ಮೀಡಿಯಾದಲ್ಲಿ ಪ್ರಶ್ನೆ ಮಾಡಿದ್ದಾರೆ.
-
Kannada Books: ಓದುಗರಷ್ಟು ಪ್ರಾಮಾಣಿಕತೆ ಪುಸ್ತಕ ಮಳಿಗೆ ಮಾಡಿರುವವರಿಗಿಲ್ಲ: ರಾಜೇಂದ್ರ ಪ್ರಸಾದ್ ಬರಹ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ











Click it and Unblock the Notifications