Get Updates
Get notified of breaking news, exclusive insights, and must-see stories!

ರೈತರಿಗೆ ಆತಂಕ, ಎರಡನೇ ಬೆಳೆಗೆ ನೀರಿಲ್ಲ; ತುಂಗಭದ್ರಾ ಜಲಾಶಯಕ್ಕೆ 39 ಗೇಟ್ ಅಳವಡಿಸಲು ಟೆಂಡರ್: ಡಿ.ಕೆ.ಶಿವಕುಮಾರ್

ಬೆಂಗಳೂರು, ಅಗಸ್ಟ್ 21: ತುಂಗಭದ್ರಾ ಅಣೆಕಟ್ಟೆಯ ಎಲ್ಲಾ 33 ಕ್ರೆಸ್ಟ್ ಗೇಟ್ ಗಳನ್ನು ಬದಲಾವಣೆ ಮಾಡಲು ತುಂಗಭದ್ರಾ ಮಂಡಳಿಯವರು ಟೆಂಡರ್ ಕರೆದಿದ್ದಾರೆ. ಈಗಾಗಲೇ ಅಹಮದಾಬಾದ್ ಸಂಸ್ಥೆಯವರಿಗೆ ಗುತ್ತಿಗೆ ನೀಡಲಾಗಿದೆ. ಆರು ಗೇಟ್ ಗಳ ತಯಾರಿ ಕೆಲಸ ನಡೆಯುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವಿಧಾನಸಭೆಯಲ್ಲಿ ತಿಳಿಸಿದರು.

ಈಗಾಗಲೇ ಗೇಟ್ ಗಳ ಫ್ಯಾಬ್ರಿಕೇಷನ್ ಕೆಲಸ ಪ್ರಾರಂಭವಾಗಿದೆ. ಅಗತ್ಯ ಸಲಕರಣೆಗಳು ಬರುತ್ತಿವೆ. ಗದಗ, ಹೊಸಪೇಟೆಯಲ್ಲಿ ಎರಡೆರಡು ಕಡೆ ಗೇಟ್ ಗಳ ತಯಾರಿ ಕೆಲಸ ಮುಂದುವರೆದಿದೆ. ಜಿಂದಾಲ್ ಅವರು ಇದಕ್ಕೆ ಸಹಕಾರ ನೀಡುತ್ತಿದ್ದಾರೆ. ಆಂಧ್ರ ಪ್ರದೇಶದ ಎಂಜಿನಿಯರ್ ಅವರಿಗೆ ಕೆಲಸವನ್ನು ಇನ್ನೂ ವೇಗಗೊಳಿಸಿ ಎಂದು ಸೂಚನೆ ನೀಡಿದ್ದೇನೆ. ಗೇಟ್ ತಯಾರಿಸಲು ಬೇರೆಯವರಿಗೂ ಅವಕಾಶ ನೀಡಿ, ಇದರಿಂದ ಕೆಲಸ ಬೇಗ ಆಗುತ್ತದೆ ಎಂದು ಹೇಳಿದ್ದೇನೆ ಎಂದು ತಿಳಿಸಿದರು.

Manufacturing of crest gates for Tungabhadra dam in progress DCM DK Shivakumar

ಅಣೆಕಟ್ಟೆಯ ಸುರಕ್ಷತೆ ದೃಷ್ಟಿಯಿಂದ 80 ಟಿಎಂಸಿ ನೀರನ್ನು ಮಾತ್ರ ಸಂಗ್ರಹ ಮಾಡಬೇಕಾದ ಕಾರಣಕ್ಕೆ ಎರಡನೇ ಬೆಳೆಗೆ ಈ ವರ್ಷ ನೀರು ನೀಡಲು ಸಾಧ್ಯವಾಗುತ್ತಿಲ್ಲ. ನೀರು ಕೊಟ್ಟರೆ ಗೇಟ್ ಅಳವಡಿಕೆ ಸಾಧ್ಯವಿಲ್ಲ. ಬೆಳೆಯ ಬಗ್ಗೆ ನಮ್ಮ ರೈತರಿಗೆ ಆತಂಕವಾಗಿದೆ. ನಾನು ಸಹ ಅಧಿಕಾರಿಗಳ ಬಳಿ ಮಾತನಾಡಿದೆ. ಆಗ ಅವರು ಅಣೆಕಟ್ಟು ಮುಖ್ಯವೇ? ಬೆಳೆ ಮುಖ್ಯವೇ? ಎಂದು ಕೇಳಿದರು. ಕುಡಿಯುವ ನೀರಿಗೆ ಹಾಗೂ ಕೈಗಾರಿಕೆಗಳಿಗೆ ನಾವು ಯಥಾಸ್ಥಿತಿಯಲ್ಲಿ ನೀರು ಹರಿಸುತ್ತೇವೆ. ಸ್ಟ್ರಚ್ಚರ್ ದುರಸ್ತಿ ಕೆಲಸಗಳನ್ನು ತುರ್ತಾಗಿ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

ಕನ್ನಯ್ಯ ನಾಯ್ಡು ಅವರ ಸಲಹೆಯಂತೆ ಅಣೆಕಟ್ಟೆಯಲ್ಲಿ ಸಂಪೂರ್ಣ ನೀರು ಸಂಗ್ರಹ ಮಾಡದೇ 1,626 ಅಡಿ ಅಂದರೆ ಶೇ. 76 ರಷ್ಟು ನೀರು ಸಂಗ್ರಹ ಮಾಡಬೇಕು. ಒಟ್ಟು 80 ಟಿಎಂಸಿ ನೀರನ್ನು ಸಂಗ್ರಹ ಮಾಡಲು ತುಂಗಭದ್ರಾ ಮಂಡಳಿ ತೀರ್ಮಾನ ಮಾಡಿದೆ. ಈ ಮಂಡಳಿಯಲ್ಲಿ ನಮ್ಮ ರಾಜ್ಯದ ಯಾವುದೇ ಅಧಿಕಾರವಿಲ್ಲ. ಬೇರೆಯವರು ದುಡ್ಡು ನೀಡುತ್ತಾರೋ ಬಿಡುತ್ತಾರೋ, ನಾವೇ ದುಡ್ಡು ನೀಡಿ ಅಣೆಕಟ್ಟು ಉಳಿಸಿಕೊಳ್ಳಲು ತಯಾರಿದ್ದೇವೆ. ನಮ್ಮ ರೈತರ ಜೊತೆಗೆ ಅವರ ರೈತರನ್ನೂ ನಾವು ಉಳಿಸುತ್ತೇವೆ ಎಂದರು.

ದುರಸ್ತಿ ವೆಚ್ಚ ಕರ್ನಾಟಕದ್ದು ಶೇ 66, ಆಂಧ್ರ ಹಾಗೂ ತೆಲಂಗಾಣ ಸೇರಿ 33 ರಷ್ಟು ಹಣ ನೀಡಬೇಕು. ಆದರೆ ಆಂಧ್ರದವರು ಹಣವನ್ನೇ ಮೀಸಲಿಟ್ಟಿರಲಿಲ್ಲ. ಅವರಿಂದ ಆನಂತರ ಹಣ ಪಡೆದರಾಯಿತು, ಅವರ ಪಾಲಿನ ಹಣವನ್ನೂ ನಾವೇ ನೀಡುತ್ತೇವೆ ಎಂದು ಅಧಿಕಾರಿಗಳಿಗೆ ಹೇಳಿದೆ. ನಾವು ದುಡ್ಡು ನೀಡಲು ಹೋದರೂ ಅವರು ತೆಗೆದುಕೊಳ್ಳಲು ತಯಾರಿಲ್ಲ. ನಮಗೆ, ನಮ್ಮ ರೈತರಿಗೆ ತೊಂದರೆಯಾಗುವುದು ಬೇಡ ಎಂದು ನಾವೇ ಹಣ ನೀಡಲು ಮುಂದಾದೆವು ಎಂದರು.

ನವಿಲೆ ಬಳಿ ಸಮತೋಲಿತ ಅಣೆಕಟ್ಟು ನಿರ್ಮಾಣದ ಬಗ್ಗೆ ಆಂಧ್ರ ಮುಖ್ಯಮಂತ್ರಿಗಳ ಬಳಿ ಮಾತನಾಡಲು ನಾನು ಮೂರು ಭಾರಿ ಪ್ರಯತ್ನಪಟ್ಟೆ. ಆದರೆ ಸಾಧ್ಯವಾಗಲಿಲ್ಲ. ತಂಡವನ್ನು ಸಹ ಚರ್ಚೆ ನಡೆಸಲು ಕಳಿಸಿದ್ದೆ. ಆದರೆ ಅವರು ಮುಂದೆ ಬರಲಿಲ್ಲ. ಆಂಧ್ರ ಮುಖ್ಯಮಂತ್ರಿಯವರು ಏಕೆ ಸಮಯ ನೀಡಲಿಲ್ಲ ಎಂಬುದು ನನಗೆ ತಿಳಿದಿಲ್ಲ. ಏಕೆಂದರೆ ಹೆಚ್ಚಿನ ನೀರು ಅವರಿಗೆ ಹೋಗುತ್ತಿದೆಯಲ್ಲ ಎಂದು ಇರಬಹುದೇನೋ ಎಂದರು.

ಅಣೆಕಟ್ಟೆಯ ಸಂಗ್ರಹ ಸಾಮರ್ಥ್ಯ ಹೂಳಿನಿಂದಾಗಿ 105 ಟಿಎಂಸಿಗೆ ಕುಸಿದಿದೆ. ಆದ ಕಾರಣಕ್ಕೆ 11 ಸಾವಿರ ಕೋಟಿ ರೂ. ವೆಚ್ಚದಲ್ಲಿ ನವಿಲೆ ಬಳಿ ಸಮತೋಲಿತ ಅಣೆಕಟ್ಟು ನಿರ್ಮಾಣಕ್ಕೆ ನಾವು ಯೋಜನೆ ರೂಪಿಸಿದ್ದೆವು. ಈ ಯೋಜನೆ ಅನುಮೋದನೆಗೆ ಮಂಡಳಿಯ ಮುಂದೆ 22.11.2024 ರಂದು ಪ್ರಸ್ತಾವನೆ ಸಲ್ಲಿಸಿದ್ದೇವೆ. ಆದರೆ ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಅಲ್ಲದೇ ಅನೇಕ ಸಭೆಗಳಲ್ಲಿ ಈ ವಿಚಾರ ಮಂಡಿಸಲಾಗಿದೆ. ಪತ್ರ ಬರೆದು ಒತ್ತಡ ಹಾಕಲಾಗಿದೆ. ಎರಡು ರಾಜ್ಯದ ಮುಖ್ಯಮಂತ್ರಿಗಳಿಗೆ 14.02.25 ರಂದು ಪತ್ರ ಬರೆದಿದ್ದೇನೆ. ಸಂಬಂಧಪಟ್ಟ ಮಂತ್ರಿಗಳ ಜೊತೆಯಲ್ಲಿಯೂ ನಾನು ಮಾತನಾಡಿದ್ದೇನೆ ಎಂದು ತಿಳಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+