ಬಿಜೆಪಿ-ಜೆಡಿಎಸ್‌ ಹಲವು ಶಾಸಕರು ಕಾಂಗ್ರೆಸ್‌ ಸೇರ್ಪಡೆ ಕುರಿತು ಮಹತ್ವದ ಹೇಳಿಕೆ ನೀಡಿದ ಸಿದ್ದರಾಮಯ್ಯ

ಬೆಂಗಳೂರು, ನವೆಂಬರ್ 07: ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್‌ನ ಹಲವು ಶಾಸಕರು, ಮುಖಂಡರು, ಕಾರ್ಯಕರ್ತರು ಸ್ವಯಂಪ್ರೇರಿತರಾಗಿ ಕಾಂಗ್ರೆಸ್‌ಗೆ ಸೇರ್ಪಡೆಯಾಗಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕಾಂಗ್ರೆಸ್‌ ಪಕ್ಷ ಆಪರೇಷನ್‌ ಹಸ್ತದಲ್ಲಿ ತೊಡಗಿಲ್ಲ ಎಂದ ಅವರು, ಬಿಜೆಪಿ ಮತ್ತು ಜೆಡಿಎಸ್‌ನಿಂದ ಹಾಲಿ ಶಾಸಕರು, ಮಾಜಿ ಶಾಸಕರು, ಮುಖಂಡರು ಮತ್ತು ಕಾರ್ಯಕರ್ತರು ಸೇರಿದಂತೆ ಅನೇಕ ಜನರು ಆಡಳಿತ ಪಕ್ಷದ ಯಾವುದೇ ರೀತಿಯ ಒತ್ತಾಯವಿಲ್ಲದೆ ಕಾಂಗ್ರೆಸ್‌ಗೆ ಬರುತ್ತಿದ್ದಾರೆ ಎಂದು ಹೇಳಿದರು.

Many BJP & JDS legislators will join Congress soon, says Karnataka CM Siddaramaiah

ಆಪರೇಷನ್ ಹಸ್ತ ಮಾಡುವ ಪ್ರಶ್ನೆಯೇ ಇಲ್ಲ, ಯಾರೇ ಪಕ್ಷಕ್ಕೆ ಬಂದರೂ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತೇವೆ. 'ಹಸ್ತ' ಇಲ್ಲ, ಆಪರೇಷನ್ ಇಲ್ಲ. ನಮ್ಮ ಪಕ್ಷದ ಸಿದ್ಧಾಂತ ಮತ್ತು ನಾಯಕತ್ವವನ್ನು ಒಪ್ಪಿಕೊಂಡು ಯಾರೇ ಪಕ್ಷಕ್ಕೆ ಬಂದರೂ ಸ್ವಾಗತಿಸುತ್ತೇವೆ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿಗಳು, ಶಾಸಕರೊಂದಿಗೆ ನಡೆಸಲಾದ ಉಪಹಾರ ಸಭೆಯ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ, ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಸಭೆಯನ್ನು ನಡೆಸಲಾಗಿತ್ತು. ಪ್ರತಿ ಜಿಲ್ಲೆಗೆ ಓರ್ವ ಮಂತ್ರಿಯನ್ನು ವೀಕ್ಷಕರನ್ನಾಗಿ ನೇಮಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಾಸಕರಿಗೆ ಆಯಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸುವಂತೆ ಮನವಿ ಮಾಡಲಾಗಿದೆ. ಬರಗಾಲ ಪರಿಸ್ಥಿತಿ ನಿರ್ವಹಣೆಯ ಜವಾಬ್ದಾರಿಯನ್ನೂ ವಹಿಸಲಾಗಿದೆ ಎಂದರು.

Many BJP & JDS legislators will join Congress soon, says Karnataka CM Siddaramaiah

ಲೋಕಸಭೆ ಚುನಾವಣೆಗೂ ಮುಂಚೆ ಅಥವಾ ನಂತರ ಮುಖ್ಯಮಂತ್ರಿಗಳು ಬದಲಾಗುತ್ತಾರೆ ಎಂಬ ಯತ್ನಾಳ್ ಅವರ ಹೇಳಿಕೆ ಬಗ್ಗೆ ಪ್ರತಿಕ್ರಯಿಸಿ, ಇಂತಹ ವಿಚಾರಗಳ ಬಗ್ಗೆ ಪಕ್ಷದ ಹೈಕಮಾಂಡ್ ನಿರ್ಧರಿಸುತ್ತದೆ. ಇವರಿಗೆ ಮಾತನಾಡುವ ಹಕ್ಕಿಲ್ಲ. ವಿರೋಧಪಕ್ಷ ನಾಯಕರ ಆಯ್ಕೆಯನ್ನೇ ಬಿಜೆಪಿಯವರಿಗೆ ಮಾಡಲು ಸಾಧ್ಯವಾಗಿಲ್ಲ. ನಮ್ಮ ಪಕ್ಷದ ವಿಚಾರವನ್ನ ಅವರ್ಯಾಕೆ ಕಾಮೆಂಟ್ ಮಾಡುತ್ತಿದ್ದಾರೆ, ನಮ್ಮ ಪಕ್ಷದ ವಿಚಾರವನ್ನ ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಹೇಳಿದರು.

ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಎರಡೂವರೆ ವರ್ಷ ಪೂರೈಸಿದ ನಂತರ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಮಾಡಬೇಕೇ ಅಥವಾ ಬೇಡವೇ ಎಂಬುದನ್ನು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸುತ್ತದೆ. ಕಳೆದ ವಾರ ಸಿದ್ದರಾಮಯ್ಯ ಅವರು ಸಂಪೂರ್ಣ ಐದು ವರ್ಷಗಳ ಅವಧಿಗೆ ಮುಖ್ಯಮಂತ್ರಿಯಾಗಿಯೇ ಇರುವುದಾಗಿ ಹೇಳಿಕೆ ನೀಡಿರುವುದು ಕಾಂಗ್ರೆಸ್ ವಲಯದಲ್ಲಿ ಕೆಲವರಿಗೆ ಇಷ್ಟವಾಗಲಿಲ್ಲ, ಪಕ್ಷದ ಹಲವು ಶಾಸಕರು ಮತ್ತು ಸಚಿವರು ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಆದರೆ, ನಂತರ ಮಾಧ್ಯಮಗಳು ತಪ್ಪಾಗಿ ಹೇಳಿಕೆ ನೀಡಿದ ಕಾರಣಕ್ಕೆ ದೂಷಿಸಿದ ಸಿದ್ದರಾಮಯ್ಯ, ಹೈಕಮಾಂಡ್ ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ನಾನು ಬದ್ಧ ಎಂದು ಸ್ಪಷ್ಟಪಡಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+