ಬಿಜೆಪಿಯಲ್ಲಿ ಅಸಮಾಧಾನದ ಕಿಚ್ಚು; ಅನೇಕ ಅತೃಪ್ತ ಬಿಜೆಪಿಗರು ನನ್ನ ಸಂಪರ್ಕದಲ್ಲಿ; ಹೊಸ ಬಾಂಬ್‌ ಸಿಡಿಸಿದ ಮಾಜಿ ಸಿಎಂ

ಬೆಂಗಳೂರು, ಸೆಪ್ಟೆಂಬರ್‌ 06: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡ ಬಿಜೆಪಿ ಪಾಳಯದಲ್ಲಿ ದಿನದಿಂದ ದಿನಕ್ಕೆ ಅಸಮಾಧಾನಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇತ್ತ ಬಹಿರಂವಾಗಿಯೇ ಪಕ್ಷದ ನಾಯಕರ ವಿರುದ್ದ ಅಸಮಾಧಾನ ಹೊರ ಹಾಕಿದ ನಾಯಕರಿಗೆ ಕೈ ಪಡೆ ಆಪರೇಷನ್‌ ಹಸ್ತದ ದಾಳ ಹುರುಳಿಸಿದೆ.

ಹೌದು, ಈಗಾಗಲೇ ಬಿಜೆಪಿಯ ಹಲವು ಮಾಜಿ ಹಾಗೂ ಹಾಲಿ ಶಾಸಕರನ್ನ ರಾಜ್ಯ ಕಾಂಗ್ರೆಸ್‌ ನಾಯಕರು ಸಂಪರ್ಕಿಸಿದ್ದಾರೆ ಎನ್ನುವ ಮಾಹಿತಿಯನ್ನ ಕೆಲ ನಾಯಕರೇ ಬಹಿರಂಗವಾಗಿ ಹೊರಹಾಕಿದ್ದು, ಇತ್ತ ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನ ಪರಿಷತ್‌ ಸದಸ್ಯ ಜಗದೀಶ್‌ ಶೆಟ್ಟರ್‌ ನನ್ನ ಜೊತೆಗೆ ಅನೇಕ ಅತೃಪ್ತ ಬಿಜೆಪಿ ನಾಯಕರಿದ್ದಾರೆ ಎಂದು ಹೊಸ ಬಾಂಬ್‌ ಸಿಡಿಸಿದ್ದಾರೆ.

Many Disgruntled BJP Members In Touch With Me Jagadish Shettar Said

ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಬಿಜೆಪಿಯ ಅನೇಕ ಲಿಂಗಾಯತ ನಾಯಕರಲ್ಲಿ ಆಕ್ರೋಶವಿದೆ, ಬಹಳಷ್ಟು ಮುಖಂಡರು ತಮ್ಮ ಜೊತೆ ಮಾತನಾಡಿದ್ದಾರೆ. ಮಾಜಿ ಸಚಿವರು ಚರ್ಚಿಸಿದ್ದಾರೆ. ಎಷ್ಟೋ ಜನ ಬಿಜೆಪಿ ಬಿಟ್ಟು ಕಾಂಗ್ರೆಸ್‌ಗೆ ಸೇರ್ಪಡೆಯಾಗುತ್ತಿದ್ದಾರೆ ಎಂದು ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಹೊಸ ಬಾಂಬ್‌ ಸಿಡಿಸಿದ್ದಾರೆ.

ಬಿಜೆಪಿಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಲಿಂಗಾಯತ ನಾಯಕ ಯಡಿಯೂರಪ್ಪ ಅವರನ್ನು ಅಧಿಕಾರದಿಂದ ಕೆಳಗೆ ಇಳಿಸಿದ್ದು ಮಾತ್ರವಲ್ಲ, ರಾಜ್ಯಾಧ್ಯಕ್ಷರ ಆಯ್ಕೆ ಮಾಡಲಾಗಿಲ್ಲ. ಎಷ್ಟೋ ಜನ ಬಿಜೆಪಿ ಬಿಟ್ಟು ಕಾಂಗ್ರೆಸ್‌ಗೆ ಸೇರ್ಪಡೆಯಾಗುತ್ತಿದ್ದಾರೆ. ಒಟ್ಟಾರೆ ಬಿಜೆಪಿಯಲ್ಲಿ ಅನೇಕ ಸಮಸ್ಯೆಗಳಿವೆ. ದಿನದಿಂದ ದಿನಕ್ಕೆ ಬಿಜೆಪಿ ಅಧೋಗತಿಗೆ ಇಳಿಯುತ್ತಿದೆ ಎಂದು ಹೇಳಿದ್ದಾರೆ.

ಲೋಕಸಭಾ ಚುನಾವಣೆ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಈ ಬಾರೀ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಕಾಂಗ್ರೆಸ್‌ 15-20 ಸ್ಥಾನಗಳಲ್ಲಿ ಗೆಲ್ಲಲಿದೆ ಎಂದು ಭವಿಷ್ಯ ನುಡಿದ ಅವರು, ಕೆಲವು ಜಿಲ್ಲೆಗಳಲ್ಲಿ ಪ್ರವಾಸಕ್ಕೆ ಹೋದ ಸಂದರ್ಭದಲ್ಲಿ ಕಾಂಗ್ರೆಸ್‌ ಸರ್ಕಾರ ಜಾರಿಗೆ ತಂದಿರುವ ವಿವಿಧ ಕಾರ್ಯಕ್ರಮಗಳನ್ನು ಸ್ವಾಗತಿಸುತ್ತಿದ್ದಾರೆ ಎಂದು ಹೇಳಿದರು.

ಸಮಸ್ಯೆಗಳ ಕುರಿತು ಶಾಸಕ ಬಸವರಾಜ ರಾಯರೆಡ್ಡಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಈ ವಿಷಯದಲ್ಲಿ ರಾಜ್ಯಾಧ್ಯಕ್ಷರು ನಿರ್ಧಾರ ಮಾಡುತ್ತಾರೆ. ನಾನು ಅಲ್ಲ ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+