ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ತುಂಗಭದ್ರಾ ಜಲಾಶಯದಿಂದ ಭಾರಿ ನೀರು ಬಿಡುಗಡೆ: ಹಂಪಿಯ ವಿವಿಧ ಸ್ಮಾರಕಗಳು ಜಲಾವೃತ

|
Google Oneindia Kannada News

ಬೆಂಗಳೂರು, ಆಗಸ್ಟ್ 10: ಕರ್ನಾಟಕದ ವಿಜಯನಗರ ಜಿಲ್ಲೆಯ ತುಂಗಭದ್ರಾ ಅಣೆಕಟ್ಟಿನಿಂದ 1.10 ಲಕ್ಷ ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಿದ ಹಿನ್ನೆಲೆಯಲ್ಲಿ ಯುನೆಸ್ಕೋ ವಿಶ್ವ ಪರಂಪರೆಯ ತಾಣವಾದ ಹಂಪಿಯಲ್ಲಿರುವ ವಿವಿಧ ಸ್ಮಾರಕಗಳು ಜಲಾವೃತವಾಗಿವೆ.

ಜಲಾನಯನ ಪಾತ್ರದಲ್ಲಿ ನಿರಂತರ ಮಳೆಯಿಂದಾಗಿ ಜಲಾಶಯಕ್ಕೆ ನೀರಿನ ಒಳಹರಿವು ತೀವ್ರವಾಗಿ ಹೆಚ್ಚಿದೆ. ಜಲಾಶಯದ 33 ಕ್ರೆಸ್ಟ್ ಗೇಟ್‌ಗಳಿಂದ ನೀರು ಬಿಡಲಾಗಿದ್ದು, ಪುರಂದರ ದಾಸ ಮಂಟಪ, ಸಾಲು ಮಂಟಪ, ಧಾರ್ಮಿಕ ವಿಧಿ ವಿಧಾನ ಮಂಟಪಗಳು ಜಲಾವೃತಗೊಂಡಿವೆ.

ಮಂಡ್ಯ ಜಿಲ್ಲೆಯ ಕೃಷ್ಣರಾಜ ಸಾಗರ (ಕೆಆರ್‌ಎಸ್) ಅಣೆಕಟ್ಟಿನಿಂದ ಅಧಿಕಾರಿಗಳು 1 ಲಕ್ಷ ಕ್ಯೂಸೆಕ್ ನೀರು ಬಿಡುತ್ತಿದ್ದಾರೆ. ಶ್ರೀರಂಗಪಟ್ಟಣ ಪಟ್ಟಣದ 200 ವರ್ಷಗಳಷ್ಟು ಹಳೆಯದಾದ ವೆಲ್ಲೆಸ್ಲಿ ಸೇತುವೆಯ ಬಳಿ ಇರುವ ಆಂಜನೇಯ ದೇವಸ್ಥಾನ ಮತ್ತು ಈಶ್ವರ ದೇವಸ್ಥಾನ ನೀರಿನ ಮಟ್ಟ ಹೆಚ್ಚಾದರೆ ಮುಳುಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೇತುವೆ ಮೇಲೆ ಭಾರಿ ವಾಹನಗಳ ಓಡಾಟವನ್ನು ನಿಷೇಧಿಸಲಾಗಿದೆ.

Bengaluru Rain: ಬೆಂಗಳೂರಿನಲ್ಲಿ ಸುರಿದ ಮಳೆ ಸೃಷ್ಟಿಸಿದ ಅವಾಂತರಗಳುBengaluru Rain: ಬೆಂಗಳೂರಿನಲ್ಲಿ ಸುರಿದ ಮಳೆ ಸೃಷ್ಟಿಸಿದ ಅವಾಂತರಗಳು

ಮಡಿಕೇರಿ ಜಿಲ್ಲೆಯ ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಮಳೆ ಕಡಿಮೆಯಾಗಿದೆ. ಈ ಮಧ್ಯೆ, ಮೈಸೂರು ಜಿಲ್ಲೆಯ ಕಬಿನಿ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದುಬರುತ್ತಿದೆ.

ಬಿಜಾಪುರ ಜಿಲ್ಲೆಯ ಡೋಣಿ ನದಿ ಉಕ್ಕಿ ಹರಿಯುತ್ತಿರುವುದರಿಂದ ನೂರಾರು ಎಕರೆ ಕೃಷಿ ಭೂಮಿ ಜಲಾವೃತವಾಗಿದೆ. ಬಾಗಲಕೋಟೆ ಜಿಲ್ಲೆಯೂ ನಿರಂತರ ಮಳೆಯಿಂದ ತತ್ತರಿಸಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲೆಗಳಲ್ಲಿ ಭೂಕುಸಿತ, ಪ್ರವಾಹ ಭೀತಿ ಹೆಚ್ಚಿರುವುದರಿಂದ ಆತಂಕಕಾರಿ ಪರಿಸ್ಥಿತಿ ಮುಂದುವರಿದಿದೆ.

ವಾಣಿವಿಲಾಸ ಸಾಗರ ಡ್ಯಾಂ ಕೋಡಿ ಬಳಿ ಬೈಕ್‌ ಸವಾರರ ಹುಚ್ಚಾಟವಾಣಿವಿಲಾಸ ಸಾಗರ ಡ್ಯಾಂ ಕೋಡಿ ಬಳಿ ಬೈಕ್‌ ಸವಾರರ ಹುಚ್ಚಾಟ

 ಆಗಸ್ಟ್ 12ರವರೆಗೂ ಮಳೆ ಸಾಧ್ಯತೆ

ಆಗಸ್ಟ್ 12ರವರೆಗೂ ಮಳೆ ಸಾಧ್ಯತೆ

ರಾಜ್ಯದ ಕರಾವಳಿ ಭಾಗಗಳಲ್ಲಿ ಆಗಸ್ಟ್ 12ರವರೆಗೆ ವ್ಯಾಪಕ ಮಳೆಯಾಗುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಲೆನಾಡು ಭಾಗದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.


ಭಾರತೀಯ ಹವಾಮಾನ ಇಲಾಖೆ (ಐಎಂಡಿ) ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೀದರ್, ಕಲಬುರಗಿ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತದೆ ಎಂದು ಸೂಚನೆ ನೀಡಿದೆ. ಮಾತ್ರವಲ್ಲದೆ ಬಾಗಲಕೋಟೆ, ಬೆಳಗಾವಿ, ವಿಜಯಪುರ, ಯಾದಗಿರಿ, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಕೂಡ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.

 ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ

ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರೆದಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಮಂಗಳವಾರ ಕೂಡ ನಗರದ ಹಲವು ಭಾಗಗಳಲ್ಲಿ ಚದುರಿದ ಮಳೆಯಾಗಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನವು 26 ಮತ್ತು ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ಆಗಿರಬಹುದು.

ಆಗಸ್ಟ್ 1 ರಿಂದ 8 ವರೆಗೆ ರಾಜಧಾನಿ ಬೆಂಗಳೂರಿನಲ್ಲಿ ದಾಖಲೆ ಪ್ರಮಾಣದ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಸಾಮಾನ್ಯ ಮಳೆ ಪ್ರಮಾಣಕ್ಕಿಂತ ಶೇಕಡ 400 ರಷ್ಟು ಮಳೆಯಾಗಿದ್ದು ದಾಖಲೆ ನಿರ್ಮಿಸಿದೆ.

 ದೇಶದ ಹಲವು ಭಾಗಗಳಲ್ಲಿ ವ್ಯಾಪಕ ಮಳೆ ಸಾಧ್ಯತೆ

ದೇಶದ ಹಲವು ಭಾಗಗಳಲ್ಲಿ ವ್ಯಾಪಕ ಮಳೆ ಸಾಧ್ಯತೆ

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಕಡಿಮೆ ಒತ್ತಡದಿಂದಾಗಿ ಕೋಲ್ಕತ್ತಾ ಸೇರಿದಂತೆ ದಕ್ಷಿಣ ಪಶ್ಚಿಮ ಬಂಗಾಳದ ಜಿಲ್ಲೆಗಳಲ್ಲಿ ಈ ವಾರ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮೀನುಗಾರರು ಆಗಸ್ಟ್ 11 ರವರೆಗೆ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕರಾವಳಿ ಜಿಲ್ಲೆಗಳ ಆಡಳಿತಗಳಿಗೆ ಎಚ್ಚರಿಕೆ ನೀಡಿದೆ.

ಉತ್ತರ ಕೊಂಕಣ, ಉತ್ತರ ಮಧ್ಯ ಮಹಾರಾಷ್ಟ್ರ, ಪೂರ್ವ ಮತ್ತು ಪಶ್ಚಿಮ ವಿದರ್ಭಕ್ಕೆ ಅತಿ ಹೆಚ್ಚು ಮಳೆಯಾಗುತ್ತದೆ. ಆಗಸ್ಟ್ 12 ರ ನಂತರ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ. ಮರಾಠವಾಡ, ದಕ್ಷಿಣ ಮಧ್ಯ ಮಹಾರಾಷ್ಟ್ರ ಮತ್ತು ದಕ್ಷಿಣ ಕೊಂಕಣ ಪ್ರದೇಶದಲ್ಲೂ ಭಾರಿ ಮಳೆಯಾಗುತ್ತಿದ್ದು, ಬುಧವಾರವೂ ಮುಂದುವರೆಯುವ ಸಾಧ್ಯತೆ ಇದೆ. ಮಂಗಳವಾರ ಮುಂಬೈನಲ್ಲಿ ಭಾರಿ ಗಾಳಿಯೊಂದಿಗೆ ವ್ಯಾಪಕ ಮಳೆಯಾಗಿದೆ.

 ಎಡಮಲಯಾರ್ ಅಣೆಕಟ್ಟು ಭರ್ತಿ

ಎಡಮಲಯಾರ್ ಅಣೆಕಟ್ಟು ಭರ್ತಿ

ಕೇರಳದಲ್ಲಿ ಎಡಮಲಯಾರ್ ಅಣೆಕಟ್ಟಿನ ನಾಲ್ಕು ಶಟರ್‌ಗಳನ್ನು ತೆರೆಯಲಾಗಿದ್ದು, ಕಳೆದ ವರ್ಷಕ್ಕಿಂತ ನೀರಿನ ಮಟ್ಟ ಶೇಕಡ 20 ಹೆಚ್ಚಾಗಿದೆ ಎಂದು ಎಎನ್‌ಐ ವರದಿ ಮಾಡಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ನೀರು ಬಿಡುವ ನಿರೀಕ್ಷೆ ಇದೆ, ಆದರೆ ಜನ ಆತಂಕ ಪಡುವ ಅಗತ್ಯವಿಲ್ಲ ಎಂದು ಎರ್ನಾಕುಲಂ ಜಿಲ್ಲಾಧಿಕಾರಿ ಡಾ.ರೇಣು ರಾಜ್ ಹೇಳಿದ್ದಾರೆ.

ಧಾರಾಕಾರ ಮಳೆಯಿಂದಾಗಿ ಒಡಿಶಾದ ಹಲವು ಜಿಲ್ಲೆಗಳಲ್ಲಿ ಮಂಗಳವಾರ ನದಿಗಳು ಉಕ್ಕಿ ಹರಿಯುತ್ತಿರುವುದರಿಂದ ಹಳ್ಳಿಗಳು, ಕೃಷಿ ಕ್ಷೇತ್ರಗಳು ಮತ್ತು ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ.

Recommended Video

Modi Declared Total Income and Assets: ಕಳೆದ ವರ್ಷಕ್ಕಿಂತ 84 ಲಕ್ಷ ಆಸ್ತಿ ಕಳೆದುಕೊಂಡ ಮೋದಿ *India |OneIndia

English summary
The water inflow to the Tungabhadra dam has been drastically increased due to incessant rain in the region. Purandara Dasa Mantap, Saalu Mantap and Dahrmika Vidhi Vidhana Mantapa have been inundated at the Unesco World Heritage Site of Hampi have come under water following the release of 1.10 lakh cusecs of water from the dam.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X