ಒಬ್ಬರಲ್ಲ, ಇಬ್ಬರಲ್ಲ, ಬಿಜೆಪಿಯಿಂದ ಅನೇಕರು ಕಾಂಗ್ರೆಸ್‌ಗೆ ಬರ್ತಾರೆ: ಹೊಸ ಬಾಂಬ್ ಸಿಡಿಸಿದ ಸವದಿ
ಹುಬ್ಬಳ್ಳಿ, ನವೆಂಬರ್ 07: ಒಬ್ಬರಲ್ಲ, ಇಬ್ಬರಲ್ಲ, ಬಿಜೆಪಿಯಿಂದ ಕಾಂಗ್ರೆಸ್ ಗೆ ಬಹಳ ಜನ ಬರುತ್ತಾರೆ. ಕರ್ನಾಟಕದಲ್ಲಿ ಬಿಜೆಪಿ ನಶಿಸಿ ಹೋಗಲಿದೆ ಎಂದು ಶಾಸಕ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಹೇಳಿದರು.
ಹುಬ್ಬಳ್ಳಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಲಕ್ಷ್ಮಣ್ ಸವದಿ ಅವರು, ಬಿಜೆಪಿಯಿಂದ ಬಹಳ ಜನ ಬರ್ತಾರೆ. ಆದರೆ, ಅವರಿಗೆ ಜಾಗ ಕಲ್ಪಿಸೋದು ಕಷ್ಟವಾಗತಿದ್ದು, ಯಾವ ಯಾವ ಕ್ಷೇತ್ರ ನೋಡಿಕೊಂಡು ನಾವು ಬಿಜೆಪಿಯರವರನ್ನು ಕರೆದುಕೊಳ್ಳಬೇಕೆಂದ ಅವರು ಬಿಜೆಪಿಯೊಂದು ಆರು ಬಾಗಿಲಾಗಿದೆ ಎಂದು ಹೇಳಿದರು.

ಮನೆಯೊಂದು ಮೂರು ಬಾಗಿಲಲ್ಲ,ಆರು ಬಾಗಿಲಾಗಿದೆ. ಬಿಜೆಪಿಯಲ್ಲಿ ಹೇಳೋರಿಲ್ಲ ಕೇಳೊರಿಲ್ಲ, ಅವರು ಕಾಂಗ್ರೆಸ್ ಸರ್ಕಾರ ರಚನೆಯಾದ ದಿನದಿಂದ ಸರ್ಕಾರ ಬೀಳತ್ತೆ ಅಂತಾ ಹೇಳುತ್ತಿದಾರೆ. ಆದರೆ, ಇನ್ನು ಮೂರು ವರ್ಷ ಅದನ್ನೆ ಹೇಳ್ತಾರೆ. ನಂತರ ಐದು ವರ್ಷ ಅದನ್ನೆ ಹೇಳ್ತಾರೆ. ಪರೋಕ್ಷವಾಗಿ ಮುಂದಿನ ಬಾರಿಯೂ ನಮ್ಮದೇ ಸರ್ಕಾರ ಎಂದು ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಅವರು ಹೇಳಿದರು.
ಯಾವುದೇ ರೈತರನ್ನು ಒಕ್ಕಲೆಬ್ಬಿಸುವುದಿಲ್ಲ: ಡಿ ಕೆ.ಶಿವಕುಮಾರ್
ವಕ್ಫ್ ವಿವಾದ ಬಿಜೆಪಿ ಸೃಷ್ಟಿ. ನಮ್ಮ ಸರ್ಕಾರ ರೈತರನ್ನು ರಕ್ಷಿಸಲು ಬದ್ಧವಾಗಿದ್ದು, ಯಾರನ್ನೂಒಕ್ಕಲೆಬ್ಬಿಸುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ಈ ವಿವಾದ ಸೃಷ್ಟಿಸಿದೆ. ರಾಜ್ಯದ ಆಸ್ತಿ ರಾಜ್ಯಕ್ಕೆ ಸಂಬಂಧಿಸಿದ ವಿಚಾರ. ವಕ್ಫ್ ಆಸ್ತಿ ವಿಚಾರವಾಗಿ ಧಾರವಾಡ ಸೇರಿದಂತೆ ಬೇರೆ ಜಿಲ್ಲೆಗಳಲ್ಲಿ 2019ರಿಂದ ಮೊದಲು ನೋಟೀಸ್ ಕೊಟ್ಟಿದ್ದು ಬಿಜೆಪಿ. ಈಗ ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ.
ನಾವು ಆಗಿರುವ ತಪ್ಪುಗಳನ್ನು ಸರಿಪಡಿಸಿ ರೈತರನ್ನು ರಕ್ಷಣೆ ಮಾಡುತ್ತೇವೆ. ಈ ವಿಚಾರವಾಗಿ ನಮ್ಮ ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರು ಸ್ಪಷ್ಟನೆ ನೀಡಿದ್ದಾರೆ. ಜೆಪಿಸಿ ರಾಜ್ಯದ ವಿಚಾರಕ್ಕೆ ಭೇಟಿ ನೀಡುವ ಅಧಿಕಾರವಿಲ್ಲ. ಕೇವಲ ರಾಜಕೀಯ ಉದ್ದೇಶದಿಂದ ಭೇಟಿ ನೀಡುತ್ತಿದ್ದಾರೆ. ಈ ಸಮಿತಿಗೆ ಅಧಿಕೃತ ಮಾನ್ಯತೆ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.
ಮಹಾರಾಷ್ಟ್ರ ಹಾಗೂ ರಾಜ್ಯದ ಉಪಚುನಾವಣೆ ಸಮಯದಲ್ಲಿ ಅನಗತ್ಯ ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ. ಜನ ಬಹಳ ಬುದ್ಧಿವಂತರು ಅವರಿಗೆ ಜನ ತಕ್ಕ ರೀತಿ ಪಾಠ ಕಲಿಸಲಿದ್ದಾರೆ. ನಾವು ದಾಖಲೆಗಳಲ್ಲಿ ಆಗಿರುವ ತಪ್ಪುಗಳನ್ನು ಸರಿಪಡಿಸಿ ರೈತರನ್ನು ರಕ್ಷಣೆ ಮಾಡುತ್ತೇವೆ. ಈ ವಿಚಾರವಾಗಿ ನಮ್ಮ ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರು ಸ್ಪಷ್ಟನೆ ನೀಡಿದ್ದಾರೆ ಎಂದರು.
ಜೆಪಿಸಿ ರಾಜ್ಯದ ವಿಚಾರಕ್ಕೆ ಭೇಟಿ ನೀಡುವ ಅಧಿಕಾರವಿಲ್ಲ. ಜೆಸಿಪಿ ರಾಜ್ಯಕ್ಕೆ ಭೇಟಿ ನೀಡುವುದಾದರೆ ಸರ್ಕಾರ ಹಾಗೂ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. ಇಡೀ ಸಮಿತಿ ತಂಡ ಭೇಟಿ ನೀಡಬೇಕು. ಕೇವಲ ಸಮಿತಿ ಅಧ್ಯಕ್ಷರು ಬಂದಿದ್ದಾರೆ ಎಂದರೆ ಅವರು ಪಕ್ಷದ ಕೆಲಸಕ್ಕಾಗಿ ಬಂದಿದ್ದಾರೆ. ಅವರು ಸಂಸದರಾದ ಬೊಮ್ಮಾಯಿ ಹಾಗೂ ಸಚಿವ ಸೋಮಣ್ಣ ಅವರ ಜತೆ ಬಂದಿದ್ದಾರೆ. ಇವರಿಬ್ಬರು ಜೆಪಿಸಿ ಸದಸ್ಯರೇ? ಭೇಟಿ ನೀಡಿರುವವರು ಕೇವಲ ಬಿಜೆಪಿ ಸದಸ್ಯರು ಮಾತ್ರ, ರಾಜಕೀಯ ಉದ್ದೇಶದಿಂದ ಭೇಟಿ ನೀಡುತ್ತಿದ್ದಾರೆ. ಈ ಸಮಿತಿಗೆ ಅಧಿಕೃತ ಮಾನ್ಯತೆ ಇಲ್ಲ. ಅವರು ಏನಾದರೂ ರಾಜಕೀಯ ಮಾಡಲಿ. ಸತ್ಯಾಂಶವೇ ಬೇರೆ ಎಂದು ತಿಳಿಸಿದರು.












Click it and Unblock the Notifications