ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಹಲವು ಯೋಜನೆಗಳ ಅನುಷ್ಠಾನ: ಮಹತ್ವದ ಮಾಹಿತಿ ಇಲ್ಲಿದೆ
ಬೆಂಗಳೂರು, ಮಾರ್ಚ್ 13: ಮಹಿಳಾ ಸಬಲೀಕರಣಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂ ಸ್ತ್ರೀ ಶಕ್ತಿ, ಭಾಗ್ಯಲಕ್ಷ್ಮಿ, ಗೃಹಲಕ್ಷ್ಮಿ,ಮಹಿಳಾ ಸಹಾಯವಾಣಿ ಸೇರಿದಂತೆ ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಸದನದಲ್ಲಿ ಹೇಳಿದರು. ವಿಧಾನಸಭೆಯ ಕಲಾಪದಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಶಿವಮೊಗ್ಗ ವಿಧಾನಸಭಾ ಸದಸ್ಯ ಚನ್ನಬಸಪ್ಪ ಪ್ರಶ್ನೆಗೆ ಸಂತೋಷ್ ಲಾಡ್ ಉತ್ತರಿಸಿದ್ದು, ಮಹಿಳೆಯರ ಸಬಲೀಕರಣಕ್ಕೆ ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಹೇಳಿದರು.
ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಉದ್ಯೋಗಿನಿ ಯೋಜನೆ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ, ಚೇತನ ಯೋಜನೆ, ಧನಶ್ರೀ, ಮಾಜಿ ದೇವದಾಸಿ ಮಹಿಳೆ ಪುನರ್ವಸತಿ ಯೋಜನೆ, ಮಾಜಿ ದೇವದಾಸಿಯರಿಗೆ ವಸತಿ ನಿರ್ಮಾಣ ಯೋಜನೆ, ಬಡ್ಡಿ ಸಹಾಯಧನ ಯೋಜನೆ, ಮಹಿಳಾ ತರಬೇತಿ ಯೋಜನೆ, ವೃದ್ಧಿ ಯೋಜನೆ, ಕಿರುಸಾಲ ಯೋಜನೆ, ಮಹಿಳೆಯರಿಗೆ ಬಡ್ಡಿ ಸಹಾಯಧನ ಯೋಜನೆ, ಆ್ಯಸಿಡ್ ದಾಳಿ ಸಂತ್ರಸ್ತ ಮಹಿಳೆಯರಿಗೆ ಸಾಲ ಸೌಲಭ್ಯಗಳ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ.

ಮಕ್ಕಳ ಹಕ್ಕು ರಕ್ಷಣೆ ಮಾಡುವಲ್ಲಿ ಪ್ರಸ್ತುತ ರಾಜ್ಯದಲ್ಲಿ 32 ಸರ್ಕಾರಿ ಬಾಲಕರ ಬಾಲಮಂದಿರ, 30ಸರ್ಕಾರಿ ಬಾಲಕಿಯರ ಬಾಲಮಂದಿರ, 0-6 ವರ್ಷದೊಳಗಿನ ಮಕ್ಕಳಿಗೆ 1 ಶಿಶುಮಂದಿರ, 04 ಬುದ್ದಿಮಾಂದ್ಯ ಮಕ್ಕಳ ಬಾಲಮಂದಿರ ಹಾಗೂ ಬಾಲಕರಿಗಾಗಿ 16 ವೀಕ್ಷಣಾಲಯ ಮತ್ತು ಬಾಲಕಿಯರಿಗಾಗಿ 01 ವೀಕ್ಷಣಾಲಯ 21 ಸರ್ಕಾರಿ ವಿಶೇಷ ದತ್ತು ಸಂಸ್ಥೆಗಳು, 23 ಸರ್ಕಾರೇತರ ವಿಶೇಷ ದತ್ತು ಸಂಸ್ಥೆಗಳು, 29 ತೆರೆದ ತಂಗುದಾಣಗಳು, 32 ನಿರ್ಗತಿಕ ಮಕ್ಕಳ ಕುಟೀರ, 05 ಅರ್ಹ ಸಂಸ್ಥೆ ಮತ್ತು 07 ಅನುಪಾಲನಾ ಗೃಹಗಳು ಕಾರ್ಯನಿರ್ವಹಿಸುತ್ತಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರ ಪರವಾಗಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದರು.
ಬ್ಯಾಕ್ ಲಾಗ್ ಹುದ್ದೆಗಳ ಭರ್ತಿ ಕುರಿತು ಚರ್ಚೆ
ಬ್ಯಾಕ್ ಲಾಗ್ ಹುದ್ದೆಗಳ ಭರ್ತಿ ಕುರಿತು ಸಚಿವ ಸಂಪುಟ ಉಪ ಸಮಿತಿ ಸಭೆಯಲ್ಲಿ ಬ್ಯಾಕ್ ಲಾಗ್ ಹುದ್ದೆಗಳನ್ನು ಬಹಳಷ್ಟು ವರ್ಷಗಳ ಹಿಂದೆಯೇ ಗುರುತಿಸಿದೆ. ಸದರಿ ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡಲು ವಿನಾಯಿತಿ ನೀಡುವ ಬಗ್ಗೆ ಸಚಿವ ಸಂಪುಟದ ಮುಂದೆ ಮಂಡಿಸಿ ಮುಂದಿನ ಕ್ರಮ ವಹಿಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪ ಅವರು ತಿಳಿಸಿದರು.
ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಅಬ್ಬಯ್ಯ ಪ್ರಸಾದ್ ಇವರ ಪ್ರಶ್ನೆಗೆ ಉತ್ತರಿಸಿದ ಸಚಿವರು ಸರ್ಕಾರದ ವಿವಿಧ ಇಲಾಖೆ, ನಿಗಮ, ಮಂಡಳಿಗಳು, ವಿಶ್ವವಿದ್ಯಾಲಯಗಳು, ಸಹಕಾರಿ ಸಂಸ್ಥೆಗಳು ಮತ್ತು ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ 2001 ಹಾಗೂ 2001ರ ನಂತರದಲ್ಲಿ ಪರಿಶಿಷ್ಟ ಜಾತಿಯ 16,413 ಮತ್ತು ಪರಿಶಿಷ್ಟ ಪಂಗಡದ 4,963 ಸೇರಿದಂತೆ ಒಟ್ಟು 21,376 ಹುದ್ದೆಗಳನ್ನು ಗುರುತಿಸಲಾಗಿದೆ. ಗುರುತಿಸಿರುವ ಹುದ್ದೆಗಳ ಪೈಕಿ ಇದೂವರೆವಿಗೂ ಪರಿಶಿಷ್ಟ ಜಾತಿ-15,286 ಮತ್ತು ಪರಿಶಿಷ್ಟ ಪಂಗಡ 4,379 ಸೇರಿದಂತೆ ಒಟ್ಟು 19,665 ಹುದ್ದೆಗಳನ್ನು ಭರ್ತಿ ಮಾಡಲಾಗಿದೆ.
ಕೆಲವು ಇಲಾಖೆ/ಸಂಸ್ಥೆಗಳು ಆರ್ಥಿಕ ಮುಗ್ಗಟ್ಟಿನಿಂದ ಮತ್ತು ಮುಚ್ಚಿರುವ ಕಾರಣ ಒಟ್ಟು 795 ಹುದ್ದೆಗಳನ್ನು ಭರ್ತಿ ಮಾಡಲು ವಿನಾಯಿತಿ ಕೋರಿರುತ್ತಾರೆ. ಉಳಿದ 916 ಹುದ್ದೆಗಳನ್ನು ಭರ್ತಿ ಮಾಡಲು ಬಾಕಿ ಇರುತ್ತವೆ. 916 ಹುದ್ದೆಗಳ ಪೈಕಿ ಉನ್ನತ ಶಿಕ್ಷಣ ಇಲಾಖೆಯಲ್ಲಿ 530, ಶಾಲಾಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (ಪ್ರಾಥಮಿಕ ಶಿಕ್ಷಣ) ಯಲ್ಲಿ 185 ಮತ್ತು ಜಲಸಂಪನ್ಮೂಲ ಇಲಾಖೆಯಲ್ಲಿ 112 ಹುದ್ದೆಗಳು ಸೇರಿ ಒಟ್ಟು 827 ಹುದ್ದೆಗಳಿರುತ್ತವೆ. ಉಳಿದ ಇಲಾಖೆಗಳಲ್ಲಿ 89 ಹುದ್ದೆಗಳಿರುತ್ತವೆ ಎಂದು ಸದನದಲ್ಲಿ ತಿಳಿಸಿದರು.
ಪರಿಶಿಷ್ಟ ಜಾತಿ ಒಳಮೀಸಲಾತಿ ಸಂಬಂಧ ದಿನಾಂಕ: 28-10-2024ರಂದು ನಡೆದ ಸಚಿವ ಸಂಪುಟ ಸಭೆಯ ನಿರ್ಣಯದಂತೆ ರಾಜ್ಯ ಸಿವಿಲ್ ಸೇವೆಗಳಲ್ಲಿನ ಮೀಸಲಾತಿ ಅನ್ವಯವಾಗುವ ವೃಂದಗಳಲ್ಲಿನ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಹೊಸದಾಗಿ ಯಾವುದೇ ಅಧಿಸೂಚನೆಯನ್ನು ಮುಂದಿನ ತೀರ್ಮಾನದವರೆಗೂ ಹೊರಡಿಸಬಾರದೆಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯಿಂದ ಸುತ್ತೋಲೆ ಸಂಖ್ಯೆ : ಸಿಆಸುಇ 388 ಸೇನೆನಿ 2024, ದಿನಾಂಕ: 25-11-2024ರಂದು ಹೊರಡಿಸಲಾಗಿದೆ.
ಅಬ್ಬಯ್ಯ ಪ್ರಸಾದ್ ರವರು ಸದನದಲ್ಲಿ ಇಲಾಖೆಗಳಲ್ಲಿ ರೋಸ್ಟರ್ ವಹಿಗಳನ್ನು ನಿರ್ವಹಿಸುತ್ತಿಲ್ಲ, ಈ ಕುರಿತು ಇಲಾಖೆಗಳಿಗೆ ನಿರ್ದೇಶನ ಹೋಗಬೇಕು, ರೋಸ್ಟರ್ ವಹಿ ನಿರ್ವಹಿಸದ ಇಲಾಖೆಗಳ ವಿರುದ್ದ ಕ್ರಮ ಅಗತ್ಯವೆಂದು ತಿಳಿಸಿದರು. ಈ ಕುರಿತು ಈಗಾಗಲೇ ಮುಖ್ಯಮಂತ್ರಿಗಳು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಎಲ್ಲಾ ಇಲಾಖೆಗಳ ಮುಖ್ಯಸ್ಥರಿಗೆ ನಿರ್ದೇಶನ ನೀಡಲು ಸೂಚನೆ ನೀಡಿದ್ದಾರೆ. ಅಲ್ಲದೇ 5 ತಂಡಗಳಲ್ಲಿ ತಂಡಗಳನ್ನು ರಚಿಸಿ ಇಲಾಖೆಗಳಿಂದ ಮಾಹಿತಿ ಪಡೆಯಲು ಕ್ರಮ ವಹಿಸಲಾಗಿದೆ ಎಂದು ತಿಳಿಸಿದರು.
-
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ












Click it and Unblock the Notifications