Toilets in Karnataka: ರಾಜ್ಯದಲ್ಲಿ ಹಲವು ಸಾರ್ವಜನಿಕ ಶೌಚಾಲಯಗಳು ಬಳಕೆಗೆ ಯೋಗ್ಯವಾಗಿಲ್ಲ!

'ನೀರಿನ ಕೊರತೆಯಿಂದ ಈಗಾಗಲೇ ಶೇ.90ಕ್ಕೂ ಹೆಚ್ಚು ಶೌಚಾಲಯಗಳಿಗೆ ಬೀಗ ಹಾಕಲಾಗಿದೆ. ಹೊಸ ಸಾರ್ವಜನಿಕ ಶೌಚಾಲಯಗಳನ್ನು ನಿರ್ಮಿಸುವುದನ್ನು ನಿಲ್ಲಿಸಿ'

ಬೆಂಗಳೂರು, ಫೆಬ್ರವರಿ. 21: ನಿರ್ವಹಣೆ ಕೊರತೆಯಿಂದ ರಾಜ್ಯದಲ್ಲಿ ಹಲವು ಸಾರ್ವಜನಿಕ ಶೌಚಾಲಯಗಳು ಬಳಕೆಗೆ ಯೋಗ್ಯವಾಗಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒಪ್ಪಿಕೊಂಡಿದ್ದಾರೆ.

ವಿಧಾನಮಂಡಲದಲ್ಲಿ ರಾಜ್ಯಪಾಲರ ಭಾಷಣಕ್ಕೆ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಉತ್ತರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಎಲ್ಲಾ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ಶೌಚಾಲಯ ನಿರ್ಮಾಣಕ್ಕೆ 250 ಕೋಟಿ ರೂಪಾಯಿಗಳನ್ನು ಮಂಜೂರು ಮಾಡಿದ್ದು, 2023ರ ಆಗಸ್ಟ್ 15ಕ್ಕೆ ಪೂರ್ಣಗೊಳಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಬಸವರಾಜ ಬೊಮ್ಮಾಯಿ ಮಾತಿಗೆ ಪ್ರತಿಕ್ರಿಯಿ ನೀಡಿದ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಸರ್ಕಾರ ನಾನಾ ಯೋಜನೆಗಳಡಿ ಶೌಚಾಲಯ ನಿರ್ಮಿಸಿಕೊಡುತ್ತಿದ್ದರೂ ನಿರ್ವಹಣೆಯ ನೈಜ ಸಮಸ್ಯೆ ಬಗೆಹರಿಯುತ್ತಿಲ್ಲ. ಯಾವುದೇ ಪಂಚಾಯಿತಿ ಅಥವಾ ಏಜೆನ್ಸಿಗೆ ಜವಾಬ್ದಾರಿ ವಹಿಸಿದರೆ ಮಾತ್ರ ನಿರ್ವಹಣೆ ಸಾಧ್ಯ, ತಪ್ಪಿದಲ್ಲಿ ಶೌಚಾಲಯ ನಿರ್ಮಾಣ ಮಾಡಿದರೇ ಮಾತ್ರ ಅದರ ಉದ್ದೇಶ ಈಡೇರುವುದಿಲ್ಲ ಎಂದಿದ್ದಾರೆ.

Many Toilets In State Not In Usable Condition Due to Lack of Maintenance

ಈ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡಿರುವ ಮಾಜಿ ಮುಖ್ಯಮಂತ್ರಿ, ಬಿಜೆಪಿ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ, ನೀರಿನ ಅಸಮರ್ಪಕ ಲಭ್ಯತೆ, ಶೌಚಾಲಯಗಳ ನಿರ್ವಹಣೆಯಲ್ಲಿ ಪ್ರಮುಖ ಸಮಸ್ಯೆಯಾಗಿದೆ ಎಂದು ಹೇಳಿದ್ದಾರೆ.

"ಸಾರ್ವಜನಿಕ ಶೌಚಾಲಯಗಳನ್ನು ನಿರ್ವಹಿಸಲು ಸಾಧ್ಯವಿಲ್ಲ. ನೀರಿನ ಕೊರತೆಯ ಸಮಸ್ಯೆಯನ್ನು ಪರಿಹರಿಸಲು ಸಾಧ್ಯವಿಲ್ಲ. ಈಗಾಗಲೇ ಶೇ.90ಕ್ಕೂ ಹೆಚ್ಚು ಶೌಚಾಲಯಗಳಿಗೆ ಬೀಗ ಹಾಕಲಾಗಿದೆ. ಹೊಸ ಸಾರ್ವಜನಿಕ ಶೌಚಾಲಯಗಳನ್ನು ನಿರ್ಮಿಸುವುದನ್ನು ನಿಲ್ಲಿಸಿ" ಎಂದು ಬಿ.ಎಸ್.ಯಡಿಯೂರಪ್ಪ, ಸಿಎಂ ಬಸವರಾಜ ಬೊಮ್ಮಾಯಿಗೆ ಒತ್ತಾಯಿಸಿದ್ದಾರೆ.

ಆರಂಭದಲ್ಲಿ ಸರ್ಕಾರವು ಸುಲಭ ಶೌಚಾಲಯ ಯೋಜನೆ ಮೂಲಕ ಸಮಸ್ಯೆಯನ್ನು ಪರಿಹರಿಸಲು ಸದುದ್ದೇಶದಿಂದ ಪ್ರಯತ್ನಿಸಿದರೂ ಅದು ಫಲ ನೀಡಲಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

Many Toilets In State Not In Usable Condition Due to Lack of Maintenance

"ಶೌಚಾಲಯಗಳ ನಿರ್ವಹಣೆಯಲ್ಲಿ ನಾವು ಸಾರ್ವಜನಿಕರನ್ನು ಪಾಲುದಾರರಾಗಿ ತೊಡಗಿಸಿಕೊಳ್ಳಬೇಕು. ಹೀಗಾಗಿ, ಈ ವರ್ಷದ ಬಜೆಟ್‌ನಲ್ಲಿ ನಿರ್ವಹಣಾ ವೆಚ್ಚವನ್ನು ದ್ವಿಗುಣಗೊಳಿಸಲು ನಿರ್ಧರಿಸಿದ್ದೇವೆ. ಪ್ರತಿ ಶೌಚಾಲಯದ ನಿರ್ವಹಣೆಗೆ ಪ್ರತಿ ತಿಂಗಳು ನಿರ್ದಿಷ್ಟ ಮೊತ್ತವನ್ನು ಪಾವತಿಸುತ್ತೇವೆ. ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿಗಳಿಗೆ (ಎಸ್‌ಡಿಎಂಸಿ) ಶೌಚಾಲಯಗಳ ನಿರ್ವಹಣೆ ಜವಾಬ್ದಾರಿಯನ್ನು ನೀಡಲಾಗುವುದು" ಎಂದಿದ್ದಾರೆ.

ಇನ್ನು, ಇತ್ತೀಚಿನ ಬಜೆಟ್ ಮಂಡನೆ ವೇಳೆ, ಬೆಂಗಳೂರಿನ ನಗರದ ಬೃಹತ್ ವಾಣಿಜ್ಯ ಮಳಿಗೆಗಳು, ಮಾರುಕಟ್ಟೆಗಳು ಸೇರಿದಂತೆ ಜನನಿಬಿಡ ಪ್ರದೇಶಗಳಲ್ಲಿ ಮಹಿಳೆಯರ ಅನುಕೂಲಕ್ಕಾಗಿ 250 ಸುಸಜ್ಜಿತ 'She Toilet' ಗಳನ್ನು ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

ನರೇಗಾ ಸಂಯೋಜನೆಯೊಂದಿಗೆ 250 ಕೋಟಿ ರೂಪಾಯಿ ಅಂದಾಜು ವೆಚ್ಚದಲ್ಲಿ 7,750 ಶೌಚಾಲಯಗಳನ್ನು ನಿರ್ಮಿಸುವ ಮೂಲಕ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಶೌಚಾಲಯದ ಸಂಪೂರ್ಣ ಬೇಡಿಕೆಯನ್ನು ಪೂರೈಸಲು ಕ್ರಮ ಕೈಗೊಳ್ಳಲಾಗಿದೆ. ಈ ಯೋಜನೆಯಡಿ ಮಾರ್ಚ್ 2023ರ ಅಂತ್ಯದಲ್ಲಿ 2,169 ಶೌಚಾಲಯಗಳು ಪೂರ್ಣಗೊಳ್ಳಲಿವೆ. ಉಳಿದ 5,581 ಶೌಚಾಲಯಗಳನ್ನು 2023-24ನೇ ಸಾಲಿನಲ್ಲಿ ನಿರ್ಮಿಸಲಾಗುವುದು. ಇದಕ್ಕೆ ಒಟ್ಟು 80 ಕೋಟಿ ರೂ. ಹಂಚಿಕೆ ಮಾಡಿದ್ದು, ಅದರಲ್ಲಿ 50 ಕೋಟಿ ರೂ. ಗಳನ್ನು ಅಭಿವೃದ್ಧಿ ಆಕಾಂಕ್ಷಿ ತಾಲ್ಲೂಕುಗಳಿಗೆ ಒದಗಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+