ಮತ್ತೆ ಪತ್ರಿಕೆ ಸೋರಿಕೆ : ರಸಾಯನಶಾಸ್ತ್ರ ಮರು ಪರೀಕ್ಷೆ ರದ್ದು
ಬೆಂಗಳೂರು, ಮಾರ್ಚ್ 31 : ಗುರುವಾರ ಮಾರ್ಚ್ 31ರಂದು ನಡೆಯಬೇಕಿದ್ದ ದ್ವಿತೀಯ ಪಿಯುಸಿ ರಸಾಯನಶಾಸ್ತ್ರ ಮರು ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ಮಾರ್ಚ್ 21ರಂದು ನಡೆದ ಪರೀಕ್ಷೆಯನ್ನು ಪ್ರಶ್ನೆ ಪತ್ರಿಕೆ ಸೋರಿಕೆಯಾದ ಕಾರಣ ರದ್ದುಗೊಳಿಸಿ, ಇಂದು ಮರು ಪರೀಕ್ಷೆ ನಡೆಸಲು ಆದೇಶ ನೀಡಲಾಗಿತ್ತು. [ರಸಾಯನಶಾಸ್ತ್ರ ಪಶ್ನೆ ಪತ್ರಿಕೆ ಸೋರಿಕೆ, ಇಬ್ಬರು ಸಿಐಡಿ ವಶಕ್ಕೆ]
ಗುರುವಾರ ಬೆಳಗ್ಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಪಲ್ಲವಿ ಅಕುರಾತಿ ಅವರು, 'ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ಇಂದು ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಹಾಜರಾಗಬಾರದು. ಮುಂದಿನ ಪರೀಕ್ಷಾ ದಿನಾಂಕವನ್ನು ಘೋಷಣೆ ಮಾಡಲಾಗುತ್ತದೆ' ಎಂದು ಮಾಧ್ಯಮಗಳಿಗೆ ತಿಳಿಸಿದರು. [ಪ್ರಶ್ನೆಪತ್ರಿಕೆ ಸೋರಿಕೆಯಾದರೆ ಹೇಗೆ ದೂರು ನೀಡಬೇಕು?]

ಗುರುವಾರ ಮುಂಜಾನೆ ತುಮಕೂರು ಮತ್ತು ಬೆಂಗಳೂರಿನಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ. ಮುಂಜಾನೆ 3.30ರ ಸುಮಾರಿಗೆ ಪೊಲೀಸರಿಗೆ ಈ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಅವರು ಪದವಿ ಪೂರ್ವ ಶಿಕ್ಷಣ ಇಲಾಖೆಗೆ ಮಾಹಿತಿ ರವಾನಿಸಿದ್ದಾರೆ. ಪಶ್ನೆ ಪತ್ರಿಕೆ ವಾಟ್ಸಪ್ ಮೂಲಕ ಹರಿದಾಡುತ್ತಿದೆ. ಆದ್ದರಿಂದ, ಇಂದು ನಡೆಯಬೇಕಿದ್ದ ಪರೀಕ್ಷೆಯನ್ನು ರದ್ದುಪಡಿಸಲಾಗಿದೆ.[ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ ಸಿಐಡಿ ತನಿಖೆ]
ಮತ್ತೆ ಪ್ರಶ್ನೆ ಪತ್ರಿಕೆ ಸೋರಿಕೆ : ಮಾರ್ಚ್ 21ರ ಸೋಮವಾರ 2.19 ಲಕ್ಷ ವಿದ್ಯಾರ್ಥಿಗಳು ರಸಾಯನ ಶಾಸ್ತ್ರ ಪರೀಕ್ಷೆ ಬರೆದಿದ್ದರು. ಬಳ್ಳಾರಿ, ಮಾಲೂರು ಸೇರಿದಂತೆ ರಾಜ್ಯದ 4 ಕಡೆ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಕಾರಣ ಅಂದು ಬೆಳಗ್ಗೆ ನಡೆದ ಪರೀಕ್ಷೆಯನ್ನು ಸಂಜೆ ರದ್ದುಗೊಳಿಸಲಾಗಿತ್ತು.
ನಂತರ ಪದವಿ ಪೂರ್ವ ಶಿಕ್ಷಣ ಇಲಾಖೆ ಮಾರ್ಚ್ 29ರ ಮಂಗಳವಾರ ರಸಾಯನಶಾಸ್ತ್ರ ಮರು ಪರೀಕ್ಷೆ ನಡೆಸಲಾಗುತ್ತದೆ ಎಂದು ಹೇಳಿತ್ತು. ಆದರೆ, ವಿದ್ಯಾರ್ಥಿಗಳ ಒತ್ತಾಯಕ್ಕೆ ಮಣಿದು ಮರು ಪರೀಕ್ಷೆ ದಿನಾಂಕ ಬದಲಾವಣೆ ಮಾಡಲಾಗಿತ್ತು. ಮಾರ್ಚ್ 31ರಂದು ಪರೀಕ್ಷಾ ದಿನಾಂಕ ನಿಗದಿ ಮಾಡಲಾಗಿತ್ತು.
ಈ ಪ್ರಶ್ನೆ ಪತ್ರಿಕೆ ಸೋರಿಕೆ ಕುರಿತು ಸಿಐಡಿ ತನಿಖೆ ನಡೆಸುತ್ತಿದೆ. ಹಿಂದೆ ಪಶ್ನೆ ಪತ್ರಿಕೆ ಸೋರಿಕೆಯಾದ ಕಾರಣ ಇಂದು ನಡೆಯಬೇಕಿದ್ದ ಮರು ಪರೀಕ್ಷೆಗೆ ಭಾರೀ ಭದ್ರತೆ ಒದಗಿಸಲಾಗಿತ್ತು. ಆದರೂ ಸಹ ಪತ್ರಿಕೆ ಸೋರಿಕೆಯಾಗಿದೆ. ಅಂದಹಾಗೆ 1.75 ಲಕ್ಷ ವಿದ್ಯಾರ್ಥಿಗಳು ಇಂದು ಪರೀಕ್ಷೆ ಬರೆಯಬೇಕಿತ್ತು.
Bengaluru: Students angry over repeated question paper leak of class 12th,say "will not take re-examination anymore"https://t.co/w7BjeYbmQr
— ANI (@ANI_news) March 31, 2016












Click it and Unblock the Notifications