"ಜೈಲುಗಳಲ್ಲೇ ಗಾಂಜಾ, ಅಫೀಮು ಮಾರಾಟ"
ಬೆಂಗಳೂರು, ಡಿಸೆಂಬರ್ 05: ಬೆಂಗಳೂರಿನಲ್ಲಿ ಮಾದಕ ವಸ್ತುಗಳ ಮಾರಾಟ ಅಧಿಕವಾಗಿದೆ. ಗಡಿಭಾಗದಲ್ಲಿ ಬಂದೋಬಸ್ತ್ ಬಿಗಿ ಮಾಡಿದರೆ ಇದನ್ನು ತಡೆಗಟ್ಟಬಹುದು. ಜೈಲುಗಳಲ್ಲೇ ಗಾಂಜಾ, ಅಫೀಮು ಮಾರಾಟವಾಗುತ್ತಿದೆ. ಸರ್ಕಾರ ಕೂಡಲೇ ಸಭೆ ಕರೆದು ಎಲ್ಲ ಕಡೆ ಮಾದಕ ವಸ್ತುಗಳ ಬಳಕೆಯನ್ನು ನಿಯಂತ್ರಿಸಬೇಕು. ಇಲ್ಲವಾದರೆ ಕರ್ನಾಟಕ ರಾಜ್ಯ ಡ್ರಗ್ ಮಾಫಿಯಾದ ಹೆದ್ದಾರಿಯಾಗಲಿದೆ ಎಂದು ವಿರೋಧ ಪಕ್ಷದ ನಾಯಕರಾದ ಆರ್ ಅಶೋಕ್ ಹೇಳಿದರು.
ಈ ಕುರಿತು ಇಂದು (ಶುಕ್ರವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಆರ್ ಅಶೋಕ್ ಅವರು, ನ್ಯಾ.ಬಿ.ವೀರಪ್ಪ ಅವರು ಈಗಿನ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಮಾತನಾಡಿದ್ದಾರೆಯೇ ಹೊರತು ಬಿಜೆಪಿ ಬಗ್ಗೆ ಹೇಳಿಲ್ಲ. ಇದು ಮಾಧ್ಯಮಗಳಲ್ಲೇ ಬಂದ ಸುದ್ದಿ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು.

ನ್ಯಾಯಮೂರ್ತಿಗಳು ಹಾಗೂ ಉಪ ಲೋಕಾಯುಕ್ತ ಬಿ.ವೀರಪ್ಪ ಅವರು ಕರ್ನಾಟಕದ ಕಾಂಗ್ರೆಸ್ ಸರ್ಕಾರದ 63 ಪರ್ಸೆಂಟ್ ಭ್ರಷ್ಟಾಚಾರದ ಬಗ್ಗೆ ಹೇಳಿದ್ದಾರೆ. ಅವರು ಹಿಂದಿನ ಬಿಜೆಪಿ ಸರ್ಕಾರ ಎಂದು ಎಲ್ಲೂ ಉಲ್ಲೇಖಿಸಿಲ್ಲ. 2019 ಎಂದು ಪ್ರಸ್ತಾಪ ಮಾಡಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಗ್ಗೆ ಹೇಳುವ ಮುನ್ನ ಅವರ ಮಾತಿನ ವೀಡಿಯೋ ನೋಡಲಿ. ಸಿದ್ದರಾಮಯ್ಯನವರೇ ಎಲ್ಲವನ್ನೂ ಊಹೆ ಮಾಡುವುದು ಬೇಡ. ಇದನ್ನು ನಾನು ಸೃಷ್ಟಿ ಮಾಡಿಲ್ಲ. ಇದು ಎಲ್ಲ ಪತ್ರಿಕೆ ಹಾಗೂ ಟಿವಿ ಮಾಧ್ಯಮಗಳಲ್ಲಿ ಪ್ರಸಾರವಾಗಿರುವ ಸುದ್ದಿ. ಇದನ್ನು ನಾನು ತಿರುಚಲು ಸಾಧ್ಯವೇ ಇಲ್ಲ. ವಾಲ್ಮೀಕಿ ನಿಗಮದ ಹಗರಣ, ಮುಡಾ ಹಗರಣ, ಗುತ್ತಿಗೆದಾರರು ಮಾಡಿರುವ ಆರೋಪ ಮೊದಲಾದವು ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರಕ್ಕೆ ಸಾಕ್ಷಿ ಎಂದರು.
ಸರ್ಕಾರದಲ್ಲಿ ಇನ್ನೂ ಗೊಂದಲ ಇರುವುದರಿಂದ ಸರಣಿ ಸಭೆಗಳು ನಡೆಯುತ್ತಿದೆ. ಅವಿಶ್ವಾಸ ಮಂಡನೆಯಾದರೆ ಎಲ್ಲರೂ ಒಂದಾಗಿರಬೇಕೆಂದು ಸಿಎಂ ಸಿದ್ದರಾಮಯ್ಯ ಶಾಸಕರಿಗೆ ಸೂಚಿಸಿದ್ದಾರೆ. ಅವಿಶ್ವಾಸ ಮಂಡನೆ ಬಗ್ಗೆ ಬಿಜೆಪಿಯಲ್ಲಿ ಯಾವುದೇ ತೀರ್ಮಾನವಾಗಿಲ್ಲ. ಆದರೆ ಈ ಬಗ್ಗೆ ಸಲಹೆ ಬಂದಿರುವುದು ನಿಜ. ಅಧಿವೇಶನದಲ್ಲಿ ಆರಂಭದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆಯಾಗಬೇಕೆಂದು ಆಗ್ರಹಿಸುತ್ತೇವೆ. ಪ್ರವಾಹ ಹಾನಿಯ ಪರಿಹಾರ ನೀಡದೆ ರೈತರಿಗೆ ಮೋಸ ಮಾಡಲಾಗುತ್ತಿದೆ. ಎಲ್ಲಕ್ಕೂ ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡಲಾಗುತ್ತಿದೆ. ಆದ್ದರಿಂದ ಈ ಬಗ್ಗೆ ಮೊದಲಿಗೆ ನಿಲುವಳಿ ಸೂಚನೆ ತರುತ್ತೇವೆ ಎಂದರು.
ಸದ್ಯಕ್ಕೆ ನಾಟಿ ಕೋಳಿ ಸಾರು ತಿಂದಿರುವುದು ಇಂಟರ್ವೆಲ್‌ನಂತೆ ಬಂದಿದೆ. ಸದನದ ಬಳಿಕ ಅಧಿಕಾರ ಹಂಚಿಕೆ ಕಿತ್ತಾಟ ಮುಂದುವರಿಯಲಿದೆ. ಅರಣ್ಯ ಇಲಾಖೆಗೆ ಅನುದಾನ ಕಡಿಮೆಯಾಗಿ ವನ್ಯಜೀವಿ-ಮಾನವ ಸಂಘರ್ಷ ಹೆಚ್ಚಿದೆ. ಆನೆಗಳ ಸಾವು ಅಧಿಕವಾಗಿದೆ. ಜಂಗಲ್ ಸಫಾರಿಯಿಂದಾಗಿ ವನ್ಯಜೀವಿಗಳು ಕಾಡಿಂದ ನಾಡಿಗೆ ಬರುತ್ತಿವೆ ಎನ್ನುವುದಕ್ಕೆ ಅರ್ಥವಿಲ್ಲ. ಅರಣ್ಯ ಪ್ರವಾಸೋದ್ಯಮಕ್ಕೆ ಕಲ್ಲು ಹಾಕಲಾಗಿದೆ. ಈ ಬಗ್ಗೆಯೂ ಚರ್ಚೆ ಮಾಡುತ್ತೇವೆ ಎಂದರು.
-
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ












Click it and Unblock the Notifications