ಭಾಗ್ಯಲಕ್ಷ್ಮೀ ಯೋಜನೆಗೆ ವಿವಾಹ ನೋಂದಣಿ ಕಡ್ಡಾಯ
ಬೆಂಗಳೂರು, ಮೇ 25 : ಸರ್ಕಾರ ನೀಡುವ ಹೆಣ್ಣುಮಕ್ಕಳಿಗೆ ನೀಡುವ ಭಾಗ್ಯಲಕ್ಷ್ಮೀ ಬಾಂಡ್ ಪಡೆಯಲು ಹೊಸ ನಿಯಮವನ್ನು ಜಾರಿಗೆ ತಂದಿದೆ. ಇನ್ನುಮುಂದೆ 2014ರ ನಂತರ ಜನಿಸುವ ಹೆಣ್ಣು ಮಕ್ಕಳಿಗೆ ಬಾಂಡ್ ನೀಡಬೇಕಾದರೆ,ಪೋಷಕರು ಕಡ್ಡಾಯವಾಗಿ ತಮ್ಮ ವಿವಾಹವನ್ನು ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ನೋಂದಣಿ ಮಾಡಿಸಿರಬೇಕು
ವಿಧಾನಮಂಡಲದ ಅಧೀನ ಶಾಸನ ರಚನಾ ಸಮಿತಿಯು ತನ್ನ ವರದಿಯಲ್ಲಿ ಭಾಗ್ಯಲಕ್ಷ್ಮೀ ಬಾಂಡ್ ವಿತರಣೆ ಮಾಡಲು ವಿವಾಹ ನೋದಣಿ ಕಡ್ಡಾಯವಾಗಿ ಮಾಡಿಸಿರಬೇಕು ಕಡ್ಡಾಯಗೊಳಿಸಬೇಕು ಎಂದು ಸರ್ಕಾರಕ್ಕೆ ಶಿಫಾರಸು ಮಾಡಿತ್ತು. ಆದ್ದರಿಂದ ಸರ್ಕಾರ ಈ ಕುರಿತು ಆದೇಶ ಹೊರಡಿಸಿದೆ.

ಸರ್ಕಾರದ ಆದೇಶದ ಅನ್ವಯ 2014ರ ನಂತರ ಜನಿಸುವ ಮಕ್ಕಳಿಗೆ ಭಾಗ್ಯಲಕ್ಷ್ಮೀ ಬಾಂಡ್ ನೀಡಬೇಕಾದರೆ, ಯೋಜನೆಗೆ ಅರ್ಜಿ ಸಲ್ಲಿಸುವಾಗ ಪೋಷಕರು ಅರ್ಜಿಯ ಜತೆಗೆ ತಮ್ಮ ವಿವಾಹ ನೋಂದಣಿ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಸಲ್ಲಿಸಬೇಕಾಗುತ್ತದೆ.
ಯಡಿಯೂರಪ್ಪ ಅವರ ಕನಸಿನ ಯೋಜನೆ : ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಭಾಗ್ಯಲಕ್ಷ್ಮೀ ಯೋಜನೆಯನ್ನು ಜಾರಿಗೆ ತರಲಾಯಿತು. ಬಡ ಕುಟುಂಬಕ್ಕೆ ಆರ್ಥಿಕ ಸಹಾಯನೀಡಲು ಯಡಿಯೂರಪ್ಪ ಅವರು ಜಾರಿಗೊಳಿಸಿದ ಯೋಜನೆ ಇದು. ಬಡ ಕುಟುಂಬದಲ್ಲಿ ಹೆಣ್ಣು ಮಗು ಜನಿಸಿದರೆ ಸರ್ಕಾರ 10 ಸಾವಿರ ರೂ. ಠೇವಣಿ ಇಟ್ಟು, 18 ನೇ ವರ್ಷ ತುಂಬಿದಾಗ 1 ಲಕ್ಷ ರೂ. ನೀಡುವ ಯೋಜನೆ ಇದಾಗಿದೆ.
ಹೆಣ್ಣು ಮಗು 10 ನೇ ತರಗತಿ ಪಾಸಾದ ಮೇಲೆ ಹೆಚ್ಚಿನ ವ್ಯಾಸಂಗಕ್ಕಾಗಿ ಬಾಂಡ್ ಅನ್ನು ಬ್ಯಾಂಕಿನಲ್ಲಿ ಅಡವಿಟ್ಟು, 50 ಸಾವಿರ ರೂ. ಸಾಲ ಪಡೆಯಲು ಸರ್ಕಾರ ಅವಕಾಶ ಕಲ್ಪಿಸಿದೆ. ಇದುವರೆಗೂ 16,73,887 ಹೆಣ್ಣುಮಕ್ಕಳಿಗೆ ಭಾಗ್ಯಲಕ್ಷ್ಮೀ ಬಾಂಡ್ ವಿತರಿಸಲಾಗಿದೆ.











Click it and Unblock the Notifications