ಬೆಳಗಾವಿ ಜಿಲ್ಲೆಯಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

By: ಒನ್ಇಂಡಿಯಾ ಪ್ರತಿನಿಧಿ
Subscribe to Oneindia Kannada

ಬೆಂಗಳೂರು, ಮಾರ್ಚ್ 14 : ಮಾವನ ಜೊತೆ ಅನೈತಿಕ ಸಂಬಂಧದಲ್ಲಿ ತೊಡಗಿದ್ದ ವಿವಾಹಿತ ಮಹಿಳೆ ಹಾಗೂ ಆಕೆಯ ಅಪ್ರಾಪ್ತ ವಯಸ್ಸಿನ ಸಹೋದರಿ ಮೇಲೆ ನಾಲ್ವರು ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕು ಯರಗಟ್ಟಿ ಗ್ರಾಮದ ತೋಟದಲ್ಲಿ ನಡೆದಿದೆ.

ಪಡೆಪ್ಪ ಬನ್ನೇರಿ ಎಂಬಾತ ವಿವಾಹಿತ ಸಂಬಂಧಿ ಮಹಿಳೆಯೊಂದಿಗೆ ತೋಟದಲ್ಲಿ ರಾಸಲೀಲೆ ನಡೆಸುತ್ತಿದ್ದ. ಇವರನ್ನ ಕಾವಲು ಕಾಯುತ್ತಾ ಆಕೆಯ ಸಹೋದರಿ ದೂರದಲ್ಲಿ ಕುಳಿತಿದ್ದಳು. ಈ ಸಂದರ್ಭ ಸ್ಥಳಕ್ಕೆ ಬಂದ ನಾಲ್ವರು ದುಷ್ಕರ್ಮಿಗಳು ರಾಸಲೀಲೆಯಲ್ಲಿ ತೊಡಗಿದ್ದ ವಿಡಿಯೋ ಚಿತ್ರೀಕರಿಸಿಕೊಂಡು ಬ್ಲ್ಯಾಕ್ ಮೇಲ್ ಮಾಡಿ ನಂತರ ಇಬ್ಬರ ಮೇಲೂ ಅತ್ಯಾಚಾರವೆಸಗಿ ಪರಾರಿಯಾಗಿದ್ದಾರೆ.

ಅತ್ಯಾಚಾರಕ್ಕೊಳಗಾದ ಯುವತಿಯರ ಮನೆಯಲ್ಲಿ ಈ ವಿಷಯ ತಿಳಿದ ಕೂಡಲೇ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಮುರಗೋಡ ಪೊಲೀಸರು ಯುವತಿಯರ ಸೋದರ ಮಾವ ಸೇರಿದಂತೆ ಐವರನ್ನು ಬಂಧಿಸಿದ್ದು, ಯುವತಿ ಮತ್ತು ಅವಳ ಅಕ್ಕನನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.

Married woman raped by four miscreants

ಖಾಸಗಿ ಬಸ್ ಪಲ್ಟಿ; ಇಬ್ಬರು ಸ್ಥಳದಲ್ಲೇ ಸಾವು

ಬೆಂಗಳೂರು : ಖಾಸಗಿ ಬಸ್ ಪಲ್ಟಿಯಾಗಿ ಕಂಡಕ್ಟರ್ ಸೇರಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಮುಷ್ಟೂರ ಬಳಿ ನಡೆದಿದೆ.

ಬಸ್ ನಿರ್ವಾಹಕ ದಾದು (30), ನಾಗವೇಣಿ (35) ಮೃತರು. ಸುಮಾರು 30 ಜನರು ಈ ಘಟನೆಯಲ್ಲಿ ಗಾಯಗೊಂಡಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ದಾವಣಗೆರೆ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

ಬಳ್ಳಾರಿಯಿಂದ ದಾವಣಗೆರೆ ಕಡೆ ಬರುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಜಗಳೂರು ಪೊಲೀಸರು ಭೇಟಿ, ನೀಡಿ ಪರಿಶೀಲನೆ ನಡೆಸಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
A married has been gang raped by four miscreants in Belagavi district. The victim was in illicit relationship with another elderly man. The four people also video recorded the rape scene.
Please Wait while comments are loading...