ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ ಕಡ್ಡಾಯ; ಹೊಸ ಕೋವಿಡ್ ಮಾರ್ಗಸೂಚಿ ಪ್ರಕಟ
ಬೆಂಗಳೂರು, ಏಪ್ರಿಲ್ 25: ಕೋವಿಡ್ ಪ್ರಕರಣಗಳ ಕಡಿಮೆ ಸಂಖ್ಯೆ ಕಡಿಮೆಯಾಗಿದ್ದರಿಂದ ರಾಜ್ಯದಲ್ಲಿ ಕೋವಿಡ್ -19 ನಿರ್ಬಂಧಗಳನ್ನು ಫೆಬ್ರವರಿ 28, 2022ರಿಂದ ತೆಗೆದುಹಾಕಲಾಗಿತ್ತು. ಮತ್ತು ಸಾರ್ವಜನಿಕರ ದೈನಂದಿನ ಜೀವನ ದೃಷ್ಟಿಯಿಂದ ಎಲ್ಲಾ ಚಟುವಟಿಕೆಗಳನ್ನು ತೆರೆಯಲಾಗಿತ್ತು.
ಆದರೆ ಪ್ರಸ್ತುತ, ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವನ್ನು ಗಮನಿಸಲಾಗಿದ್ದು, ದೆಹಲಿ, ಹರಿಯಾಣ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಪ್ರತಿದಿನ ಸ್ವಲ್ಪ ಹೆಚ್ಚಳವಾಗುತ್ತಿವೆ. ಅಲ್ಲದೆ ಕರ್ನಾಟಕದಲ್ಲಿಯೂ ಕೋವಿಡ್ ಪ್ರಕರಣಗಳು ಏರಿಕೆಯಾಗುತ್ತಿವೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸೋಮವಾರ ಹೊಸದಾಗಿ ಸಣ್ಣ ಪ್ರಮಾಣದ ಮಾರ್ಗಸೂಚಿ/ ನಿರ್ಬಂಧಗಳ ಆದೇಶ ಹೊರಡಿಸಿದೆ.
ಇದೇ ವೇಳೆ ಕೋವಿಡ್ ಪ್ರಕರಣ ಹೆಚ್ಚಾಗುತ್ತಿರುವ ದೆಹಲಿ, ಹರಿಯಾಣ ಮತ್ತು ತಮಿಳುನಾಡು ರಾಜ್ಯಗಳು ಮಾಸ್ಕ್ ಅನ್ನು ಪುನಃ ಪರಿಚಯಿಸಿವೆ. ಇದರ ಅನುಸರಣೆ ಮಾಡದಿದ್ದರೆ ದಂಡ ಪ್ರಯೋಗಕ್ಕೆ ಆದೇಶಿಸಿದೆ. ಪೂರ್ವಭಾವಿ ಹೆಜ್ಜೆಯಾಗಿ ಕೋವಿಡ್ ಪ್ರಕರಣಗಳ ಉಲ್ಬಣವನ್ನು ಕಡಿಮೆ ಮಾಡಲು, ರಾಜ್ಯ ಕೋವಿಡ್- 19 ತಾಂತ್ರಿಕ ಸಲಹಾ ಸಮಿತಿಯ ಶಿಫಾರಸ್ಸಿನ ಮೇರೆಗೆ ಮಾರ್ಗಸೂಚಿ ಆದೇಶವನ್ನು ಹೊರಡಿಸಲಾಗಿದೆ.

ಹೊಸ ಮಾರ್ಗಸೂಚಿಯಲ್ಲಿ ಏನಿದೆ?
ಎಲ್ಲ ಸಾರ್ವಜನಿಕ ಸ್ಥಳಗಳಲ್ಲಿ, ಕೆಲಸದ ಸ್ಥಳಗಳಲ್ಲಿ ಮತ್ತು ಪ್ರಯಾಣ ಸಮಯದಲ್ಲಿ ಜನರು ಮುಖ ಕವಚ/ಮಾಸ್ಕ್ ಧರಿಸುವುದು ಕಡ್ಡಾಯ. ಇದೆ ವೇಳೆ ಹಾಗೆಯೇ ಉಗುಳುವುದು ದಂಡದೊಂದಿಗೆ ಶಿಕ್ಷಾರ್ಹವಾಗಿರುತ್ತದೆ. ಸ್ಥಳೀಯ ಅಧಿಕಾರಿಗಳು ಅದರ ಕಾನೂನುಗಳು, ನಿಯಮಗಳು ಅಥವಾ ನಿಬಂಧನೆಗಳಿಗೆ ಅನುಗುಣವಾಗಿ ಆದೇಶ ಹೊರಡಿಸುವುದು.

Recommended Video
ಇದಲ್ಲದೆ, ವ್ಯಕ್ತಿಗಳು ಸಾರ್ವಜನಿಕ ಸ್ಥಳಗಳಲ್ಲಿ ಕನಿಷ್ಠ 2 ಅಡಿ ದೈಹಿಕ ಅಂತರವನ್ನು ಕಾಯ್ದುಕೊಳ್ಳಬೇಕು ಎಂದು ರಾಜ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಪಿ. ರವಿಕುಮಾರ್ ಆದೇಶ ಹೊರಡಿಸಿದ್ದಾರೆ.












Click it and Unblock the Notifications