ಮೆಟ್ರೋ ಹಾಗೂ ಬಿಎಂಟಿಸಿ ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ
ಬೆಂಗಳೂರು,ಡಿಸೆಂಬರ್ 24: ಚೀನಾ ಸೇರಿದಂತೆ ಹಲವು ದೇಶಗಳಲ್ಲಿ ಕೊರೋನಾ ಉಲ್ಬಣವಾಗುತ್ತಿದ್ದು, ಕೊರೋನಾ ನಾಲ್ಕನೇ ಅಲೆ ಭೀತಿ ಹಿನ್ನೆಲೆ ಬಿಎಂಟಿಸಿ ಹಾಗೂ ಮೆಟ್ರೋ ದಲ್ಲಿ ಪ್ರಯಾಣಿಕರಿಗೆ ಮಾಸ್ಕ್ ಕಡ್ಡಾಯಗೊಳಿ ಆದೇಶ ಹೊರಡಿಸಿದೆ.
ಈ ಮಹತ್ವದ ನಿರ್ಧಾರ ಇಂದಿನಿಂದ ( ಡಿಸೆಂಬರ್ 24) ಆರಂಭವಾಗಿದ್ದು, ಆರೋಗ್ಯ ಇಲಾಖೆ ನಿರ್ದೇಶನದಂತೆ ಈ ಕುರಿತು ಬಿಎಂಟಿಸಿ ಸುತ್ತೋಲೆ ಹೊರಡಿಸಿದ್ದು, ಬಿಎಂಟಿಸಿ ಬಸ್ ನಲ್ಲಿ ಪ್ರಯಾಣಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಒಂದು ವೇಳೆ ಮಾಸ್ಕ್ ಧರಿಸದಿದ್ದರೆ ಬಸ್ ಹತ್ತುವಂತಿಲ್ಲ. ಬಿಎಂಟಿಸಿ ಬಸ್ ಸಿಬ್ಬಂದಿಗಳಿಗೂ ಮಾಸ್ಕ್ ಕಡ್ಡಾಯ ಬೂಸ್ಟರ್ ಡೋಸ್ ಹಾಕಿಸಿಕೊಳ್ಳುವಂತೆ ಮನವಿ ಮಾಡಿದೆ.
ಶೀತಜ್ವರ, ಉಸಿರಾಟದ ತೊಂದರೆ ಸೇರಿ ಕೋವಿಡ್ ಲಕ್ಷಣಗಳಿದ್ದರೆ ಸೋಂಕು ಪರೀಕ್ಷೆಗೆ ಒಳಗಾಗಬೇಕು. ಇನ್ನೂ ಮೊದಲ ಹಾಗೂ ಎರಡನೇ ಡೋಸ್ ಪಡೆದವರು ಕಡ್ಡಾಯವಾಗಿ ಮೂರನೇ ಡೋಸ್ ಪಡೆಯಬೇಕು ಎಂದು ಸೂಚಿಸಲಾಗಿದೆ.

ಇನ್ನು ಮೆಟ್ರೋದಲ್ಲಿ ಇಲ್ಲಿಯವರೆಗೂ ಕಡ್ಡಾಯ ಇಲ್ಲದಿದ್ದರೂ ಬಹುತೇಕ ಜನ ಮಾಸ್ಕ್ ಧರಿಸಿಯೇ ಪ್ರಯಾಣಿಸುತ್ತಿದ್ದರು. ಇದೀಗ ಕಡ್ಡಾಯಗೊಳಿಸಲಾಗಿದ್ದು, ಮಾಸ್ಕ್ ಧರಿಸಿದ್ದರೆ ಮಾತ್ರ ಮೆಟ್ರೋದಲ್ಲಿ ಪ್ರಯಾಣಿಸಬಹುದಾಗಿದೆ. ಮಾಸ್ಕ್ ಇಲ್ಲವಾದಲ್ಲಿ ಭದ್ರತಾ ಸಿಬ್ಬಂದಿ ವಾಪಾಸು ಕಳುಸುತ್ತಿದ್ದಾರೆ. ಚೆಕಿಂಗ್ ಬಳಿಕವೂ ಮಾಸ್ಕ್ ಹಾಕಿಯೇ ಪ್ರಯಾಣಿಸುವಂತೆ ಸಿಬ್ಬಂದಿ ಎಚ್ಚರವಹಿಸಿದ್ದಾರೆ.
ಬೂಸ್ಟರ್ ಡೋಸ್ ಪಡೆಯುವಂತೆ ಸಾವರ್ಜನಿಕರಿಗೆ ಮನವಿ ಮಾಡಿದ ತುಷಾರ್ ಗಿರಿನಾಥ್
ಕೊರೋನಾ ಆತಂಕ ಹೆಚ್ಚಾಗುತ್ತಿದ್ದು, ಕೊರೋನಾ ತಡೆಗೆ ಸರ್ಕಾರ ಈಗಾಗಲೇ ಮುಂದಾಗಿದ್ದು. ಈ ಕುರಿತು ಸಾರ್ವಜನಿಕರು ಬೂಸ್ಟರ್ ಡೋಸ್ ಪಡೆಯಬೇಕು ಎಂದು ಬಿಬಿಎಂಪಿ ಆಯುತ್ಕ ತುಷಾರ್ ಗಿರಿನಾಥ್ ಮನವಿ ಮಾಡಿದ್ದಾರೆ.
ಕೊರೋನಾ ಸೋಂಕು ಮತ್ತೆ ಹರಡುವ ಭೀತಿಯ ಹಿನ್ನೆಲೆಯಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಬೂಸ್ಟರ್ ಡೋಸ್ ನೀಡಲು ಸಕಾಲಕ್ಕೆ ಲಸಿಕೆ ಪೂರೈಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಬೂಸ್ಟರ್ ಡೋಸ್‌ಗೆ ಬೇಡಿಕೆ ಬರುತ್ತಿದೆ. ಪ್ರಮುಖವಾಗಿ ಕೋವಿಶೀಲ್ಡ್ ಲಸಿಕೆ ಹೆಚ್ಚಿನ ಮಂದಿಗೆ ನೀಡಬೇಕಾಗಿದೆ. ಪ್ರಸ್ತುತ ಬೆಂಗಳೂರು ನಗರದಲ್ಲಿ 9ರಿಂದ 10 ಲಕ್ಷ ಮಂದಿ ಕೋವ್ಯಾಕ್ಸಿನ್ ಪಡೆದಿದ್ದಾರೆ.

ಉಳಿದ ಬಹುತೇಕರು ಎರಡು ಡೋಸ್ ಕೋವಿಶೀಲ್ಡ್ ಪಡೆದಿರುವುದರಿಂದ ಈ ಲಸಿಕೆಗೆ ಬೇಡಿಕೆ ಬರುತ್ತಿದೆ. ಕೋವಿಶೀಲ್ಡ್ ಕೊರತೆ ಇದೆ. ಹೀಗಾಗಿ, ಕೋವಿಶೀಲ್ಡ್ ಲಸಿಕೆಯನ್ನು ಪೂರೈಕೆ ಮಾಡುವಂತೆ ಸರ್ಕಾರಕ್ಕೆ ಕೋರಲಾಗಿದೆ ಎಂದರು. ಕೋವಿಶೀಲ್ಡ್ ಪಡೆದವರಲ್ಲಿ ಬೂಸ್ಟರ್ ಡೋಸ್‌ಗೆ ಅರ್ಹವಾಗಿರುವವರ ಲೆಕ್ಕ ಪಾಲಿಕೆಯಲ್ಲಿ ಇದೆ. ಪ್ರಸ್ತುತ 60ರ ಮೇಲ್ಪಟ್ಟವರಿಗೆ ಮಾತ್ರ ಬೂಸ್ಟರ್ ಡೋಸ್ ನೀಡಲಾಗುತ್ತಿದೆ. ಎರಡು ಡೋಸ್ ಪಡೆದಿರುವ ಇತರೆ ವಯಸ್ಸಿನವರೂ ಮುಂಜಾಗ್ರತೆಯಾಗಿ ಬೂಸ್ಟರ್ ಡೋಸ್ ಪಡೆದುಕೊಳ್ಳಬೇಕು ಎಂದರು.
ಎಷ್ಟು ಮಂದಿ ಎರಡು ಡೋಸ್ ಲಸಿಕೆ ಪಡೆದಿದ್ದಾರೆ ಎಂಬ ಮಾಹಿತಿ ಬಿಬಿಎಂಪಿಯಲ್ಲಿ ಇರುವುದರಿಂದ ಮೂರನೇ ಡೋಸ್ ಪಡೆಯಲು ಅವರನ್ನು ಸಂಪರ್ಕಿಸಲಾಗುವುದು ಎಂದರು. ಬಿಬಿಎಂಪಿಯಲ್ಲಿ ಕೋವ್ಯಾಕ್ಸಿನ್ ಹೆಚ್ಚಿನ ಪ್ರಮಾಣದಲ್ಲಿ ಲಭ್ಯವಿದ್ದು, ಜನವರಿ ವೇಳೆಗೆ ಅದರ ಅವಧಿ ಮುಗಿಯಲಿದೆ. ಅದನ್ನು ವಾಪಸ್ ಕಳಿಸುತ್ತೇವೆ ಎಂದು ಹೇಳಿದ ಅವರು, ಹೊಸದಾಗಿ ಕೋವ್ಯಾಕ್ಸಿನ್ ಹಾಗೂ ಕೋವಿಶೀಲ್ಡ್ ಲಸಿಕೆಯನ್ನು ಪೂರೈಕೆ ಮಾಡಿದಲ್ಲಿ ಎಲ್ಲ ಆಸ್ಪತ್ರೆಗಳಲ್ಲಿ ಬೂಸ್ಟರ್ ಡೋಸ್ ನೀಡಲು ಸಹಕಾರಿಯಾಗಲಿದೆ ಎಂದರು.












Click it and Unblock the Notifications