ಕಾವೇರಿ ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾಗಿ ಮಸೂದ್ ಹುಸೇನ್ ನೇಮಕ

ನವದೆಹಲಿ, ಜೂನ್ 6: ಕಾವೇರಿ ನದಿ ನೀರು ಹಂಚಿಕೊಳ್ಳಲು ಹೊಸ ಕ್ರಮವನ್ನು ರಚಿಸುವಂತೆ ಸುಪ್ರೀಂ ಕೋರ್ಟ್ ಕಳೆದ ಫೆಬ್ರವರಿಯಲ್ಲಿ ಕೇಂದ್ರ ಸರಕಾರಕ್ಕೆ ಆದೇಶಿಸಿತ್ತು. ಅದರಂತೆ ಕಳೆದ ತಿಂಗಳು ಕೇಂದ್ರ ಸರ್ಕಾರವು "ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ" ವನ್ನು ಸ್ಥಾಪಿಸಿತು.

ಈ ನೀರು ನಿರ್ವಹಣಾ ಪ್ರಧಿಕಾರಕ್ಕೆ ಅಧ್ಯಕ್ಷರನ್ನಾಗಿ ಕೇಂದ್ರ ಸರಕಾರ ಎಸ್. ಮಸೂದ್ ಹುಸೇನ್ ಅವರನ್ನು ನೇಮಿಸಿದೆ. ಅವರು ಸದ್ಯ ರಾಷ್ಟ್ರೀಯ ನೀರು ಅಭಿವೃದ್ಧಿ ಸಂಸ್ಥೆಯ ಪ್ರಧಾನ ನಿರ್ದೇಶಕರಾಗಿದ್ದಾರೆ.

Masood Hussein appointed ಻as Chairman of Cauvery Water Management Board

ಕೇಂದ್ರ ಸರ್ಕಾರವು ನಿಗದಿಪಡಿಸಿದ ಯೋಜನೆಯ ಪ್ರಕಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ದೆಹಲಿಯಲ್ಲಿ ಕಾರ್ಯನಿರ್ವಹಿಸುತ್ತದೆ. ಕಾವೇರಿ ನಿಯಂತ್ರಣ ಆಯೋಗದ ಕಚೇರಿ ಬೆಂಗಳೂರಿನಲ್ಲಿದೆ. ಕೇಂದ್ರ ಜಲಸಂಪನ್ಮೂಲ ಇಲಾಖೆ ಆದೇಶದ ಪ್ರಕಾರ ಅಧ್ಯಕ್ಷರು ಹಾಗೂ 8 ಸದಸ್ಯರ ಸಮಿತಿಯನ್ನು ರಚಿಸಲಾಗಿದೆ. ಎಂಟು ಸದಸ್ಯರ ಪೈಕಿ ನಾಲ್ವರು ಕಾಯಂ ಸದಸ್ಯರಾಗಿರುತ್ತಾರೆ. ಉಳಿದವರು ತಾತ್ಕಾಲಿಕ ಸದಸ್ಯತ್ವ ಪಡೆದುಕೊಂಡಿರುತ್ತಾರೆ. ಈ ಸದಸ್ಯರು ಜಲವಿವಾದ ವ್ಯಾಪ್ತಿಯಲ್ಲಿರುವ ನಾಲ್ಕು ರಾಜ್ಯಗಳನ್ನು ಪ್ರತಿನಿಧಿಸಲಿದ್ದಾರೆ.

ನೀರಿನ ಮೇಲ್ವಿಚಾರಣೆ ಮಾಡಲು, ಆಣೆಕಟ್ಟುಗಳಲ್ಲಿ ನೀರು ಸಂಗ್ರಹ ಅವುಗಳ ಬಿಡುಗಡೆ ಮಾಡುವ ಅಧಿಕಾರವನ್ನು ಆಯೋಗಕ್ಕೆ ನೀಡಲಾಗಿದೆ. ಬಿಡುಗಡೆಯಾದ ನೀರಿನ ಪ್ರಮಾಣ, ಬಿಡುಗಡೆಯಾದ ಬಳಿಕ ಶೇಖರಣೆಯಾದ ನೀರಿನ ಪ್ರಮಾಣವನ್ನು ಈ ಪ್ರಾಧಿಕಾರ ಮಾಪನ ಮಾಡಲಿದೆ.

ಇನ್ನು ಈ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮೊದಲ ಸಭೆ ನಡೆಯಲಿದೆ. ಈಗಾಗಲೇ ಜಲಸಂಪನ್ಮೂಲ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಕೇಶ್‌ ಸಿಂಗ್‌‌ ಅವರನ್ನು ಈ ಪ್ರಾಧಿಕಾರಕ್ಕೆ ಕರ್ನಾಟಕ ರಾಜ್ಯದ ಪ್ರತಿನಿಧಿಯನ್ನಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+