Bengaluru Bandh: ಬಿಜೆಪಿಯಿಂದ ಬೃಹತ್ ಪ್ರತಿಭಟನೆ: ಬೆಂಗಳೂರು ಬಂದ್...
ಬೆಂಗಳೂರು, ಜೂನ್ 17: ಆರ್‌ಸಿಬಿ ವಿಜಯೋತ್ಸವದಲ್ಲಿ 11 ಜನ ಆರ್‌ಸಿಬಿ ಅಭಿಮಾನಿಗಳು ಸತ್ತಿದ್ದು, ಅವರ ಸಾವಿಗೆ ಸರಕಾರವೇ ನೇರ ಕಾರಣ. ಈ ದುರ್ಘಟನೆಯ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ರಾಜೀನಾಮೆ ಕೊಡಬೇಕೆಂದು ಆಗ್ರಹಿಸಿದ ಬಿಜೆಪಿ ವತಿಯಿಂದ ಫ್ರೀಡಂ ಪಾರ್ಕಿನಲ್ಲಿ ಇಂದು (ಜೂನ್ 17) ದೊಡ್ಡ ಪ್ರತಿಭಟನೆ ನಡೆಯಲಿದೆ ಎಂದು ವಿಧಾನ ಪರಿಷತ್ ಸದಸ್ಯರಾದ ಎನ್ ರವಿ ಕುಮಾರ್ ಅವರು ತಿಳಿಸಿದರು.
ಬಿಜೆಪಿ ವತಿಯಿಂದ ದೊಡ್ಡ ಪ್ರತಿಭಟನೆ ನಡೆಯಲಿದ್ದು, ಸಹಸ್ರಾರು ಸಂಖ್ಯೆಯಲ್ಲಿ ಜನರು, ಕಾರ್ಯಕರ್ತರು ಭಾಗವಹಿಸಲಿದ್ದಾರೆ. ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಪಕ್ಷ ನಾಯಕ ಆರ್.ಅಶೋಕ್, ಪ್ರಮುಖರಾದ ಡಾ.ಅಶ್ವತ್ಥನಾರಾಯಣ್, ಗೋಪಾಲಯ್ಯ, ಬೆಂಗಳೂರಿನ ನಮ್ಮ ಸಂಸದರು, ಶಾಸಕರು ಭಾಗವಹಿಸುತ್ತಾರೆ ಎಂದು ಎನ್ ರವಿ ಕುಮಾರ್ ಅವರು ಹೇಳಿದ್ದಾರೆ.

ಟಿ.ಎಫ್.ಹಾದಿಮನಿ ಎಂಬ ವ್ಯಕ್ತಿ ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರಿಗೆ ಅವಮಾನ ಆಗುವಂತೆ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಾರೆ. ಹಾದಿಮನಿ ಅವರ ವಿರುದ್ಧ ಕೇಸು ದಾಖಲಿಸಿ ಬಂಧಿಸಬೇಕು ಎಂದು ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್ ಅವರು ಆಗ್ರಹಿಸಿದರು.
ಟಿ.ಎಫ್.ಹಾದಿಮನಿ, ಮೋದಿಯವರ ಬಗ್ಗೆ ಅತ್ಯಂತ ಅವಹೇಳನಕಾರಿಯಾಗಿರುವ ಪೋಸ್ಟ್ ಅನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಮೋದಿಜೀ ಅವರ ಬಗ್ಗೆ ಕೋಟ್ಯಂತರ ಜನರು ಗೌರವ- ಅಭಿಮಾನ ಹೊಂದಿದ್ದು, ಅವರ ಮನಸ್ಸಿಗೆ ಈ ಪೋಸ್ಟ್ ನೋಡಿ ನೋವಾಗಿದೆ ಎಂದು ತಿಳಿಸಿದರು. ಇದು ಮೋದಿಯವರಿಗೆ ಕೆಟ್ಟ ಹೆಸರು ತರುವ ದೊಡ್ಡ ತಪ್ಪು. ಮೋದಿಯವರ ಚಾರಿತ್ರ್ಯವಧೆ ಮಾಡುವ ಹಾದಿಮನಿ ಮತ್ತು ಇತರರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಯಶವಂತಪುರದ ಸೈಬರ್ ಪೊಲೀಸ್ ಠಾಣೆಗೆ ದೂರು ನೀಡಿದ್ದೇವೆ. ರಾಜ್ಯ ವಕ್ತಾರ ಮತ್ತು ವಕೀಲ ವೆಂಕಟೇಶ ದೊಡ್ಡೇರಿ ಅವರು ದೂರುದಾರ ಎಂದು ತಿಳಿಸಿದರು. ಎಫ್‍ಐಆರ್ ಮಾಡುವುದಾಗಿ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ ಎಂದು ಹೇಳಿದರು.
ನಿವೃತ್ತ ಪೊಲೀಸ್ ಆಯುಕ್ತ ಮತ್ತು ಪಕ್ಷದ ಮುಖಂಡ ಭಾಸ್ಕರ ರಾವ್ ಅವರು ಮಾತನಾಡಿ, ಪ್ರಧಾನಿಯವರನ್ನು ಅವಮಾನ ಮಾಡಿದ್ದು ಖಂಡನೀಯ. ಹಾದಿಮನಿ ಬಂಧನಕ್ಕೆ ಹಾಗೂ ಹಿನ್ನೆಲೆಯ ತನಿಖೆ ಮಾಡುವಂತೆ ಕೋರಿದ್ದೇವೆ. ಹಾದಿಮನಿ ಮತ್ತು ಇಂಥ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮಕ್ಕೆ ದೂರು ನೀಡಿದ್ದಾಗಿ ಹೇಳಿದರು.
ರಾಜ್ಯ ವಕ್ತಾರ ಹೆಚ್. ವೆಂಕಟೇಶ್ ದೊಡ್ಡೇರಿ ಅವರು ಮಾತನಾಡಿ, ಮೋದಿಜೀ ಅವರ ವಿರುದ್ಧ ಹಾದಿಮನಿ, ಫೇಸ್ ಬುಕ್‍ನಲ್ಲಿ ಹಾಕಿರುವ ಪೋಸ್ಟ್ ಸಮಾಜದಲ್ಲಿ ಶಾಂತಿ- ಸುವ್ಯವಸ್ಥೆಯನ್ನು ಕದಡುವಂತಿದೆ. ಜನರ ಭಾವನೆಗೆ ಇದರಿಂದ ಧಕ್ಕೆಯಾಗಿದೆ. ಅವರು ಇಂಥ ಅವಹೇಳನಕಾರಿ ಪೋಸ್ಟ್‍ಗಳನ್ನು ನಿರಂತರವಾಗಿ ಹಾಕುತ್ತಿದ್ದಾರೆ ಎಂದು ಟೀಕಿಸಿದರು. ಅವರನ್ನು ಬಂಧಿಸಿ ಸಮಗ್ರ ತನಿಖೆಗೆ ಆಗ್ರಹಿಸಿದ್ದಾಗಿ ತಿಳಿಸಿದರು.
-
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
Abdul Jabbar: ಕಾಂಗ್ರೆಸ್ ಪಕ್ಷದಿಂದ ಅಬ್ದುಲ್ ಜಬ್ಬಾರ್ ಅಮಾನತು: ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಕ್ರಮ -
Government Employees: ಸರ್ಕಾರಿ ನೌಕರರ ವರ್ಗಾವಣೆ ಕುರಿತು ಸಿಹಿ ಸುದ್ದಿ ಕೊಟ್ಟ ರಾಜ್ಯ ಸರ್ಕಾರ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು












Click it and Unblock the Notifications