ಮಾಸ್ತಿ ಗುಡಿ ದುರಂತ: ಚಿತ್ರ ತಂಡದ ವಿರುದ್ಧ ಚಾರ್ಜ್ ಶೀಟ್
ದುನಿಯಾ ವಿಜಯ್ ಅಭಿನಯದ ಮಾಸ್ತಿಗುಡಿ ಚಿತ್ರದ ಕ್ಲೈಮ್ಯಾಕ್ಸ್ ಶೂಟಿಂಗ್ ಸಂದರ್ಭದಲ್ಲಿ ಖಳನಟ ಅನಿಲ್ ಹಾಗೂ ರಾಘವ್ ಉದಯ್ ಅವರ ದುರಂತ ಸಾವಿಗೀಡಾಗಿದ ಪ್ರಕರಣಕ್ಕೆ ಮತ್ತೆ ಜೀವ ಬಂದಿದೆ.
ಮಾಗಡಿ, ಏಪ್ರಿಲ್ 27: ದುನಿಯಾ ವಿಜಯ್ ಅಭಿನಯದ ಮಾಸ್ತಿಗುಡಿ ಚಿತ್ರದ ಕ್ಲೈಮ್ಯಾಕ್ಸ್ ಶೂಟಿಂಗ್ ಸಂದರ್ಭದಲ್ಲಿ ಖಳನಟ ಅನಿಲ್ ಹಾಗೂ ರಾಘವ್ ಉದಯ್ ಅವರ ದುರಂತ ಸಾವಿಗೀಡಾಗಿದ ಪ್ರಕರಣಕ್ಕೆ ಮತ್ತೆ ಜೀವ ಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಗಡಿಯ ಜೆ ಎಂ ಎಫ್ ಸಿ ಕೋರ್ಟಿನಲ್ಲಿ ಆರು ಮಂದಿ ಆರೋಪಿಗಳ ಮೇಲೆ ಚಾರ್ಜ್ ಶೀಟ್ ಸಲ್ಲಿಸಲಾಗಿದೆ.
ತಾವರೆಕೆರೆ ಪೊಲೀಸರು ಈಗಾಗಲೇ ಚಿತ್ರತಂಡದ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಎಫ್ ಐಆರ್ ಹಾಕಿರುವುದನ್ನು ಇಲ್ಲಿ ಸ್ಮರಿಸಬಹುದು. [ಮಾಸ್ತಿಗುಡಿ ದುರಂತ: ಅನಿಲ್, ಉದಯ್ ದುರಂತ ಸಾವಿನ ವಿಡಿಯೋ]

ಅನಿಲ್ ಮತ್ತು ರಾಘವ್ ಉದಯ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಸ್ತಿಗುಡಿ ಚಿತ್ರ ತಂಡದ ಐವರ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಐಪಿಸಿ ಸೆಕ್ಷನ್ 304(A) ಹಾಗೂ 308 ಅನ್ವಯ ಕೇಸು ದಾಖಲಾಗಿದೆ.
ಮಾಗಡಿಯ ಜೆಎಂಎಫ್ಸಿ ಕೋರ್ಟ್, ಐ.ಪಿ.ಸಿ 304 (ಅಜಾಕರೂಕತೆಯಿಂದ ಉಂಟಾದ ಸಾವು ) ರಲ್ಲಿ ನಿರ್ಮಾಪಕ ನಾಗಶೇಖರ್, ಸುಂದರಗೌಡ, ಸಾಹಸ ನಿರ್ದೇಶಕ ರವಿವರ್ಮ, ಪೈಲಟ್ ಸೇರಿದಂತೆ ಆರು ಜನರ ವಿರುದ್ಧ ಸುಮಾರು 450 ಪುಟಗಳ ಚಾರ್ಜ್ ಶೀಟ್ ಸಲ್ಲಿಸಲಾಗಿದೆ.
ಆದರೆ, ಚಿತ್ರದ ನಿರ್ಮಾಪಕ ಸುಂದರ್ ಗೌಡ ಹಾಗೂ ನಿರ್ದೇಶಕ ನಾಗಶೇಖರ್ ಅವರು ಜಾಮೀನಿನ ಮೇಲೆ ಹೊರ ಬಂದಿರುವುದರಿಂದ ಚಿತ್ರ ಬಿಡುಗಡೆಗೆ ಯಾವುದೇ ಅಡ್ಡಿ ಕಂಡು ಬಂದಿಲ್ಲ.
ಚಿತ್ರದ ನಿರ್ಮಾಪಕ ಸುಂದರ್ ಗೌಡ ಅವರನ್ನು ಎ-1 ಆರೋಪಿಯಾಗಿದ್ದು, ನಿರ್ದೇಶಕ ನಾಗಶೇಖರ್ ಅವರು ಎ-2 ಆರೋಪಿ, ಸಹ ನಿರ್ದೇಶಕ ಎ-3 ಆರೋಪಿ, ಸಾಹಸ ನಿರ್ದೇಶಕ ರವಿವರ್ಮ ಅವರನ್ನು ಎ-4 ಆರೋಪಿಯನ್ನಾಗಿ ಪ್ರಕರಣ ದಾಖಲಿಸಲಾಗಿದೆ. ಸಾಹಸ ಸಹ ನಿರ್ದೇಶಕ ಎ-5 ಆರೋಪಿಯಾಗಿದ್ದು, ಚಿತ್ರದ ನಾಯಕ ನಟ ದುನಿಯಾ ವಿಜಯ್ ವಿರುದ್ಧವೂ ಕ್ರಿಮಿನಲ್ ಪ್ರಕರಣ ದಾಖಲಿಸುವ ಸಾಧ್ಯತೆಯಿಂದ ಬಚಾವಾದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications