ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಚಂದನದಲ್ಲಿ ಪಾಠ

|
Google Oneindia Kannada News

ಬೆಂಗಳೂರು, ಡಿ.2 : ಎಸ್‌ಎಸ್‌ಎಲ್‌ಸಿ ಹಾಗೂ ಸಿಬಿಎಸ್‌ಸಿ ತರಗತಿಗಳ ಗಣಿತ ಹಾಗೂ ವಿಜ್ಞಾನ ವಿಷಯಗಳನ್ನು ಡಿ.2ರಿಂದ ದೂರದರ್ಶನದ ಚಂದನ ವಾಹಿನಿಯಲ್ಲಿ ಬೋಧನೆ ಮಾಡಲಾಗುತ್ತದೆ. ಮಂಗಳವಾರದಿಂದ ಶುಕ್ರವಾರದ ತನಕ ರಾತ್ರಿ 7 ರಿಂದ 8 ಗಂಟೆಯ ತನಕ ಈ ಕಾರ್ಯಕ್ರಮ ಪ್ರಸಾರವಾಗಲಿದೆ.

ಚಿಪ್ಸ್ ಐಐಟಿ ಸಂಸ್ಥೆಯ ಶೋಭ ವಿ.ರಾಮಯ್ಯ ಅವರು ಈ ಕುರಿತು ಮಾಹಿತಿ ನೀಡಿದ್ದು, ಎಸ್‌ಎಸ್‌ಎಲ್‌ಸಿ ಪ್ರತಿ ವಿದ್ಯಾರ್ಥಿಗಳಿಗೆ ಮಹತ್ವದ ಘಟ್ಟ. ಈ ಹಂತದಲ್ಲಿ ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾದರೆ ಉನ್ನತ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಅನುಕೂಲವಾಗಲಿದೆ. ಆದ್ದರಿಂದ ಈ ಬೋಧನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

sslc

ಎಸ್‌ಎಸ್‌ಎಲ್‌ಸಿಯಲ್ಲಿ ಗಣಿತ ಹಾಗೂ ವಿಜ್ಞಾನ ವಿಷಯಗಳು ಕಠಿಣವಾಗಿದ್ದು, ಬಹುತೇಕ ವಿದ್ಯಾರ್ಥಿಗಳು ಈ ವಿಷಯಗಳಲ್ಲಿಯೇ ಅನುತ್ತೀರ್ಣರಾಗುತ್ತಾರೆ. ಅದರಲ್ಲೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಮನೆ ಪಾಠದ ವ್ಯವಸ್ಥೆ ದೊರಕುವುದಿಲ್ಲ. ಆದ್ದರಿಂದ ಈ ವ್ಯವಸ್ಥೆ ಮಾಡಲಾಗಿದೆ ಎಂದರು. [2014-15 ಪರೀಕ್ಷೆ ವೇಳಾಪಟ್ಟಿ ಇಲ್ಲಿದೆ]

ಚಂದನ ವಾಹಿನಿಯಲ್ಲಿ ಪ್ರತಿ ಮಂಗಳವಾರದಿಂದ ಶುಕ್ರವಾರದವರೆಗೆ ರಾತ್ರಿ 7ರಿಂದ 8 ಗಂಟೆಯವರೆಗೆ ಬೋಧನಾ ಕಾರ್ಯಕ್ರಮ ಪ್ರಸಾರವಾಗಲಿದೆ. ಡಿ.2ರಿಂದ ಫೆ.20ರವರೆಗೆ ಒಟ್ಟು ನೂರು ಕಂತುಗಳಲ್ಲಿ ಪ್ರತಿದಿನ ರಾತ್ರಿ 7ರಿಂದ 8ರವರೆಗೆ ಈ ಕಾರ್ಯಕ್ರಮವಿರುತ್ತದೆ.

ಪೋಷಕರು ತಮ್ಮ ಮಕ್ಕಳಿಗೆ ಈ ಕಾರ್ಯಕ್ರಮವನ್ನು ನೋಡಲು ಅನುಕೂಲವಾಗುವಂತೆ ವ್ಯವಸ್ಥೆ ಮಾಡಿಕೊಡಬೇಕು ಎಂದು ಶೋಭಾ ಮನವಿ ಮಾಡಿದ್ದಾರೆ. ನುರಿತ ಉಪನ್ಯಾಸಕರು ಈ ಬೋಧನಾ ಕಾರ್ಯಕ್ರಮದಲ್ಲಿ ಪಾಠ ಮಾಡಲಿದ್ದು, ಹೆಚ್ಚಿನ ಮಾಹಿತಿಗಾಗಿ 080 - 23376200, 9449659074 ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ.

English summary
Chips IIT organization conducting Mathematics and Science class for Karnataka SSLC students on DD Chandana Kannada TV channel. TV live class room between December 2 to Feb 20. Time - 7 to 8 PM. SSLC exams 2015 starts from 30th March.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X