ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಂಎಲ್ಸಿ ಸ್ಥಾನಕ್ಕೆ ಎಂಬಿ ಪಾಟೀಲ್ ಸೋದರ ಸುನಿಲ್ ಸ್ಪರ್ಧೆ

By Mahesh
|
Google Oneindia Kannada News

ಬೆಂಗಳೂರು, ಆಗಸ್ಟ್ 17: ಬಸವನಗೌಡ ಪಾಟೀಲ್ ಯತ್ನಾಳ್ ಅವರಿಂದ ತೆರವಾಗಿರುವ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಮಾಜಿ ಸಚಿವ ಎಂ.ಬಿ.ಪಾಟೀಲ್ ಅವರ ಸೋದರ ಅನಿಲ್ ಪಾಟೀಲ್ ಅವರು ಅಭ್ಯರ್ಥಿಯಾಗಿದ್ದಾರೆ

ಸಚಿವ ಸ್ಥಾನ ವಂಚಿತರಾಗಿ ಕಾಂಗ್ರೆಸ್ ಪಕ್ಷದ ಮೇಲೆ ಮುನಿಸಿಕೊಂಡಿರುವ ಎಂ.ಬಿ.ಪಾಟೀಲ್ ಅವರನ್ನು ಸಮಾಧಾನಪಡಿಸಲು ಸುನಿಲ್ ಪಾಟೀಲ್ ಅವರಿಗೆ ಮೇಲ್ಮನೆಗೆ ಟಿಕೆಟ್ ಕೊಡಲು ಕಾಂಗ್ರೆಸ್ ಮುಂದಾಗಿದೆ

ವಿಧಾನಪರಿಷತ್ ಚುನಾವಣೆ : ಕಾಂಗ್ರೆಸ್‌ ಟಿಕೆಟ್‌ಗಾಗಿ ಲಾಬಿ!ವಿಧಾನಪರಿಷತ್ ಚುನಾವಣೆ : ಕಾಂಗ್ರೆಸ್‌ ಟಿಕೆಟ್‌ಗಾಗಿ ಲಾಬಿ!

ಮಾಜಿ ಸಚಿವ ಎಂ.ಬಿ.ಪಾಟೀಲ್ ಸಹೋದರ ಸುನಿಲ್ ಗೌಡ ಬಿ.ಪಾಟೀಲ, ಮಾಜಿ ಶಾಸಕ ಶರಣಪ್ಪ ಸುಣಗಾರ ಮತ್ತು ಮಲ್ಲಿಕಾರ್ಜುನ ಲೋಣಿ ಅವರ ನಡುವೆ ಪ್ರಬಲ ಪೈಪೋಟಿ ನಡೆದಿತ್ತು. ಸಿ.ಎಸ್.ನಾಡಗೌಡ ಅವರ ಹೆಸರು ಬಲವಾಗಿ ಕೇಳಿ ಬಂದಿತ್ತು.

MB Patil brother Anil Patil lobby for MLC post

ವಿಜಯಪುರ, ಬಾಗಲಕೋಟೆ ಕಾಂಗ್ರೆಸ್ ಮುಖಂಡರು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಿದ್ದರಾಮಯ್ಯ ಮುಂತಾದವರೊಂದಿಗೆ ಸಭೆ ನಡೆಸಿ, ಮನವಿ ಮಾಡಿಕೊಂಡಿದ್ದರು.

ಸ್ಥಳೀಯ ಸಂಸ್ಥೆ ಮೈತ್ರಿ ಇಲ್ಲ : ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಈ ಎರಡೂ ಜಿಲ್ಲೆಗಳಲ್ಲಿ ಜೆಡಿಎಸ್ ಮೈತ್ರಿ ಬಗ್ಗೆಯೂ ಕೂಡ ಚರ್ಚೆ ನಡೆಸಲಾಯಿತು. ಬಿಜಾಪುರ, ಬಾಗಲಕೋಟೆಯಲ್ಲಿ ಜೆಡಿಎಸ್ ಪ್ರಬಲವಾಗಿಲ್ಲದ ಕಾರಣ ಮೈತ್ರಿ ಅಗತ್ಯ ಇಲ್ಲ ಎಂದು ಹಿರಿಯ ಮುಖಂಡರು ಸ್ಪಷ್ಟಪಡಿಸಿದದಾರೆ.

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್ ಏಕಾಂಗಿಯಾಗಿ ಸ್ಪರ್ಧಿಸುವುದು ಎಂಬ ಅಭಿಪ್ರಾಯಕ್ಕೆ ಬರಲಾಯಿತು.

ವಿಜಯಪುರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್‌ಗೆ ಆಯ್ಕೆಯಾಗುವ ವಿಧಾನಪರಿಷತ್‌ ಸದಸ್ಯರ ಚುನಾವಣೆ ಸೆಪ್ಟೆಂಬರ್‌ 6ರಂದು ನಡೆಯಲಿದೆ.

ಈ ಕ್ಷೇತ್ರದಲ್ಲಿ ಪರಿಷತ್‌ ಸದಸ್ಯರಾಗಿದ್ದ ಬಿಜೆಪಿಯ ಬಸನಗೌಡ ಪಾಟೀಲ್‌ ಯತ್ನಾಳ್‌ ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆ ವೇಳೆ ವಿಜಯಪುರ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದರು. ಅವರ ರಾಜಿನಾಮೆಯಿಂದ ಪರಿಷತ್‌ ಸ್ಥಾನ ತೆರವುಗೊಂಡಿತ್ತು. ಈ ಹಿನ್ನೆಲೆಯಲ್ಲಿ ಸೋಮವಾರ ಕೇಂದ್ರ ಚುನಾವಣಾ ಆಯೋಗ ವಿಧಾನಪರಿಷತ್‌ ಸದಸ್ಯತ್ವಕ್ಕೆ ಚುನಾವಣೆ ಘೋಷಿಸಿದೆ. ಆಗಸ್ಟ್ 13ರಂದು ಅಧಿಸೂಚನೆ ಹೊರಬೀಳಲಿದೆ.

English summary
MB Patil brother Sunil Patil candidate for MLC post which is vacant due to Basanagowda Patil Yatnal become MLA from Vijayapura assembly constituency. MLC election is due to September 06.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X