Industry: ಕೆಎಸ್ಐಐಡಿಸಿ 68,000,000 ಕೋಟಿ ರೂ. ಲಾಭಾಂಶ ಸರ್ಕಾರಕ್ಕೆ ಹಸ್ತಾಂತರ
ಬೆಂಗಳೂರು, ಮೇ 29: ಕರ್ನಾಟಕ ಸರ್ಕಾರ ಕೈಗಾರಿಕೆಗೆ ಸಂಬಂಧಿಸಿಂತೆ 1700 ಕೋಟಿ ರೂಪಾಯಿಗೂ ಅಧಿಕ ಬಂಡವಾಳ ಹೂಡಿಕೆಯ 60ಕ್ಕೂ ಹೆಚ್ಚು ಯೋಜನೆಗಳಿಗೆ ಅನುಮೋದನೆ ನೀಡಿದ ಬೆನ್ನಲ್ಲೆ, ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮದ (KSIIDC) ಲಾಭಾಂಶವನ್ನು ಸರ್ಕಾರಕ್ಕೆ ಹಸ್ತಾಂತರಿಸಲಾಯಿತು. ಒಟ್ಟು 68,69,00,000 ಕೋಟಿ ರೂಪಾಯಿ ಲಾಭಾಂಶ ಚೆಕ್ ಅನ್ನು ಮುಖ್ಯಮಂತ್ರಿಗಳಿಗೆ ನೀಡಲಾಯಿತು.
ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿ ಸಭೆಯಲ್ಲಿ ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮದ ಸಾಮಾನ್ಯ ಲಾಭಾಂಶ 68.69 ಕೋಟಿ ರೂಪಾಯಿ ಮಾತ್ರವಲ್ಲದೇ ವಿಶೇಷ ಲಾಭಾಂಶ 17,21,56,839 ಕೋಟಿ ರೂ. ಮೊತ್ತದ ಚೆಕ್ ಅನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಹಸ್ತಾಂತರಿಸಿದರು. ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 3,00,00,000 ಕೋಟಿ ರೂಪಾಯಿ ಮೊತ್ತದ ಚೆಕ್ ಸಹ ನೀಡಲಾಯಿತು.

ಚೆಕ್ ಸ್ವೀಕರಿಸಿ ಮಾತನಾಡಿದ ಸಿದ್ದರಾಮಯ್ಯ ಅವರು, ಸಾರ್ವಜನಿಕ ವಲಯದ ಉದ್ಯಮಗಳು ಲಾಭದಾಯಕವಾಗಿ ನಡೆಯುವುದು ಒಳ್ಳೆಯ ಬೆಳವಣಿಗೆಯಾಗಿದೆ. ಲಾಭಾಂಶದ ಹಂಚಿಕೆಯು ಸರ್ಕಾರದ ಕೈಗಾರಿಕಾ ನಿಯಮಗಳಿಗೆ ತಕ್ಕಂತೆ ಇದ್ದು, ಇದರಿಂದ ರಚನಾತ್ಮಕ ಉಪಕ್ರಮಗಳನ್ನು ಕೈಗೊಳ್ಳಲು ಬಲ ಬರುತ್ತದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಕಳೆದ ಎರಡು ವರ್ಷಗಳಲ್ಲಿ KSDL ಎಂಎಸ್ಐಎಲ್ ಸೇರಿದಂತೆ ಹಲವು ಉದ್ಯಮಗಳು ಉತ್ಪಾದನೆ. ವಹಿವಾಟು ಮತ್ತು ಲಾಭದಲ್ಲಿ ಸಾರ್ವಕಾಲಿಕ ದಾಖಲೆ ಮಾಡಿವೆ. ಕರ್ನಾಟಕದಲ್ಲಿ ನಮ್ಮ ಸರ್ಕಾರ ಹೊಸ ಕೈಗಾರಿಕಾ ನೀತಿಯನ್ನು ಜಾರಿಗೆ ತಂದಿದ್ದು, ರಫ್ತಿಗೆ ಉತ್ತೇಜನ ನೀಡಲಾಗಿದೆ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಇಂಧನ ಸಚಿವ ಕೆ ಜೆ ಜಾರ್ಜ್, ಸರಕಾರದ ಕಾರ್ಯದರ್ಶಿ ಶಾಲಿನಿ ರಜನೀಶ್, ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಕಾರ್ಯದರ್ಶಿ ಎನ್ ಮಂಜುಳಾ, ಕೆಎಸ್ಐಐಡಿಸಿ ವ್ಯವಸ್ಥಾಪಕ ನಿರ್ದೇಶಕಿ ಖುಷ್ಬೂ ಗೋಯಲ್ ಸೇರಿದಂತೆ ಹಲವಾರು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
04 ಜಿಲ್ಲೆಗಳಲ್ಲಿ ಬೃಹತ್ ಬಂಡವಾಳ ಹೂಡಿಕೆ
ಇನ್ನೂ ಈ ಸಭೆಯಲ್ಲಿ 60ಕ್ಕೂ ಹೆಚ್ಚು ಯೋಜನೆಗಳಿಗೆ ಸರ್ಕಾರ ಅನುಮೋದನೆ ನೀಡಿದೆ. ಇದರಿಂದ ರಾಜ್ಯದ ನಾಲ್ಕು ಜಿಲ್ಲೆಗಳಿಗೆ 1700 ಕೋಟಿ ರೂಪಾಯಿಗೂ ಹೆಚ್ಚಿನ ಬಂಡವಾಳ ಹೂಡಿಕೆ ಹರಿದು ಬರಲಿದೆ. ಸಾವಿರಾರು ಉದ್ಯೋಗ ಸೃಷ್ಟಿಯಾಗಲಿದೆ. ಬೆಂಗಳೂರು ಗ್ರಾಮಾಂತರ, ತಮಕೂರು, ಕೋಲಾರ ಮತ್ತು ದಕ್ಷಿಣ ಕನ್ನಡ ಜಿಲ್ಲೆ ಸೇರಿ ಒಟ್ಟು ನಾಲ್ಕು ಜಿಲ್ಲೆಗಳಲ್ಲಿ ಕೋಟಿ ಕೋಟಿ ರೂಪಾಯಿ ಬಂಡವಾಳ ಹರಿದು ಬರಲಿದೆ. ಸಾಕಷ್ಟು ಕೈಗಾರಿಕೆ, ಹೊಸ ಘಟಕ, ಕಾರ್ಖಾನೆಗಳು ಇಲ್ಲಿ ನಿರ್ಮಿಸಲಿವೆ. ಅದಕ್ಕಾಗಿ ವಿವಿಧ ಕಂಪನಿಗಳು ಜೊತೆ ಒಪ್ಪಂದ ನಡೆದಿವೆ.












Click it and Unblock the Notifications