ಕರ್ನಾಟಕ ಪೊಲೀಸರಿಗೆ ಸಿಹಿ ಸುದ್ದಿ ಕೊಟ್ಟ ಕುಮಾರಸ್ವಾಮಿ ಸರ್ಕಾರ

Recommended Video

      ಕರ್ನಾಟಕ ಪೊಲೀಸರಿಗೆ ಶುಭ ಸುದ್ದಿ ನೀಡಿದ ಎಚ್ ಡಿ ಕುಮಾರಸ್ವಾಮಿ ಸರ್ಕಾರ

      ಬೆಂಗಳೂರು, ಜುಲೈ 16: ಪೊಲೀಸ್ ಇಲಾಖೆ, ಕಾರಾಗೃಹಗಳ ಇಲಾಖೆ ಹಾಗೂ ಅಗ್ನಿಶಾಮಕ ಇಲಾಖೆಗಳ ವೇತನ ಶ್ರೇಣಿ ಸಂಬಂಧಿಸಿದಂತೆ ಔರಾದ್ಕರ್ ವರದಿಗೆ ಅನುಗುಣವಾಗಿ ಆರ್ಥಿಕ ಇಲಾಖೆ ಸಲ್ಲಿಸಿದ್ದ ವಿಸ್ತೃತ ಪ್ರಸ್ತಾವನೆಗೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನೇತೃತ್ವದ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ.

      ಗೃಹ ಸಚಿವ ಎಂ.ಬಿ.ಪಾಟೀಲ್ ಅವರು ಈ ಬಗ್ಗೆ ಪ್ರತಿಕ್ರಿಯಿಸಿ, 'ಔರಾದ್ಕರ್ ವರದಿಯ ಪ್ರಕಾರ ವೇತನ ಹೆಚ್ಚಳದಿಂದ 600 ಕೋಟಿ ಹೊರೆಯಾಗಲಿದೆ. ಈ ಬಗ್ಗೆ ಹಣಕಾಸು ಮತ್ತು ಪೊಲೀಸ್ ಇಲಾಖೆ ಸಭೆ ನಡೆಸಲಾಗಿದ್ದು, ಮುಖ್ಯಮಂತ್ರಿಗಳು ಈ ಕುರಿತು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ' ಎಂದರು.

      MB Patil tweets Good News to Police implementing Auradkar Committee Report

      ಪೊಲೀಸರು ವೇತನ ಹೆಚ್ಚಳ ಮಾಡುವಂತೆ ಪ್ರತಿಭಟನೆ ನಡೆಸಲು ಮುಂದಾದಾಗ ಕರ್ನಾಟಕ ಸರ್ಕಾರ ಐಪಿಎಸ್ ಅಧಿಕಾರಿ ರಾಘವೇಂದ್ರ ಔರಾದ್ಕರ್ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿ ವರದಿ ನೀಡುವಂತೆ ಸೂಚಿಸಿತ್ತು. 2016ರ ಸೆಪ್ಟೆಂಬರ್ 27ರಂದು ವರದಿ ಸರ್ಕಾರಕ್ಕೆ ಸಲ್ಲಿಕೆಯಾಗಿದೆ. ಆದರೆ, ಅದು ಜಾರಿಗೆ ಬಂದಿರಲಿಲ್ಲ.

      ಎಂ.ಬಿ ಪಾಟೀಲ್ ಅವರ ಟ್ವೀಟ್ : "ರಾಜ್ಯ ಪೊಲೀಸರ ದಶಕದ ಬೇಡಿಕೆಯಾಗಿದ್ದ ಔರಾದ್‍ಕರ್ ಸಮಿತಿಯನ್ನು ಪ್ರಸ್ತುತ ಸರ್ಕಾರದಲ್ಲಿ ನಾವು ಜಾರಿ ಮಾಡಿದ್ದೇವೆ. ಇದು ಸಿಬ್ಬಂದಿಯ ಕಲ್ಯಾಣಕ್ಕೆ ನಮಗಿರುವ ಬದ್ಧತೆಯನ್ನು ತೋರಿಸುತ್ತದೆ. ಸಮಸ್ತ ಪೊಲೀಸ್ ಸಿಬ್ಬಂದಿಗೆ ನನ್ನ ಅಭಿನಂದನೆಗಳು. ನಾನು ಎಂದೆಂದೂ ಈ ವರದಿಯ ಅನುಷ್ಠಾನಕ್ಕೆ ಬದ್ಧನಾಗಿದ್ದೆ, ವರದಿಯ ಜಾರಿ ನನಗೆ ಅತ್ಯಂತ ಹರ್ಷ ತಂದಿದೆ"

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+